ವೇದ ಸುಳ್ಳಾದರೂ ಗಾದೆ ಸುಳ್ಳಲ್ಲ
➤ ಹಿತ್ತಲ ಗಿಡ ಮದ್ದಲ್ಲ.
➤ ಮಾಡಿದ್ದುಣ್ಣೋ ಮಹರಾಯ.
➤ ಕೈ ಕೆಸರಾದರೆ ಬಾಯಿ ಮೊಸರು.
➤ ಹಾಸಿಗೆ ಇದ್ದಷ್ತು ಕಾಲು ಚಾಚು.
➤ ಅಂಗೈ ಹುಣ್ಣಿಗೆ ಕನ್ನಡಿ ಬೇಕೆ.
➤ ಧರ್ಮಕ್ಕೆ ದಟ್ಟಿ ಕೊಟ್ಟರೆ ಹಿತ್ತಲಲ್ಲಿ ಮಣ ಹಾಕಿದರಂತೆ.
➤ ಎತ್ತೆಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಳೆದರಂತೆ .
➤ ಮನೇಲಿ ಇಲಿ, ಬೀದೀಲಿ ಹುಲಿ.
➤ ಕುಂಬಳಕಾಯಿ ಕಳ್ಳ ಅಂದರೆ ಹೆಗಲು ಮುಟ್ಟಿ ನೋದಿಕೊಂಡನಂತೆ.
➤ ಕಾರ್ಯಾವಾಸಿ ಕತ್ತೆಕಾಲು ಹಿಡಿ.
➤ ಹೊಟ್ಟೆಗೆ ಹಿಟ್ಟಿಲ್ಲ, ಜುಟ್ಟಿಗೆ ಮಲ್ಲಿಗೆ ಹೂವು.
➤ ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬಾರದು.
➤ ಕಪ್ಪೆನ ತಕ್ಕಡಿಲಿ ಹಾಕಿದ ಹಾಗೆ.
➤ ಅಡ್ಡಗೋಡೆಮೇಲೆ ದೀಪ ಇಟ್ಟ ಹಾಗೆ.
➤ ಅಕ್ಕಿ ಮೇಲೆ ಆಸೆ, ನೆಂಟರ ರ ಮೇಲೂ ಪ್ರೀತಿ.ಅಜ್ಜಿಗೆ ಅರಿವೆ ಚಿಂತೆ , ಮಗಳಿಗೆ ಗಂಡನ ಚಿಂತೆ.
➤ ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧರಾತ್ರೀಲಿ ಕೊಡೆ ಹಿಡಿದನಂತೆ.
➤ ಅತ್ತೆಗೊಂದು ಕಾಲ ಸೊಸೆಗೊಂದು ಕಾಲ.
➤ ಬೆಕ್ಕು ಕಣ್ಣುಮುಚ್ಚಿ ಹಾಲು ಕುಡಿದ ಹಾಗೆ.
➤ ಬೇಲೀನೆ ಎದ್ದು ಹೊಲ ಮೆಯ್ದಂತೆ .
➤ ಅಂಬಲಿ ಕುಡಿಯುವವನಿಗೆ ಮೀಸೆ ತಿಕ್ಕುವನೊಬ್ಬ.
➤ ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ.
➤ ಚೇಳಿಗೆ ಪಾರುಪತ್ಯ ಕೊಟ್ಟ ಹಾಗೆ.
➤ ಚಿಂತೆ ಇಲ್ಲದವನಿಗೆ ಸಂತೆಯಲ್ಲೂ ನಿದ್ದೆ.
➤ ದೇವರು ವರ ಕೊಟ್ರು ಪೂಜಾರಿ ಕೊಡ.
➤ ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ.
➤ ಎತ್ತು ಏರಿಗೆಳೆಯಿತು, ಕೋಣ ನೀರಿಗೆಳೆಯಿತು.
➤ ಎತ್ತು ಈಯಿತು ಅಂದರೆ ಕೊಟ್ಟಿಗೆಗೆ ಕಟ್ಟು ಎಂದರಂತೆ .
➤ ಗಂಡ ಹೆಂಡಿರ ಜಗಳ ಉಂಡು ಮಲಗೋ ತನಕ.
➤ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ.
➤ ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ ?
➤ ಗೆದ್ದೆತ್ತಿನ ಬಾಲ ಹಿಡಿದ ಹಾಗೆ.
➤ ಗಣೇಶನನ್ನು ಮಾಡಲು ಹೋಗಿ ಅವರಪ್ಪನನ್ನು ಮಾಡಿದನ0ತೆ.
➤ ಭಂಗಿ ದೇವರಿಗೆ ಹೆಂಡುಗುಡುಕ ಪೂಜಾರಿ.
➤ ಕಾಸಿಗೆ ತಕ್ಕ ಕಜ್ಜಾಯ.
➤ ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು.
➤ ಕೂಸು ಹುಟ್ಟುವ ಮುಂಚೆ ಕುಲಾವಿ.
