Menu

Home ನಲಿಕಲಿ About ☰ Menu


 

🔍

ಅಂತರಾಷ್ಟ್ರೀಯ ಯೋಗ ದಿನ | International Day of Yoga

 ವಿಶ್ವ ಯೋಗ ದಿನ
International Day of Yoga
ಅಂತರಾಷ್ಟ್ರೀಯ ಯೋಗ ದಿನ | International Day of Yoga

 ಪ್ರತಿ ವರ್ಷ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನ/ ವಿಶ್ವ ಯೋಗ ದಿನವೆಂದು ವಿಶ್ವ ಸಂಸ್ಥೆಯು 11 ಡಿಸೆಂಬರ್ 2014 ರಂದು ಘೋಷಿಸಿದೆ. ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ್ದು ಭಾರತ. ಯೋಗವು ಭಾರತೀಯ ಮೂಲದ, 6,000 ವರ್ಷ ಹಳೆಯದಾದ, ಭೌತಿಕ, ಮಾನಸಿಕ, ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದ್ದು, ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಪ್ರಾಚಿನ ಕಲೆಯಾಗಿದೆ. ಭಾರತವು ಜಗತ್ತಿಗೆ ನೀಡಿದ ಒಂದು ದೊಡ್ಡ ಕೊಡುಗೆಯಾಗಿದೆ.

ವಿಶ್ವ ಯೋಗ ದಿನಾಚರಣೆ ಇತಿಹಾಸ :-

 ಭಾರತದ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ (2014 ಸೆಪ್ಟೆಂಬರ್‌) ತಮ್ಮ ಭಾಷಣದಲ್ಲಿ ವರ್ಷದ ಅತಿ ದೀರ್ಘ ದಿನವಾದ ಜೂನ್ 21 ರಂದು ವಿಶ್ವ ಯೋಗ ದಿನ ಆಚರಿಸುವಂತೆ ಕರೆ ನೀಡಿದರು. ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕರಡು ಪ್ರಸ್ತಾವನೆಯನ್ನು 2014 ಡಿಸೆಂಬರ್‌ನಲ್ಲಿ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ, ಭಾರತದ ಖಾಯಂ ಪ್ರತಿನಿಧಿಯಾಗಿರುವ ಅಶೋಕ್‌ ಕುಮಾರ್ ಮಂಡಿಸಿದ್ದರು. ವಿಶ್ವಸಂಸ್ಥೆಗೆ ಇದು ಐತಿಹಾಸಿಕ ಕ್ಷಣವಾಗಿದ್ದು, ಅದರ ಸದಸ್ಯ ರಾಷ್ಟ್ರಗಳು ಅಭೂತಪೂರ್ವ ಬೆಂಬಲ ಸೂಚಿಸಿದ್ದರು. ವಿಶ್ವ ಸಂಸ್ಥೆಯ 193 ರಾಷ್ಟ್ರಗಳ ಪೈಕಿ 177 ದೇಶಗಳು ಅನುಮೋದನೆಯನ್ನು ನೀಡಿದ್ದವು. 

ಮೊದಲ ವಿಶ್ವ ಯೋಗ ದಿನ :-

2015 ಜೂನ್ 21ರಂದು ಚೊಚ್ಚಲ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಆಯುಶ್ ಸಚಿವಾಲಯದ ನೇತೃತ್ವದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ರಾಜಪಥದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ ಹಾಗೂ 84 ರಾಷ್ಟ್ರಗಳ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, 21 ಯೋಗ ಆಸನಗಳನ್ನು ಅಭ್ಯಾಸಿಸಲಾಯಿತು.ಅಂತಾರಾಷ್ಟ್ರೀಯ ಯೋಗ ದಿನದ ಮಹತ್ವ

ಅಂತಾರಾಷ್ಟ್ರೀಯ ಯೋಗ ದಿನದ ಮಹತ್ವ :-

2015ರ ನಂತರ ಯೋಗ ಮಾಡುವುದರಿಂದ ಆರೋಗ್ಯಕ್ಕೆ ಆಗುವ ಪ್ರಯೋಜನಗಳು ಮತ್ತು ಅದರ ವಿವಿಧ ಅಭ್ಯಾಸಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಜೂನ್ 21 ರಂದು ಪ್ರಪಂಚದಾದ್ಯಂತ ವಾರ್ಷಿಕವಾಗಿ ಈ ದಿನವನ್ನು ಆಚರಿಸಲಾಗುತ್ತದೆ. 

ಇದನ್ನು ಅಭ್ಯಾಸ ಮಾಡುವುದರಿಂದ ಪಡೆಯಬಹುದಾದ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಪ್ರಯೋಜನಗಳ ಬಗ್ಗೆ ಜನರಿಗೆ ತಿಳಿಸುವುದು ಇದರ ಉದ್ದೇಶವಾಗಿದೆ. ಉತ್ತರ ಗೋಳಾರ್ಧದಲ್ಲಿ ವರ್ಷದ ಅತಿ ಉದ್ದದ ದಿನವಾದ್ದರಿಂದ ಜೂನ್ 21 ರ ದಿನಾಂಕವನ್ನು ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದರು.

