Menu

Home ನಲಿಕಲಿ About ☰ Menu


 

🔍

ರಾಷ್ಟ್ರೀಯ ಮತದಾರರ ದಿನ - ಜನವರಿ 25

 ರಾಷ್ಟ್ರೀಯ ಮತದಾರರ ದಿನ 

                         ಮ್ಮ ಭಾರತ ಪ್ರಜಾಪ್ರಭುತ್ವ ರಾಷ್ಟ್ರ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಅತ್ಯಂತ ಮಹತ್ತರವಾದುದು. (ಮೊದಲ ಸಾರ್ವತ್ರಿಕ ಚುನಾವಣೆ -1951) ಮತದಾನ ಜನರ ಪ್ರಮುಖ ಹಕ್ಕು. ಪ್ರಜೆಗಳಿಂದ ಆಯ್ಕೆಯಾದ ಸರ್ಕಾರ ಜನರ ಆಶೋತ್ತರಗಳಂತೆಯೇ ನಡೆಯಬೇಕೆಂಬುದು ಸಂವಿಧಾನದ ನಿಯಮ. ತಮ್ಮ ಒಳಿತನ್ನು ಬಯಸುವ ಜನಪರ ನಾಯಕನನ್ನು ಆಯ್ಕೆ ಮಾಡಲು ಮತದಾನ ಪ್ರಕ್ರಿಯೆ ನಡೆಯುತ್ತದೆ. ಮತದಾನದ ಪ್ರಾಮುಖ್ಯತೆ ಮತ್ತು ಪ್ರಜೆಗಳ ಮೇಲಿರುವ ಜವಾಬ್ದಾರಿಯ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಜನವರಿ 25ರಂದು ‘ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುತ್ತದೆ. ಯಾವುದೇ ಕಾರ್ಯನಿರ್ವಹಿಸುವ ಪ್ರಜಾಪ್ರಭುತ್ವದ ಕೇಂದ್ರ ಸ್ತಂಭವೇ ಮತದಾನವಾಗಿದೆ.

ಜನವರಿ 25ರಂದೇ ಯಾಕೆ?: 

     1950ರ ಜನವರಿ 25ರಂದು ಭಾರತದ ಚುನಾವಣಾ ಆಯೋಗ ಅಸ್ತಿತ್ವಕ್ಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಜನವರಿ 25ರಂದು ‘ರಾಷ್ಟ್ರೀಯ ಮತದಾರರ ದಿನ’ ಆಚರಿಸಲಾಗುತ್ತಿದೆ. ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸಲು 25 ಜನವರಿ 2011 ರಂದು ಮೊದಲ  ರಾಷ್ಟ್ರೀಯ ಮತದಾರರ ದಿನ ಆಚರಿಸಲಾಯಿತು.

ಉದ್ದೇಶವೇನು?: 

       ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಈ ದಿನಾಚರಣೆಯ ಪ್ರಮುಖ ಉದ್ದೇಶ. ಭಾಷಣ ಸ್ಪರ್ಧೆ, ಮತದಾನ ಜಾಗೃತಿ ಅಭಿಯಾನ, ಮತದಾರರ ಗುರುತಿನ ಚೀಟಿ ವಿತರಣೆ, ಛಾಯಾಚಿತ್ರ ಸ್ಪರ್ಧೆ ಹೀಗೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಮತದಾರರ ಪ್ರತಿಜ್ಞಾ ವಿಧಿ (ಕನ್ನಡದಲ್ಲಿ)
Voters Pledge in kannada

VOTERS PLEDGE
Voters Pledge in English

ಮತದಾರರ ಹಕ್ಕುಗಳು: 

         18 ವರ್ಷ ವಯಸ್ಸು ಪೂರ್ಣಗೊಂಡವರ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸುವ ಚುನಾವಣಾ ಆಯೋಗ, ಮತದಾರರ ಗುರುತಿನ ಚೀಟಿ ನೀಡುತ್ತದೆ. ಒಂದು ವೇಳೆ, ಯಾವುದಾದರೂ ಕಾರಣಕ್ಕೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲಾಗಿದ್ದರೆ ಅಂತಹವರು ಗುರುತಿನ ಚೀಟಿ ಇದ್ದರೂ ಮತದಾನ ಮಾಡುವಂತಿಲ್ಲ. ಬೇರೆ ದೇಶದ ಪೌರತ್ವ ಪಡೆದರೂ ಅಂತಹವರು ಮತದಾನದ ಹಕ್ಕು ಕಳೆದುಕೊಳ್ಳಬೇಕಾಗುತ್ತದೆ.