➤ ಅವರು ಚಾಪೆ ಕೆಳಗೆ ತೂರಿದರೆ ನೀನು ರಂಗೋಲಿ ಕೆಳಗೆ ತೂರು.
➤ ಇಬ್ಬರ ಜಗಳ ಮೂರನೆಯವನಿಗೆ ಲಾಭ.
➤ ವೈದ್ಯರ ಹತ್ತಿರ ವಕೀಲರ ಹತ್ತಿರ ಸುಳ್ಳು ಹೇಳಬೇಡ.
➤ ತಾನು ಮಾಡುವುದು ಉತ್ತಮ, ಮಗ ಮಾಡುವುದು ಮಧ್ಯಮ, ಆಳು ಮಾಡುವುದು ಹಾಳು.
➤ ಉಚ್ಚೇಲಿ ಮೀನು ಹಿಡಿಯೋ ಜಾತಿ.
➤ ಹುಟ್ಟುತ್ತಾ ಹುಟ್ಟುತ್ತಾ ಅಣ್ಣ ತಮ್ಮಂದಿರು, ಬೆಳಿತಾ ಬೆಳಿತಾ ದಾಯಾದಿಗಳು.
➤ ಮಗೂನೂ ಚಿವುಟಿ ತೊಟ್ಟಿಲು ತೂಗಿದ ಹಾಗೆ.
➤ ನದೀನೆ ನೋಡದೆ ಇರುವನು ಸಮುದ್ರವರ್ಣನೆ ಮಾಡಿದ ಹಾಗೆ.
➤ ಅಂಗೈಯಲ್ಲಿ ಬೆಣ್ಣೆ ಇಟ್ಕೊಂಡು ಊರೆಲ್ಲಾ ತುಪ್ಪಕ್ಕೆ ಅಲೆದಾಡಿದರಂತೆ
➤ ಶುಭ ನುಡಿಯೋ ಸೋಮ ಅಂದರೆ ಗೂಬೆ ಕಾಣ್ತಿದ್ಯಲ್ಲೋ ಮಾಮ ಅಂದ ಹಾಗೆ.
➤ ನಮ್ಮ ದೇವರ ಸತ್ಯ ನಮಗೆ ಗೊತ್ತಿಲ್ಲವೇ ?
➤ ಚೇಳಿಗೆ ಪಾರುಪತ್ಯ ಕೊಟ್ಟ ಹಾಗೆ.
➤ ಕಜ್ಜಿ ಹೋದರೂ ಕಡಿತ ಹೋಗಲಿಲ್ಲ.
➤ ಮಾತು ಬೆಳ್ಳಿ, ಮೌನ ಬಂಗಾರ
➤ ಎಲ್ಲಾರ ಮನೆ ದೋಸೆನೂ ತೂತೆ.
➤ ಒಲ್ಲದ ಗಂಡನಿಗೆ ಮೊಸರಲ್ಲೂ ಕಲ್ಲು.
➤ ಅಡುಗೆ ಮಾಡಿದವಳಿಗಿಂತ ಬಡಿಸಿದವಲೇ ಮೇಲು.
➤ ತಾಯಿಯಂತೆ ಮಗಳು ನೂಲಿನಂತೆ ಸೀರೆ.
➤ ಅನುಕೂಲ ಸಿಂಧು , ಅಭಾವ ವೈರಾಗ್ಯ.
➤ ಕೊಚ್ಚೆ ಮೇಲೆ ಕಲ್ಲು ಹಾಕಿದ ಹಾಗೆ.
➤ ತಮ್ಮ ಮನೇಲಿ ಹಗ್ಗಣ ಸತ್ತಿದ್ದರೂ ಬೇರೆ ಮನೆಯ ಸತ್ತ ನೊಣದ ಕಡೆ ಬೆಟ್ಟು ಮಾಡಿದ ಹಾಗೆ.
➤ ಹುಣಿಸೆ ಮುಪ್ಪಾದರೂ ಹುಳಿ ಮುಪ್ಪೇ ?
➤ ಮನೆಗೆ ಮಾರಿ, ಊರಿಗೆ ಉಪಕಾರಿ.
➤ ಉಗುರಿನಲ್ಲಿ ಹೋಗೋ ಚಿಗುರಿಗೆ ಕೋಡಾಲಿ ಏಕೆ ?
➤ ಅಲ್ಪರ ಸಂಗ ಅಭಿಮಾನ ಭಂಗ .
➤ ಸಗಣಿಯವನ ಸ್ನೇಹಕ್ಕಿಂತ ಗಂಧದವನ ಜೊತೆ ಗುದ್ದಾಟ ಮೇಲು.
➤ ಮಾಡಿದವರ ಪಾಪ ಆಡಿದವರ ಬಾಯಲ್ಲಿ.
➤ ನಾಯಿ ಬೊಗಳಿದರೆ ದೇವಲೋಕ ಹಾಳಾಗುತ್ಯೇ ?