"ಯೋಗವು ದೇಹ ಮತ್ತು ಮನಸ್ಸುಗಳನ್ನು ಬೆಸೆಯುವ ಆಧ್ಯಾತ್ಮಿಕ ಪ್ರಕ್ರಿಯೆ" - ನರೇಂದ್ರ ಮೋದಿ

ಯೋಗ ಎಂದರೇನು?

'ಯೋಗ' ಶಬ್ದ ಸಂಸ್ಕೃತ ಬಾಷೆಯ 'ಯುಜ್' ಎಂಬ ಪದದಿಂದ ಆಗಿದೆ. ಯೋಗವೆಂದರೆ 'ಜೋಡಿಸು' 'ಸೇರಿಸು' 'ಕೂಡಿಸು' ಎಂಬ ಆರ್ಥ ಬರುತ್ತದೆ. ಯೋಗವೆಂದರೆ 'ಸಮಾದಿ' 'ಉಪಾಯ' 'ಸಾಧನ' ಎಂಬ ಅರ್ಥವೂ ಬರುತ್ತದೆ, ಯೋಗದಲ್ಲಿ ದೇಹದ ಜೊತೆ ಮನಸ್ಸು , ಬುದ್ದಿ , ಬಾವನೆ,ಆತ್ಮ ಹಾಗೂ ಅಹಂಕಾರಗಳನ್ನು ಕೂಡಿಸುವುದನ್ನು ಅಭ್ಯಾಸ ಮಾಡಲಾಗುತ್ತದೆ. ಆಧ್ಯಾತ್ಮದ ದೃಷ್ಟಿಯಲ್ಲಿ ಆತ್ಮನೊಂದಿಗೆ ಪರಮಾತ್ಮನನ್ನು ಸೇರಿಸುವುದು ಅಥವಾ ಲೀನವಾಗಿಸುವುದು ಎಂದಾಗುತ್ತದೆ. "ಯೋಗೋ ಉಪಾಯ ಉದ್ದಿಷ್ಟ:" ಮೋಕ್ಷಕ್ಕೆ ಉತ್ತಮ ಉಪಾಯ ಯೋಗ. ಪತಂಜಲಿ ಮಹರ್ಷಿಗಳು ಯೋಗ ಎಂದರೆ "ಯೋಗಶ್ಚಿತ್ತ ವೃತ್ತಿ ನಿರೋಧ:" ಎನ್ನುತ್ತಾರೆ. ಚಿತ್ತವೃತ್ತಿಯನ್ನು ನಿರೋಧಿಸುವುದು ಯೋಗದ ಉದ್ದೇಶ..

ಯೋಗದ ಮಹತ್ವ :-

ಮನಸ್ಸು, ದೇಹ ಮತ್ತು ಆತ್ಮ ಸೇರಿದ ಎಲ್ಲ ಮೂರು ಅಂಶಗಳನ್ನು ಶುದ್ದೀಕರಿಸಲು ನೆರವಾಗುತ್ತದೆ.

☞ ಮನಸ್ಸನ್ನು ಪ್ರಶಾಂತವಾಗಿಸುತ್ತದೆ & ಧನಾತ್ಮಕ ಭಾವನೆಗಳ ಬೆಳವಣಿಗೆ.

☞ ನಾವು ಮತ್ತು ಪ್ರಕೃತಿ ಮಾತೆಯ ಜೊತೆ ಸಂರ್ಪಕವನ್ನು ಕಲ್ಪಿಸುತ್ತದೆ. 

☞ ಇದು ನಮ್ಮನ್ನು ನಮ್ಮ ನೈಜತೆಯ ಹತ್ತಿರಕ್ಕೆ ಕೊಂಡೊಯ್ಯುತ್ತದೆ.  

☞ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಅತ್ಯಂತ ಪರಿಣಾಮಕಾರಿ ಚಿಕಿತ್ಸೆ

☞ ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು.

  ಯೋಗ ಉತ್ತಮ ಸ್ವ-ಆರೈಕೆಯನ್ನು ಉತ್ತೇಜಿಸುತ್ತದೆ.

 ಒತ್ತಡವನ್ನು ನಿರ್ವಹಿಸಲು ಯೋಗ ನಿಮಗೆ ಸಹಾಯ ಮಾಡುತ್ತದೆ.

  ಮನಸ್ಸು ಮತ್ತು ದೇಹದಿಂದ ಬರುವ ಕಾಯಿಲೆಗಳನ್ನು ದೂರವಿರಿಸುತ್ತದೆ.

☞ ಯೋಗದ ಮೂಲಕ ಉನ್ನತ ಮಟ್ಟದ ಏಕಾಗ್ರತೆಯನ್ನು ಸಾಧಿಸುವುದ ಜೊತೆಗೆ ನಮ್ಮ ಭಾವನೆಗಳನ್ನು ಹೇಗೆ ಸ್ಥಿರಗೊಳಿಸಬಹುದು ಎಂಬುದನ್ನು ಸಹ ಕಲಿಯಬಹುದು.

