'ಯತ್ರನಾರ್ಯಸ್ತು ಪೂಜ್ಯಂತೇ, ರಮಂತೇ ತತ್ರ ದೇವತಾಃ'
(ಮಹಿಳೆಯರನ್ನು ಎಲ್ಲಿ ಗೌರವಿಸುತ್ತಾರೋ ಅಲ್ಲಿ ದೇವತೆಗಳು ನೆಲೆಸಿರುತ್ತಾರೆ ಎಂದರ್ಥ)
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಪ್ರತಿವರ್ಷ ಮಾರ್ಚ್ 8 ರಂದು ವಿಶ್ವದಾದ್ಯಂತ ಆಚರಣೆ ಮಾಡಲಾಗುತ್ತದೆ. ಮಹಿಳೆಯರು ಒಂದೇ ಕ್ಷೇತ್ರಕ್ಕೆ ಮೀಸಲಿರದೆ ಇಂದು ಆರ್ಥಿಕ, ರಾಜಕೀಯ, ರಕ್ಷಣೆ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ಆಟೋ ಚಾಲಕರಿಂದ ದೇಶದ ಉನ್ನತ ಸ್ಥಾನದವರೆಗೂ ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಿದ್ದಾರೆ ಮತ್ತು ಮಾಡುತ್ತಿದ್ದಾರೆ. ತೊಟ್ಟಿಲನ್ನು ತೂಗುವ ಕೈ ದೇಶವನ್ನೇ ಆಳಬಲ್ಲದೂ ಎಂಬುದು ಸಾಬೀತಾಗಿದೆ. ಅವರ ಕೊಡುಗೆಯನ್ನು ಸ್ಮರಿಸಲು ಈ ದಿನವನ್ನು ಅವರಿಗೆ ಮೀಸಲಿರಿಸಲಾಗಿದೆ. ಹಾಗೂ ಅಂದು ಅವರ ಕೊಡುಗೆಯನ್ನು ನೆನೆಯುತ್ತಾ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತದೆ.
'ಉದ್ಯೋಗಂ ಪುರುಷ ಲಕ್ಷಣಂ' ಎಂಬ ಮಾತು ಈಗ 'ಉದ್ಯೋಗಂ ಮನುಷ್ಯ ಲಕ್ಷಣಂ' ಎನ್ನುವಷ್ಟರ ಮಟ್ಟಿಗೆ ಸ್ತ್ರೀಯರ ಸ್ಥಾನ-ಮಾನಗಳು ಪುರುಷರಷ್ಟೇ ಸರಿಸಮಾನವಾಗಿವೆ. ಇಂತಹ ಮಹಿಳೆ ಪ್ರತಿ ಮನುಷ್ಯರ ಜೀವನದಲ್ಲಿ ಮೊದಲು ತಾಯಿಯಾಗಿ ನಂತರ ಸಹೋದರಿಯಾಗಿ, ಸ್ನೇಹಿತೆಯಾಗಿ, ಮಡದಿಯಾಗಿ, ಮಗಳಾಗಿ ಜನನದಿಂದ ಮರಣದವರೆಗೆ ಜೋತೆಯಾಗಿದ್ದು ನಮ್ಮಯ ಸುಖ-ದುಃಖಗಳಲ್ಲಿ ಭಾಗಿಯಾಗಿ ಹೆಗಲಿಗೆ ಹೆಗಲು ಕೊಟ್ಟು ಜೀವನ ಪರಿಪೂರ್ಣವಾಗುವಲ್ಲಿ ಶ್ರಮಿಸುವ ಈ ಶಕ್ತಿಯಾಗಿದ್ದಾಳೆ.