➤ ಗೋರ್ಕಲ್ಲ ಮೇಲೆ ನೀರು ಸುರಿದಂತೆ
➤ ಆಕಾಶ ನೋಡೋದಕ್ಕೆ ನೂಕುನುಗ್ಗಲೇ ?
➤ ಗಾಳಿ ಬಂದಾಗ ತೂರಿಕೋ.
➤ ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ.
➤ ಜಾಣನಿಗೆ ಮಾತಿನ ಪೆಟ್ಟು, ದಡ್ಡನಿಗೆ ದೊಣ್ಣೆ ಪೆಟ್ಟು.
➤ ಬಿರಿಯಾ ಉಂಡ ಬ್ರಾಹ್ಮಣ ಭಿಕ್ಷೆ ಬೇಡಿದ.
➤ ದುಡ್ಡೇ ದೊಡ್ಡಪ್ಪ.
➤ ಬರಗಾಲದಲ್ಲಿ ಅಧಿಕ ಮಾಸ.
➤ ಹೊಳೆ ನೀರಿಗೆ ದೊಣ್ಣೆನಾಯಕನ ಅಪ್ಪಣೆ ಬೇಕೆ ?
➤ ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡ ಹಾಗೆ
➤ ಕುರುಡರ ರಾಜ್ಯದಲ್ಲಿ ಒಕ್ಕಣ್ಣನೇ ರಾಜ.
➤ ಮಂತ್ರಕ್ಕಿಂತ ಉಗುಳೇ ಜಾಸ್ತಿ.
➤ ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ.
➤ ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ.
➤ ಕಂತೆಗೆ ತಕ್ಕ ಬೊಂತೆ .
➤ ಪುರಾಣ ಹೇಳೋಕ್ಕೆ, ಬದನೇಕಾಯಿ ತಿನ್ನೋಕ್ಕೆ.
➤ ಅಂಕೆ ಇಲ್ಲದ ಕಪಿ ಲಂಕೆ ಸುಟ್ಟಿತು.
➤ ಓದಿ ಓದಿ ಮರುಳಾದ ಕೋಚಂಭಟ್ಟ .
➤ ಸತ್ಯಕ್ಕೆ ಸಾವಿಲ್ಲ, ಸುಳ್ಳಿಗೆ ಸುಖವಿಲ್ಲ.
➤ ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆಯೇ ಮೇಲು.
➤ ಬೆಟ್ಟ ಅಗೆದು ಇಲಿ ಹಿಡಿದ ಹಾಗೆ.
➤ ಓದುವಾಗ ಓದು, ಆಡುವಾಗ ಆಡು.
➤ ಮೇಲೆ ಬಿದ್ದ ಸೂಳೆ ಮೂರು ಕಾಸಿಗೂ ಬೇಡ.
➤ ಸಂಸಾರ ಗುಟ್ಟು, ವ್ಯಾಧಿ ರಟ್ಟು.
➤ ಗಿಣಿ ಸಾಕಿ ಗಿಡುಗನ ಕೈಗೆ ಕೊಟ್ಟರಂತೆ .
➤ ಕೊಟ್ಟವನು ಕೋಡಂಗಿ , ಇಸ್ಕೊಂಡೋನು ಈರಭದ್ರ.
➤ ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ.
➤ ಮುಖ ನೋಡಿ ಮಣೆ ಹಾಕು.
➤ ಕುರಿ ಕಾಯೋದಕ್ಕೆ ತೋಳನನ್ನು ಕಳಿಸಿದರಂತೆ.
➤ ಮಂತ್ರಕ್ಕೆ ಮಾವಿನಕಾಯಿ ಉದುರತ್ಯೇ ?
➤ ತುಂಬಿದ ಕೊಡ ತುಳುಕುವುದಿಲ್ಲ.
➤ ಉಪಿಗಿಂತ ರುಚಿಯಿಲ್ಲ ತಾಯಿಗಿಂತ ದೇವರಿಲ್ಲ.
➤ ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯೇ ?
➤ ಇರಲಾರದೆ ಇರುವೆ ಬಿಟ್ಟುಕೊಂಡ ಹಾಗೆ.
➤ ಎಂಜಲು ಕೈಯಲ್ಲಿ ಕಾಗೆ ಓಡಿಸದ ಬುದ್ಧಿ.
➤ ಕೈ ತೋರಿಸಿ ಅವಲಕ್ಷಣ ಅನ್ನಿಸಿಕೊಂಡರು.
➤ ದುಡಿಮೆಯೇ ದುಡ್ಡನ ತಾಯಿ.
➤ ಇಲಿ ಬಂತು ಅಂದರೆ ಹುಲಿ ಬಂತು ಎಂದರು .
➤ ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣಸಂಕಟ
➤ ಊರಿಗೆ ಬಂದವಳು ನೀರಿಗೆ ಬರದೇ ಇರುತ್ತಾಳೆಯೇ ?