ಚುನಾವಣಾ ಆಯೋಗದ ಬಗ್ಗೆ: 

    ಭಾರತೀಯ ಚುನಾವಣಾ ಆಯೋಗವು ಸ್ವಾಯತ್ತ ಸಾಂವಿಧಾನಿಕ ಸಂಸ್ಥೆ. ಲೋಕಸಭೆ, ರಾಜ್ಯಸಭೆ, ರಾಜ್ಯ ವಿಧಾನಸಭೆಗಳು, ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ, ಸ್ಥಳೀಯಾಡಳಿತ ಸಂಸ್ಥೆಗಳಿಗೆ ಚುನಾವಣೆ ನಡೆಸುವುದು ಆಯೋಗದ ಜವಾಬ್ದಾರಿ.

ರಾಷ್ಟ್ರೀಯ ಮತದಾರರ ದಿನದ ಪ್ರತಿಜ್ಞೆ:

'ಭಾರತದ ಪ್ರಜೆಗಳಾದ ನಾವು, ಪ್ರಜಾಪ್ರಭುತ್ವದಲ್ಲಿ ಅಚಲವಾದ ನಂಬಿಕೆಯನ್ನು ಹೊಂದಿದ್ದೇವೆ. ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳನ್ನು ಮತ್ತು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿಹಿಡಿಯಲು ಮತ್ತು ಪ್ರತಿ ಚುನಾವಣೆಯಲ್ಲಿ ನಿರ್ಭಯವಾಗಿ ಮತ್ತು ಧರ್ಮದ ಪರಿಗಣನೆಗೆ, ಜನಾಂಗ, ಜಾತಿ, ಸಮುದಾಯ, ಭಾಷೆ ಅಥವಾ ಯಾವುದೇ ಪ್ರಚೋದನೆಗೆ ಒಳಗಾಗದೆ ಮತ ಚಲಾಯಿಸುತ್ತೇವೆ ಎಂದು ಈ ಮೂಲಕ ಪ್ರತಿಜ್ಞೆ ಮಾಡುತ್ತೇವೆ' 

ಮತದಾನದ ಪ್ರಾಮುಖ್ಯತೆ ಏನು?

ಮತದಾರರ ದಿನವನ್ನು ಆಚರಿಸುವ ಕಾರ್ಯಸೂಚಿಯು ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು, ವಿಶೇಷವಾಗಿ ದೇಶದ ಹೊಸದಾಗಿ ಅರ್ಹ ಮತದಾರರಲ್ಲಿ ಮತದಾನದ ಪ್ರಾಮುಖ್ಯತೆಯ ಬಗ್ಗೆ ಮಾಹಿತಿ ನೀಡುವುದು ಆಗಿದೆ. ಮತದಾನವು ಒಂದು ದೇಶದ ಸರ್ಕಾರವನ್ನು ರಚಿಸಲು ಸಹಾಯ ಮಾಡುವ ಮೂಲಭೂತ ಪ್ರಕ್ರಿಯೆಯಾಗಿದೆ. ಜನರು ಮತದಾನದ ಮೂಲಕ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಮತದಾನದ ಹಕ್ಕುಗಳು ಜನರಿಗೆ ಸಮಸ್ಯೆಗಳ ಬಗ್ಗೆ ಸರ್ಕಾರವನ್ನು ಪ್ರಶ್ನಿಸುವ ಹಕ್ಕಿಗೆ ಇನ್ನಷ್ಟು ಬಲತುಂಬುತ್ತದೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಈ ಮತದಾನವು ಪ್ರಮುಖವಾಗಿದೆ.

 ಮತದಾರರ ದಿನದ ಧ್ಯೇಯ ವಾಕ್ಯಗಳು

2023 Theme - ''Nothing Like Voting, I Vote for Sure"

2022 Theme - ''Making Elections Inclusive, Accessible and Participative"

2021 Theme: “Enabling Empowered, Vigilant, Safe, and Informed Voters.”

2020 Theme: election’s theme is “Electoral Literacy for Stronger Democracy.”

2019 Theme: “No Voter to be Left Behind” is the theme for 2019.

2018 Theme: “Assessable Elections”

2017 Theme: “Empowering Young and Future Voters.”

No comments:

Post a Comment

ಧನ್ಯವಾದಗಳು,
ತಮ್ಮ ಅಭಿಪ್ರಾಯಗಳನ್ನು Comment ಮಾಡಿ.
ಮತ್ತೇ BLOG ಗೆ ಭೇಟಿ ನೀಡಿ.

Popular Post