Menu

Home ನಲಿಕಲಿ About ☰ Menu


 

🔍

KREIS 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ 2022-23

                 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಏಕಲವ್ಯ/ಸಂಗೊಳ್ಳಿ ರಾಯಣ್ಣ/ ಡಾ.ಬಿ.ಆರ್.ಅಂಬೇಡ್ಕರ್/ಶ್ರೀಮತಿ ಇಂದಿರಾಗಾಂಧಿ/ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿ(KREIS)  6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ-2022-23

 @ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು@

*ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 03.02.2022

*ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ : 22.02.2022

*Hall Ticket ಬಿಡುಗಡೆ ದಿನಾಂಕ : 14.03.2022

*ಪರೀಕ್ಷೆ ನಡೆಯುವ ದಿನಾಂಕ : 20.03.2022

@ಅರ್ಜಿ ಸಲ್ಲಿಸುವ ವಿಧಾನ@

* ಅರ್ಜಿಯನ್ನು ಸಮೀಪದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಯಲ್ಲಿಯೇ ONLINE ಮೂಲಕ ಭರ್ತಿ ಮಾಡಬೇಕು.

@ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು@

1. ವಿದ್ಯಾರ್ಥಿಯ SATS ಸಂಖ್ಯೆ:                                    (ವಿದ್ಯಾರ್ಥಿಯ ಬಹುತೇಕ ಪ್ರಮುಖ ಮಾಹಿತಿಗಳು  SATS ನಿಂದ fetch ಆಗುವದರಿಂದ SATS ನಲ್ಲಿ ವಿದ್ಯಾರ್ಥಿಯ ಸಂಪೂರ್ಣ ಮಾಹಿತಿ ಅಪ್ ಡೇಟ್ ಇರಬೇಕು)

2. ಜಾತಿ ಮತ್ತು ಆದಾಯ ಪ್ರಮಾಣ ಪತ್ರ:                         (ವಾರ್ಷಿಕ ಆದಾಯ ಮಿತಿ                                             SC/ST/C-1      : ₹2,50,000.                                     2A,2B,3A,3B : ₹1,00,000 )

3. ವಿದ್ಯಾರ್ಥಿಯ ಇತ್ತೀಚಿನ 2 ಭಾವಚಿತ್ರ

4. ಇತರೆ ಮೀಸಲಾತಿ ಕೋರುವ ಪ್ರಮಾಣ ಪತ್ರಗಳು

*ಇತರೆ ಮೀಸಲಾತಿ ಪ್ರಮಾಣ ಪತ್ರಗಳೆಂದರೆ*

A) ವಿಶೇಷ ಚೇತನ ಮಗು(PH)

B) ಅಲೆಮಾರಿ/ ಅರೆ  ಅಲೆಮಾರಿ/ ಸೂಕ್ಷ್ಮ/ ಅತಿ ಸೂಕ್ಷ್ಮ ಮಗು

C) ಮಾಜಿ ಸೈನಿಕರ ಮಗು

D) ಆಶ್ರಮ/ ವಸತಿ ಶಾಲೆ ಮಗು

E) ಪೌರ ಕಾರ್ಮಿಕರ/ಸಫಾಯಿ ಕರ್ಮಚಾರಿ ಮಗು

F)ಬಾಲ ಕಾರ್ಮಿಕ,ವಿಧವೆ ಮಗು,ದೇವದಾಸಿ

ಮಗು,ವಿಧುರನ ಮಗು,ಯೋಜನಾ ನಿರಾಶ್ರಿತರ ಮಗು,ಅನಾಥ ಮಗು,ಹೆಚ್.ಐ.ವಿ ಪೀಡಿತರ ಮಗು,ಆತ್ಮಹತ್ಯೆ ರೈತರ ಮಗು.