➤ ಇರುಳು ಕಂಡ ಭಾವೀಲಿ ಹಗಲು ಬಿದ್ದರಂತೆ
➤ ಕೋತಿ ಕೈಯಲ್ಲಿ ಮಾಣಿಕ್ಯ ಕೊಟ್ಟ ಹಾಗೆ.
➤ ಶಿವಪೂಜೇಲಿ ಕರಡಿ ಬಿಟ್ಟ ಹಾಗೆ.
➤ ರೋಗಿ ಬಯಸಿದ್ದು ಹಾಲು-ಅನ್ನ, ವೈದ್ಯ ಕೊಟ್ಟಿದ್ದು ಹಾಲು-ಅನ್ನ.
➤ ಮನೆ ಕಟ್ಟಿ ನೋಡು, ಮದುವೆ ಮಾಡಿ ನೋಡು.
➤ ಹೊರಗೆ ಥಳಕು ಒಳಗೆ ಹುಳಕು.
➤ ಸಂಕಟ ಬಂದಾಗ ವೆಂಕಟರಮಣ
➤ ಯಥಾ ರಾಜ ತಥಾ ಪ್ರಜಾ.
➤ ಕೂತು ತಿನ್ನುವವನಿಗೆ ಕುಡಿಕೆ ಹಣ ಸಾಲದು.
➤ ಬೆರಳು ತೋರಿಸಿದರೆ ಹಸ್ತ ನುಂಗಿದಂತೆ .
➤ ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದರಂತೆ .
➤ ಈಚಲ ಮರದ ಕೆಳಗೆ ಕುಳಿತು ಮಜ್ಜಿಗೆ ಕುಡಿದ ಹಾಗೆ.
➤ ಉಪ್ಪು ತಿಂದ ಮನೆಗೆ ಎರಡು ಬಗೆಯ ಬೇಡ.
➤ ಬಡವನ ಕೋಪ ದವಡೆಗೆ ಮೂಲ.
➤ ಒಪ್ಪೋತ್ತುಂಡವ ಯೋಗಿ, ಎರಡೊತ್ತುತಂದವ ಭೋಗಿ, ಮೂರೊತ್ತುಂಡವ ರೋಗಿ, ನಾಲ್ಕೊತ್ತುಂಡವನ ಹೊತ್ಕೊಂಡ್ಹೋಗಿ.
➤ ಬಲ್ಲವನೇ ಬಲ್ಲ ಬೆಲ್ಲದ ರುಚಿಯ.
➤ ಕತ್ತೆಗೇನು ಗೊತ್ತು ಕಸ್ತೂರಿ ಪರಿಮಳ.
➤ ಶರಣರ ಬದುಕು ಅವರ ಮರಣದಲ್ಲಿ ನೋಡು.
➤ ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದ ಹಾಗೆ.
➤ ಕಳ್ಳನ ಮನಸ್ಸು ಹುಳಿ-ಹುಳಿಗೆ.
➤ ಕೋತಿಗೆ ಹೆಂಡ ಕುಡಿಸಿದ ಹಾಗೆ.
➤ ಹಾವೂ ಸಾಯಬೇಕು, ಕೋಲೂ ಮುರಿಯಬಾರದು.
➤ ಹಾಲಿನಲ್ಲಿ ಹುಳಿ ಹಿಂಡಿದಂತೆ .
➤ ಮಳ್ಳಿ ಮಳ್ಳಿ ಮಂಚಕ್ಕೆ ಎಷ್ತು ಕಾಲು ಎಂದರೆ , ಮೂರು ಮತ್ತೊಂದು ಅಂದಳಂತೆ .
➤ ಮೂರ್ತಿ ಚಿಕ್ಕದಾದರು ಕೀರ್ತಿ ದೊಡ್ಡದು.
➤ ರಾತ್ರಿಯೆಲ್ಲಾ ರಾಮಾಯಣ ಕೇಳಿ, ಬೆಳಗಾಗೆದ್ದು ರಾಮನಿಗೂ ಸೀತೆಗೂ ಏನು ಸಂಬಂಧ ಅಂದ ಹಾಗೆ.
➤ ನಾರಿ ಮುನಿದರೆ ಮಾರಿ.
➤ ಕೆಟ್ಟ ಮೇಲೆ ಬುದ್ಧಿ ಬಂತು, ಅಟ್ಟ ಮೇಲೆ ಒಲೆ ಉರಿಯಿತು.
➤ ಬೆಂಕಿಯಿಲ್ಲದೆ ಹೊಗೆಯಾಡುವುದಿಲ್ಲ.
➤ ಪಾಪಿ ಸಮುದ್ರ ಹೊಕ್ಕಿದರೂ ಮೊಳಕಾಲುದ್ದ ನೀರು.
➤ ಹರೆಯದಲ್ಲಿ ಹಂದಿ ಕೂಡ ಚೆನ್ನಾಗಿರುತ್ತೆ.