☞ ನಿಯಮಿತವಾಗಿ ಅಭ್ಯಾಸ ಮಾಡಿದರೆ ನೀವು ಯೋಗದಿಂದ ಸ್ವಯಂ-ಶಿಸ್ತು ಮತ್ತು ಸ್ವಯಂ-ಅರಿವನ್ನು ಬೆಳೆಸಿಕೊಳ್ಳಬಹುದು.

☞ ನೀವು ಉತ್ತಮ ಮಾನಸಿಕ ಸ್ಪಷ್ಟತೆ ಮತ್ತು ಉತ್ತಮ ತಿಳುವಳಿಕೆಯನ್ನು ಪಡೆಯುತ್ತೀರಿ.

☞ ದೇಹಕ್ಕೆ ಸೌಂದರ್ಯ ಹೆಚ್ಚಿಸುವುದು ದೇಹದ ಜೀವ ರಾಸಾಯನಿಕ ಕ್ರಿಯೆಯನ್ನು ವೃದ್ಧಿಸುವುದು.

☞ ದೇಹಕ್ಕೆ ಬೇಡವಾದ ವಸ್ತುಗಳನ್ನು ಹೀರಿಕೊಳ್ಳುವುದು ಹಾಗೂ ದೇಹಕ್ಕೆ ಬೇಡದ ವಿಷಯ ಕಲ್ಮಶ ಪದಾರ್ಥಗಳನ್ನು ಹೊರಹಾಕುವುದು ಶರೀರದ ಸೂಕ್ಷ್ಮ ಮತ್ತು ಸ್ಥೂಲ ರೋಗಗಳನ್ನು ಗುಣಪಡಿಸುತ್ತದೆ.

☞ ಶರೀರವನ್ನು ಬಲಗೊಳಿಸುವುದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಎಲ್ಲಾ ಮಾಂಸಖಂಡವನ್ನು ಹಾಗೂ ಅಂಗವನ್ನು ಬಲಗೊಳಿಸುವುದು. ದೇಹದ ಪ್ರತಿಯೊಂದು ಭಾಗಕ್ಕೂ ಸರಿಯಾದ ರಕ್ತಸಂಚಾರ, ಶ್ವಾಸಕೋಶ, ಹೃದಯ, ನರಮಂಡಲ, ಮಿದುಳು ಇತ್ಯಾದಿ ಎಲ್ಲ ಅಂಗಗಳ ಚಟುವಟಿಕೆಗಳನ್ನು ಚುರುಕುಗೊಳಿಸುವುದು.

ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಘೋಷವಾಕ್ಯ :-

2022 ರ ಘೋಷಣೆ -  "ಮಾನವೀಯತೆಗಾಗಿ ಯೋಗ"

2023 ರ ಘೋಷಣೆ - "ಪ್ರತಿ ಮನೆಯಂಗಳದಲ್ಲಿ ಯೋಗಾಚರಣೆ" (Yoga for Vasudhaiva Kutumbakam)

2024 ರ ಘೋಷಣೆ - "ನಮಗಾಗಿ ಹಾಗೂ ಸಮಾಜಕ್ಕಾಗಿ ಯೋಗ" 


ಕಾಶ್ಮೀರದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿ : -

ಈ ಬಾರಿ ಪ್ರಧಾನಿ ಮೋದಿ ಅವರು ಯೋಗ ದಿನವನ್ನು ಜಮ್ಮು ಕಾಶ್ಮೀರದಲ್ಲಿ ಆಚರಿಸಲಿದ್ದಾರೆ. ದೇಶದ ವಿವಿಧ ಭಾಗಗಳಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ಸುಮಾರು 7 ಸಾವಿರಕ್ಕೂ ಹೆಚ್ಚು ಜನರು ಆಗಮಿಸಲಿದ್ದಾರೆ. ದಾಲ್‌ ಸರೋವರದ ದಡದಲ್ಲಿ ಯೋಗ ದಿನ ಆಚರಿಸಲು ನಿರ್ಧರಿಸಲಾಗಿದೆ. ಮುಖ್ಯ ಕಾರ್ಯಕ್ರಮವು ಶ್ರೀನಗರದ ಶೇರ್–ಇ–ಕಾಶ್ಮೀರ್ ಅಂತರರಾಷ್ಟ್ರೀಯ ಸಮ್ಮೇಳನ ಕೇಂದ್ರದಲ್ಲಿ ನಡೆಯಲಿದೆ.

No comments:

Post a Comment

ಧನ್ಯವಾದಗಳು,
ತಮ್ಮ ಅಭಿಪ್ರಾಯಗಳನ್ನು Comment ಮಾಡಿ.
ಮತ್ತೇ BLOG ಗೆ ಭೇಟಿ ನೀಡಿ.

Popular Post