G)ಸ್ಥಳೀಯ ಅಭ್ಯರ್ಥಿ( ಸ್ಥಳೀಯ ಅಭ್ಯರ್ಥಿ ಎಂದರೆ ಸ್ವಂತ ತಾಲ್ಲೂಕಿನ ಅಭ್ಯರ್ಥಿ)

*ಮೇಲ್ಕಂಡ ವಿಶೇಷ ವರ್ಗಕ್ಕೆ ಸೇರಿದಲ್ಲಿ ಸಂಬಂಧಿತ ಸಕ್ಷಮ ಪ್ರಾಧಿಕಾರದಿಂದ  ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಅರ್ಜಿ ಸಲ್ಲಿಸುವ ಸಮಯದಲ್ಲಿ ಸಲ್ಲಿಸುವುದು.

*ಅರ್ಜಿ ಸಲ್ಲಿಸುವಾಗ ಪ್ರವೇಶ ಬಯಸುವ ವಸತಿ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ಆಯ್ಕೆ ಮಾಡಿಕೊಳ್ಳುವುದು ಕಡ್ಡಾಯವಾಗಿರುತ್ತದೆ(ಜಿಲ್ಲೆಯ ಎಲ್ಲ ವಸತಿ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ಆಯ್ಕೆ ಮಾಡಿಕೊಳ್ಳುವುದು)

*ಅಭ್ಯರ್ಥಿಯು ತನ್ನ ಸ್ವಂತ ಜಿಲ್ಲೆಯ ವಸತಿ ಶಾಲೆಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.                        (ಸ್ವಂತ ಜಿಲ್ಲೆ ಎಂದರೆ ಜಾತಿ, ಆದಾಯ ಪ್ರಮಾಣ ಪತ್ರ ಅಥವಾ ಆಧಾರ್ ಕಾರ್ಡ್ ನಲ್ಲಿ ನಮೂದಿಸಿರುವ ಜಿಲ್ಲೆ.)

ಆದರ್ಶ ವಿದ್ಯಾಲಯ 6th ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಕುರಿತು ಸಂಪೂರ್ಣ ಮಾಹಿತಿ.

*ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಿ.

*ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ತಾಲೂಕು ಕೇಂದ್ರಗಳಲ್ಲಿ ಪರೀಕ್ಷೆ ನಡೆಸುತ್ತದೆ.

*ಅಪ್ಲಿಕೇಶನ್‌ ಸಲ್ಲಿಸುವ ವಿಧಾನ, ಹಾಗೂ 'ಮಾಹಿತಿ ಪುಸ್ತಕ-2022' ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ http://kea.kar.nic.in ನಲ್ಲಿ ಮತ್ತು ವಸತಿ ಶಿಕ್ಷಣ ಸಂಸ್ಥೆಗಳ ವೆಬ್‌ಸೈಟ್‌ http://kreis.kar.nic.in ನಲ್ಲಿ ನೀಡಲಾಗಿದ್ದು, ಅಗತ್ಯವಿದ್ದಲ್ಲಿ ಡೌನ್‌ಲೋಡ್‌ ಮಾಡಿ ಓದಿಕೊಳ್ಳಬಹುದು.

*ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಕ್ಲಿಕ್ ಮಾಡಿ*

@CLICK HERE FOR CIRCULAR

@CLICK FOR MORE INFORMATION

------------- ----------------------- -------------------- -------------

 **NMMS ನ ಹಳೆಯ ಎಲ್ಲಾ ಪ್ರಶ್ನೆ ಪತ್ರಿಕೆ & ಕೀ ಉತ್ತರಗಳು 

**NMMS ನ ಅಧ್ಯಯನ ವಸ್ತು/Study Material

No comments:

Post a Comment

ಧನ್ಯವಾದಗಳು,
ತಮ್ಮ ಅಭಿಪ್ರಾಯಗಳನ್ನು Comment ಮಾಡಿ.
ಮತ್ತೇ BLOG ಗೆ ಭೇಟಿ ನೀಡಿ.

Popular Post