➤ ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಯ್ತು.
➤ ಆರು ಕೊಟ್ಟರೆ ಅತ್ತೆ ಕಡೆ, ಮೂರು ಕೊಟ್ಟರೆ ಸೊಸೆ ಕಡೆ.
➤ ಪ್ರತ್ಯಕ್ಷವಾಗಿ ಕಂಡರೂ ಪ್ರಮಾಣಿಸಿ ನೋಡು.
➤ ಬೆಳ್ಳಗಿರುವುದೆಲ್ಲಾ ಹಾಲಲ್ಲ.
➤ ಹೊಸ ವೈದ್ಯನಿಗಿಂತ ಹಳೇ ರೋಗೀನೇ ಮೇಲು.
➤ ಬಡವರ ಮನೆ ಊಟ ಚೆನ್ನ, ಶ್ರೀಮಂತರ ಮನೆ ನೋಟ ಚೆನ್ನ.
➤ ತೋಟ ಶೃಂಗಾರ , ಒಳಗೆ ಗೋಣಿ ಸೊಪ್ಪು.
➤ ಬಾಯಿ ಬಿಟ್ಟರೆ ಬಣ್ಣಗೇಡು.
➤ ಸಂಕಟ ಬಂದಾಗ ವೆಂಕಟರಮಣ .
➤ ಇದ್ದಿದ್ದು ಇದ್ದ ಹಾಗೆ ಹೇಳಿದ್ರೆ ಎದ್ದು ಬಂದು ಎದೆಗೆ ಒದ್ದನಂತೆ
➤ ಒಕ್ಕಣ್ಣನ ರಾಜ್ಯದಲ್ಲಿ ಒಂದು ಕಣ್ಣು ಮುಚ್ಚಿಕೊಂಡು ನಡಿ.
➤ ಸೀರೆ ಗಂಟು ಬಿಚ್ಚೋವಾಗ ದಾರದ ನಂಟು ಯಾರಿಗೆ ಬೇಕು.
➤ ಮನೆ ತುಂಬಾ ಮುತ್ತಿದ್ದರೆ ತಿಕಕ್ಕೂ ಪೋಣಿಸಿಕೊಂಡರಂತೆ .
➤ ಕುಡಿಯೋ ನೀರಿನಲ್ಲಿ ಕೈಯಾಡಿಸಿದ ಹಾಗೆ.
➤ ಅಟ್ಟದ ಮೇಲಿಂದ ಬಿದ್ದವನಿಗೆ ದಡಿಗೆ ತೊಗೊಡು ಹೇರಿದಂತೆ
➤ ಮೀಸೆ ಬಂದವನಿಗೆ ದೇಶ ಕಾಣಲ್ಲ
➤ ಊರು ಸುಟ್ಟರೂ ಹನುಮಂತರಾಯ ಹೊರಗೆ.
➤ ಆಕಳು ಕಪ್ಪಾದರೆ ಹಾಲು ಕಪ್ಪೆ.
➤ ಕಬ್ಬು ಡೊಂಕಾದರೆ ಸಿಹಿ ಡೊಂಕೇ .
➤ ಹತ್ತಾರು ಜನ ಓಡಾಡೋ ಕಡೇಲಿ ಹುಲ್ಲು ಬೆಳೆಯೋಲ್ಲ.
➤ ಅಪ್ಪ ಹಾಕಿದ ಆಲದ ಮರಕ್ಕೆ ನೇಣು ಹಾಕಿಕೊಂಡಂತೆ
➤ ಕೋಣನ ಮುಂದೆ ಕಿನ್ನರಿ ಬಾರಿಸಿದ ಹಾಗೆ.
➤ ನರಿ ಕೂಗು ಗಿರಿ ಮುಟ್ಟುತ್ಯೇ ?
➤ ಅತ್ತೆ ಮೇಲಿನ ಕೋಪ ಕೊತ್ತಿ ಮೇಲೆ.
➤ ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತೆ.
➤ ಹೌದಪ್ಪನ ಚಾವಡಿಯಲ್ಲಿ ಅಲ್ಲಪ್ಪನನ್ನು ಕೇಳುವವರಾರು.
➤ ತಂಗನ ಮುಂದೆ ಸಿಂಗವೇ? ಸಿಂಗನ ಮುಂದೆ ಮಂಗನೇ ?
➤ ಕಾಸಿದ್ದರೆ ಕೈಲಾಸ.
➤ ಕಂಕುಳದಲಿ ದೊಣ್ಣೆ, ಕೈಯಲ್ಲಿ ಶರಣಾರ್ತಿ.
➤ ಕೊನೆಯ ಕೂಸು ಕೊಳೆಯಿತು, ಒನೆಯ ಕೂಸು ಬೆಳೆಯಿತು.
➤ ಕೆಲಸವಿಲ್ಲದ ಕುಂಬಾರ ಮಗನ ಮುಕಳಿ ಕೆತ್ತಿದನಂತ .