ವೇದ/ಪುರಾಣ/ಮಹಾಕಾವ್ಯಗಳಲ್ಲಿ ಮಹಿಳೆ :
ವೇದಗಳ ಕಾಲದಲ್ಲಿದ್ದ ಗಾರ್ಗಿ, ಮೈತ್ರೈಯಿಯರ ಬೌದ್ದಿಕ ಸಾಧನೆ ಸ್ಮರಣಿಯವಾದುದು. ಪುರಾಣ ಕಾಲದ 'ಆದಿಶಕ್ತಿ' ದುಷ್ಟಶಿಕ್ಷಕಿಯಾಗಿ, ಶಿಷ್ಟರಕ್ಷಕಿಯಾಗಿ, ಸರ್ವಶಕ್ತಿಯನ್ನು ಮೆರೆದಿರುವುದನ್ನು ಕಾಣಬಹುದಾಗಿದೆ. ಹಿಂದೂ ಮಹಾಕಾವ್ಯಗಳಾದ ರಾಮಾಯಣ-ಮಹಾಭಾರತ ಕೃತಿಗಳ ರಚನೆಗೆ ಸ್ತ್ರೀ ಕಾರಣೀಭೂತಳಾಗಿದ್ದಾಳೆ. ಹಲವು ಶಾಸ್ತ್ರಗಳಲ್ಲಿ ಈಕೆಯನ್ನು ಜಗಜನನಿಯೆಂದು ಹೇಳಲಾಗುತ್ತದೆ. ಹಾಗಾಗಿ ಹಿರಿಯರು - "ಕಾರ್ಯೇಷು ದಾಸಿ, ಸಲಹೇಷು ಮಂತ್ರಿ, ಭೋಜೇಷು ಮಾತ, ಶಯನೇಷು ರಂಭಾ ನಾರಿ ಕ್ಷಮಯಾಧರಿತ್ರಿ" ಎಂದಿದ್ದಾರೆ.
ಮಹಿಳಾ ದಿನಾಚರಣೆ ಇತಿಹಾಸ :
1908ರಲ್ಲಿ ಅಮೆರಿಕದಲ್ಲಿ ಕಾರ್ಮಿಕ ಚಳವಳಿ ನಡೆದಿತ್ತು. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದುಡಿಯುವ ಮಹಿಳೆಯರು ಪಾಲ್ಗೊಂಡಿದ್ದರು. ಸುಮಾರು 15,000 ಮಹಿಳೆಯರು ನ್ಯೂಯಾರ್ಕ್ ಬೀದಿಗಳಲ್ಲಿ ಮೆರವಣಿಗೆ ನಡೆಸಿದ್ದರು ಮತ್ತು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಿದ್ದರು. ತಮ್ಮ ಕೆಲಸದ ಅವಧಿಯನ್ನು ಕಡಿಮೆ ಮಾಡಬೇಕು ಮತ್ತು ವೇತನ ಶ್ರೇಣಿಯನ್ನು ಹೆಚ್ಚಿಸಬೇಕು ಎಂದು ಕಾರ್ಮಿಕ ಮಹಿಳೆಯರು ಒತ್ತಾಯಿಸಿದ್ದರು. ಮಹಿಳೆಯರಿಗೂ ಮತದಾನದ ಹಕ್ಕನ್ನು ನೀಡಬೇಕೆಂದು ಬೇಡಿಕೆಯಿಟ್ಟಿದ್ದರು. ಮಹಿಳೆಯರ ಧ್ವನಿ ಅಂದಿನ ಸರ್ಕಾರದ ಕಿವಿಗೆ ಬಿದ್ದಿತ್ತು. ನಂತರ 1909 ರಲ್ಲಿ, ಚಳುವಳಿಯ ಒಂದು ವರ್ಷದ ನಂತರ, ಅಮೆರಿಕಾದ ಸಮಾಜವಾದಿ ಪಕ್ಷ ಮಹಿಳಾ ದಿನವನ್ನು ಘೋಷಿಸಿತು. ಮಾರ್ಚ್ 8 ರಂದು ಅಮೆರಿಕಾದಲ್ಲಿ ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ಮೆರವಣಿಗೆ ನಡೆಸಿದ್ದರು. ಅದರ ನಂತರ ಮುಂದಿನ ವರ್ಷ ಸಮಾಜವಾದಿ ಪಕ್ಷವು ಈ ದಿನದಂದೇ ಮಹಿಳಾ ದಿನವನ್ನು ಆಚರಿಸಲು ಘೋಷಿಸಿತು. 