➤ ಆರಕ್ಕೆ ಹೆಚ್ಚಿಲ್ಲ, ಮೂರಕ್ಕೆ ಕಮ್ಮಿಯಿಲ್ಲ.
➤ ಕಳ್ಳನ ಹೆಂಡತಿ ಎಂದಿದ್ದರೂ ಮುಂಡೆ .
➤ ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ.
➤ ಹೂವಿನ ಜೊತೆ ದಾರ ಮುಡಿಯೇರಿತು.
➤ ಮಳೆ ಹುಯ್ದರೆ ಕೇಡಲ್ಲ, ಮಗ ಉಂಡರೆ ಕೇಡಲ್ಲ.
➤ ಐದು ಬೆರಳು ಒಂದೇ ಸಮ ಇದುವುದಿಲ್ಲ.
➤ ಕೋಪದಲ್ಲಿ ಕೊಯ್ದ ಮೂಗು ಶಾಂತವಾದ ಮೇಲೆ ಬರುವುದಿಲ್ಲ.
➤ ಕುರಿ ಕೊಬ್ಬಿದಷ್ಟು ಕುರುಬನಿಗೇ ಲಾಭ.
➤ ದೀಪದ ಕೆಳಗೆ ಯಾವತ್ತೂ ಕತ್ತಲೆ.
➤ ತಮ್ಮ ಕೋಳಿ ಕೂಗಿದ್ದರಿಂದಲೇ ಬೆಳಗಾಯ್ತು ಎಂದುಕೊಂಡರು
➤ ಅತ್ತ ದರಿ, ಇತ್ತ ಪುಲಿ.
➤ ಬಿಸಿ ತುಪ್ಪ, ನುಂಗೋಕೂ ಆಗೋಲ್ಲ, ಉಗುಳೋಕ್ಕೂ ಆಗೋಲ್ಲ.
➤ ಆಪತ್ತಿಗಾದವನೇ ನೆಂಟ .
➤ ಶಂಖದಿಂದ ಬಂದರೇನೇ ತೀರ್ಥ.
➤ ಹನಿಹನಿಗೂಡಿದರೆ ಹಳ್ಳ, ತೆನೆತೆನೆಗೂಡಿದರೆ ಬಳ್ಳ.
➤ ಎಲ್ಲಾ ಜಾಣ, ತುಸು ಕೋಣ.
➤ ಇಟ್ಟುಕೊಂಡವಳು ಇರೋ ತನಕ, ಕಟ್ಟಿಕೊಂಡವಳು ಕೊನೇ ತನಕ.
➤ ಮೂಗಿಗಿಂತ ಮೂಗುತ್ತಿ ಭಾರ.
➤ ನವಿಲನ್ನು ನೋಡಿ ಕೆಂಭೂತ ಪುಕ್ಕ ಕೆದರಿದಂತೆ .
➤ ಬೀದೀಲಿ ಹೋಗ್ತಿದ್ದ ಮಾರಿಯನ್ನು ಕರೆದು ಮನೆಗೆ ಸೇರಿಸಿಕೊಂಡಂತೆ .
➤ ಕಣ್ಣರಿಯದಿದ್ದರೂ ಕರುಳರಿಯುತ್ತದೆ.
➤ ತನಗೇ ಜಾಗವಿಲ್ಲ. ಕೊರಳಲ್ಲಿ ಡೋಲು ಬೇರೆ.
➤ ಧರ್ಮಕ್ಕೆ ಕೊಟ್ಟ ಆಕಳ ಹಲ್ಲು ಎಣಿಸಿದರು.
➤ ಇರೋ ಮೂವರಲ್ಲಿ ಕದ್ದೋರು ಯಾರು ?
➤ ಮುಳುಗುತ್ತಿರುವವನಿಗೆ ಹುಲ್ಲು ಕಡ್ಡಿಯೂ ಆಸರೆ.
➤ ತೋಳ ಬಿದ್ದರೆ ಆಳಿಗೊಂದು ಕಲ್ಲು.
➤ ಕೆಟ್ಟ ಕಾಲ ಬಂದಾಗ ಕಟ್ಟಿಕೊಂಡವಳೂ ಕೆಟ್ಟವಳು.
➤ ಹುಲ್ಲಿನ ಬಣವೇಲಿ ಸೂಜಿ ಹುಡುಕಿದ ಹಾಗೆ.
➤ ಮುಸುಕಿನೊಳಗೆ ಗುದ್ದಿಸಿಕೊಂಡಂತೆ .
➤ ತನ್ನ ಓಣಿಯಲ್ಲಿ ನಾಯಿಯೂ ಸಿಂಹ .
➤ ಹೆದರುವವರ ಮೇಲೆ ಕಪ್ಪೆ ಎಸೆದಂತೆ .
➤ ಹೊಳೆ ದಾಟಿದ ಮೇಲೆ ಅಂಬಿಗ ಮಿಂಡ
➤ ಅಕ್ಕ ಸತ್ತರೆ ಅಮಾವಾಸ್ಯೆ ನಿಲ್ಲುತ್ತದೆಯೇ ?
➤ ಅಕ್ಕಸಾಲಿ, ಅಕ್ಕನ ಚಿನ್ನವನ್ನೂ ಬಿಡುವುದಿಲ್ಲ.
➤ ಯುದ್ಧ ಕಾಲೇ ಶಸ್ತ್ರಾಭ್ಯಾಸ.
➤ ರೇಶ್ಮೆ ಶಾಲಿನಲ್ಲಿ ಸುತ್ತಿದ ಚಪ್ಪಲಿ ಏಟು.
➤ ನಾಯಿ ಬಾಲ ಇಂದಿಗೂ ಡೊಂಕು .
➤ ಮಹಾಜನಗಳು ಹೋದದ್ದೇ ದಾರಿ.
➤ ಅರವತ್ತಕ್ಕೆ ಅರಳು ಮರಳು.
➤ ಜನ ಮರುಳೋ ಜಾತ್ರೆ ಮರುಳೋ.
➤ ಕುಂಟನಿಗೆ ಎಂಟು ಚೇಶ್ಟೆ.
➤ ಐದು ಕುರುಡರು ಆನೆಯನ್ನು ಬಣ್ಣಿಸಿದ ಹಾಗೆ.
➤ ಬೊಗಳುವ ನಾಯಿ ಕಚ್ಚುವುದಿಲ್ಲ.
➤ ಸಣ್ಣವರ ನೆರಳು ಉದ್ದವಾದಾಗ ಸೂರ್ಯನಿಗೂ ಮುಳುಗುವ ಕಾಲ.
➤ ಕೈಗೆಟುಕದ ದ್ರಾಕ್ಷಿ ಹುಳಿ.
➤ ಕೊಂಕಣ ಸುತ್ತಿ ಮೈಲಾರಕ್ಕೆ ಬಂದರು .
➤ ದುಷ್ಟರ ಕಂಡರೆ ದೂರ ಇರು.
➤ ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ.
➤ ನಿಸ್ಸಹಾಯಕರಮೇಲೆ ಹುಲ್ಲು ಕಡ್ಡಿ ಸಹ ಬುಸುಗುಟ್ಟುತ್ತೆ.
➤ ಕಂಡವರ ಮಕ್ಕಳನ್ನು ಭಾವಿಗೆ ತಳ್ಳಿ ಆಳ ನೋಡುವ ಬುದ್ಧಿ.
➤ ಹಂಗಿನ ನೆರೆಮನೆಗಿಂತ ಗುಡಿಸಲೇ ಮೇಲು.
➤ ಚೆಲ್ಲಿದ ಹಾಲಿಗೆ, ಒಡೆದ ಕನ್ನಡಿಗೆ ಎಂದೂ ಅಳಬೇಡ.
➤ ಕದ್ದು ತಿಂದ ಹಣ್ಣು, ಪಕ್ಕದ ಮನೆ ಊಟ, ಎಂದೂ ಹೆಚ್ಚು ರುಚಿ.
➤ ಕುದಿಯುವ ಎಣ್ಣೆಯಿಂದ ಕಾದ ತವಾದ ಮೇಲೆ ಬಿದ್ದ ಹಾಗೆ.
➤ ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು.
➤ ಹಳೆ ಚಪ್ಪಲಿ, ಹೊಸ ಹೆಂಡತಿ ಕಚ್ಚೂಲ್ಲ.
➤ ರವಿ ಕಾಣದ್ದನ್ನು ಕವಿ ಕಂಡ .
➤ ಕೆಟ್ಟು ಪಟ್ಟಣ ಸೇರು.
➤ ಕಾಲಿನದು ಕಾಲಿಗೆ, ತಲೆಯದು ತಲೆಗೆ.
➤ ಹಲ್ಲಿದ್ದವನಿಗೆ ಕಡಲೆ ಇಲ್ಲ, ಕದಲೆಯಿದ್ದವನಿಗೆ ಹಲ್ಲಿಲ್ಲ.
➤ ಕನ್ನಡಿ ಒಳಗಿನ ಗಂಟು ಕೈಗೆ ದಕ್ಕೀತೆ ?
➤ ತೊಟ್ಟಿಲನ್ನು ತೂಗುವ ಕೈ ಜಗತ್ತನ್ನೇ ತೂಗಬಲ್ಲದು.
➤ ನಮಸ್ಕಾರ ಮಾಡಲು ಹೋಗಿ ದೇವಸ್ಥಾನದ ಗೋಪುರ ತಲೆ ಮೇಲೆ ಬಿತ್ತು.
➤ ಮಾಡಬಾರದ್ದು ಮಾಡಿದರೆ ಆಗಬಾರದ್ದು ಆಗುತ್ತೆ.