1917 ರಲ್ಲಿ ಮೊದಲ ಮಹಾಯುದ್ಧದ ಸಮಯದಲ್ಲಿ ರಷ್ಯಾದ ಮಹಿಳೆಯರು ಆಹಾರಕ್ಕಾಗಿ ಮುಷ್ಕರ ನಡೆಸಿದ್ದರು. ಯುದ್ಧದ ಬಗ್ಗೆ ತಮ್ಮ ಅಭಿಪ್ರಾಯ ಮುಂದಿಟ್ಟಿದ್ದರು. ಇದರ ನಂತರ ಚಕ್ರವರ್ತಿ ನಿಕೋಲಸ್ ರಾಜೀನಾಮೆ ನೀಡಿದರು ಮತ್ತು ಮಹಿಳೆಯರು ಮತದಾನದ ಹಕ್ಕನ್ನು ಪಡೆದರು. ಇದರ ಹಿನ್ನಲೆಯಲ್ಲಿ ಯುರೋಪ್‌ನಲ್ಲಿ ಮಹಿಳೆಯರು ಕೆಲವು ದಿನಗಳ ನಂತರ ಮಾರ್ಚ್ 8 ರಂದು ಶಾಂತಿ ಕಾರ್ಯಕರ್ತರನ್ನು ಬೆಂಬಲಿಸಲು ರ್ಯಾಲಿ ನಡೆಸಿದರು. ಈ ಕಾರಣಕ್ಕಾಗಿ, ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾರ್ಚ್ 8 ರಂದು ಪ್ರಾರಂಭಿಸಲಾಯಿತು. ನಂತರ 1975 ರಲ್ಲಿ ವಿಶ್ವಸಂಸ್ಥೆಯು ಮಾರ್ಚ್ 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಿಸುವ ಘೋಷಣೆ ಮಾಡಿತು.
ಮಹಿಳಾ ದಿನಾಚರಣೆ ಮಹತ್ವ :
ಬಡ, ದುರ್ಬಲ ಹೆಣ್ಣು ಮಕ್ಕಳನ್ನು ಪ್ರೋತ್ಸಾಹಿಸಿ, ಸುಂದರ ಬದುಕು ರೂಪಿಸುವ ಕಾರ್ಯಕ್ರಮ, ಯೋಜನೆಗಳ ಮೂಲಕ ಪ್ರತೀ ವರ್ಷ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಇಂದು ಪ್ರಪಂಚದ ಎಲ್ಲಾ ದೇಶಗಳು ಅಭಿವೃದ್ಧಿಯಲ್ಲಿ ಸಾಗುತ್ತಿದ್ದರು ಮಹಿಳೆಯರಿಗೆ ಸರಿಯಾದ ಹಕ್ಕು ಸಿಗುತ್ತಿಲ್ಲ ಹಕ್ಕಿಗಾಗಿ ಹೋರಾಟ ಮುಂದುರೆದಿದೆ. ಮಹಿಳೆಯರಿಗಿರುವ ಹಕ್ಕುಗಳು ಮತ್ತು ಗೌರವದ ಬಗ್ಗೆ ಸಮಾಜಕ್ಕೆ ಅರಿವು ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ.
ಮಹಿಳಾ ದಿನಾಚರಣೆಯ 2022ರ ಧ್ಯೆಯ ವಾಕ್ಯ :
ಪ್ರತಿ ವರ್ಷ ಒಂದೊಂದು ಧ್ಯೇಯ ವಾಕ್ಯದೊಂದಿಗೆ ಮಹಿಳಾ ದಿನಾಚರಣೆ ಆಚರಿಸಲಾಗುತ್ತದೆ.
2022 :
2023:
ಮಹಿಳೆಯರ ಕುರಿತು ಗಾದೆಮಾತು...
'ಒಲಿದರೆ ನಾರಿ; ಮುನಿದರೆ ಮಾರಿ'
'ಮನೆಯೇ ಮೊದಲ ಪಾಠಶಾಲೆ; ತಾಯಿಯೇ ಮೊದಲ ಗುರು'
'ಹೆಣ್ಣೊಂದು ಕಲಿತರ ಶಾಲೆಯೊಂದು ತೆರೆದಂತೆ'
'ಕಲಿತ ಹೆಣ್ಣು ಮನೆಯ ಕಣ್ಣು'
'ಅಕ್ಷರ ಕಲಿತ ನಾರಿ ದೇಶದ ಪ್ರಗತಿಗೆ ದಾರಿ'
No comments:
Post a Comment
ಧನ್ಯವಾದಗಳು,
ತಮ್ಮ ಅಭಿಪ್ರಾಯಗಳನ್ನು Comment ಮಾಡಿ.
ಮತ್ತೇ BLOG ಗೆ ಭೇಟಿ ನೀಡಿ.