➤ ನಾಯಿಗೆ ಹೇಳಿದರೆ, ನಾಯಿ ತನ್ನ ಬಾಲಕ್ಕೆ ಹೇಳಿದಂತೆ .
➤ ಮಹಡಿ ಹತ್ತಿದ ಮೇಲೆ ಏಣಿ ಒದ್ದ ಹಾಗೆ.
➤ ಹುಟ್ಟಿಸಿದ ದೇವರು ಹುಲ್ಲು ಮೇಯಿಸದೇ ಇರುವನೇ ?
➤ ಕೊಟ್ಟದ್ದು ತನಗೆ, ಬಚ್ಚಿಟ್ಟಿದ್ದು ಪರರಿಗೆ.
➤ ಮದುವೆಯಾಗೋ ಗಂಡ ಅಂದರೆ ನೀನೆ ನನ್ನ ಹೆಂಡತಿಯಾಗು ಅಂದ ಹಾಗೆ.
➤ ಕೈಗೆ ಬಂಡ ತುತ್ತು ಬಾಯಿಗೆ ಬರಲಿಲ್ಲ.
➤ ತಾನೂ ತಿನ್ನ, ಪರರಿಗೂ ಕೊಡ.
➤ ಗಂಡಸಿಗೇಕೆ ಗೌರಿ ದುಃಖ ?
➤ ನಗುವ ಹೆಂಗಸು , ಅಳುವ ಗಂಡಸು ಇಬ್ಬರನ್ನೂ ಸಂಬಾಬಾರದು .
➤ ನೂರು ಜನಿವಾರ ಒಟ್ಟಿಗಿರಬಹುದು, ಮೂರು ಜಡೆ ಒಟ್ಟಿಗಿರುವುದಿಲ್ಲ.
➤ ಗಾಯದ ಮೇಲೆ ಬರೆ ಎಳೆದ ಹಾಗೆ.
➤ ಗುಡ್ಡ ಕಡಿದು, ಹಳ್ಳ ತುಂಬಿಸಿ , ನೆಲ ಸಮ ಮಾಡಿದ ಹಾಗೆ.
➤ ಅತಿ ಆಸೆ ಗತಿ ಕೇಡು.
➤ ವಿನಾಶ ಕಾಲೇ ವಿಪರೀತ ಬುದ್ಧಿ.
➤ ಅತಿಯಾದರೆ ಆಮೃತವೂ ವಿಷವೇ.
➤ ಬಡವ, ನೀ ಮಡಿಗಿದಾಂಗ ಇರು.
➤ ಆತುರಗಾರನಿಗೆ ಬುದ್ಧಿ ಮಟ್ಟ.
➤ ರತ್ನ ತಗೊಂಡು ಹೋಗಿ ಗಾಜಿನ ತುಂಡಿಗೆ ಹೋಲಿಸಿದ ಹಾಗೆ.
➤ ಗಾಜಿನ ಮನೇಲಿರುವರು ಅಕ್ಕ ಪಕ್ಕದ ಮನೆ ಮೇಲೆ ಕಲ್ಲೆಸೆಯಬಾರದು.
➤ ಹುಚ್ಚುಮುಂಡೆ ಮದುವೇಲಿ ಉಂಡವನೇ ಜಾಣ.
➤ ಉಂಡೂ ಹೋದ, ಕೊಂಡೂ ಹೋದ.
➤ ಎಲೆ ಎತ್ತೋ ಜಾಣ ಅಂದರೆ ಉಂಡೋರೆಷ್ಟು ಅಂದರಂತೆ
➤ ಕೋತಿ ತಾನು ಮೊಸರನ್ನ ತಿಂದು ಮೇಕೆ ಬಾಯಿಗೆ ಒರಸಿದ ಹಾಗೆ.
➤ ಹಾಡಿದ್ದೇ ಹಾಡೋ ಕಿಸುಬಾಯಿ ದಾಸ.
➤ ಹಸಿ ಗೋಡೆ ಮೇಲೆ ಹರಳು ಎಸೆದಂತೆ .
➤ ಊರು ಹೋಗು ಅನ್ನುತ್ತೆ, ಕಾಡು ಬಾ ಅನ್ನುತ್ತೆ.
➤ ಕಾಮಾಲೆ ಕಣ್ಣವನಿಗೆ ಕಾಣುವುದೆಲ್ಲಾ ಹಳದಿ.
➤ ಹಾಲು ಕುಡಿದ ಮಕ್ಕಳೇ ಬದುಕೋಲ್ಲ, ಇನ್ನು ವಿಷ ಕುಡಿದ ಮಕ್ಕಳು ಬದುಕುತ್ತವೆಯೇ.
No comments:
Post a Comment
ಧನ್ಯವಾದಗಳು,
ತಮ್ಮ ಅಭಿಪ್ರಾಯಗಳನ್ನು Comment ಮಾಡಿ.
ಮತ್ತೇ BLOG ಗೆ ಭೇಟಿ ನೀಡಿ.