Menu

Home ನಲಿಕಲಿ About ☰ Menu


 

🔍

ಕಾಣದ ಕಡಲಿಗೆ - "ಜಿ. ಎಸ್. ಶಿವರುದ್ರಪ್ಪ"

ಕಾಣದ ಕಡಲಿಗೆ
ಕಾಣದ ಕಡಲಿಗೆ ಹಂಬಲಿಸಿದೆ ಮನ
ಕಾಣಬಲ್ಲೆನೆ ಒಂದು ದಿನ ಕಡಲನು
ಕೂಡಬಲ್ಲೆನೆ ಒಂದು ದಿನ || ಕಾ ||

ಕಾಣದ ಕಡಲಿನ ಮೊರೆತದ ಜೋಗುಳ ಒಳಗಿವಿಗೆಂದು ಕೇಳುತಿದೆ
ನನ್ನ ಕಲ್ಪನೆಯು ತನ್ನ ಕಡಲನೆ ಚಿತ್ರಿಸಿ ಚಿಂತಿಸಿ ಸುರಿಯುತಿದೆ
ಎಲ್ಲಿರುವುದೋ ಅದು ಎಂತಿರುವುದೋ ಅದು
ನೋಡಬಲ್ಲೆನೆ ಒಂದು ದಿನ ಕಡಲನು ಕೂಡಬಲ್ಲೆನೆ ಒಂದು ದಿನ || ಕಾಣದ ||

ಸಾವಿರ ಹೊಳೆಗಳು ತುಂಬಿ ಹರಿದರೂ ಒಂದೇ ಸಮನಾಗಿಹುದಂತೆ
ಸುನೀಲ ವಿಸ್ತರ ತರಂಗ ಶೋಭಿತ ಗಂಭೀರಾಂಬುಧಿ ತಾನಂತೆ
ಮುನ್ನೀರಂತೆ ಅಪಾರವಂತೆ
ಕಾಣಬಲ್ಲೆನೆ ಒಂದು ದಿನ ಅದರೊಳು ಕರಗಲಾರೆನೆ ಒಂದು ದಿನ || ಕಾಣದ ||

ಜಟಿಲ ಕಾನನದ ಕುಟಿಲ ಪಥಗಳಲಿ ಹರಿವ ತೊರೆಯು ನಾನು
ಎಂದಿಗಾದರೂ ಕಾಣದ ಕಡಲಿಗೆ ಸೇರಬಲ್ಲೆನೇನು
ಸೇರಬಹುದೇ ನಾನು ಕಡಲ ನೀಲಿಯೊಳು ಕರಗಬಹುದೇ ನಾನು || ಕಾಣದ || 
                         ----------0----------

ರಚನೆ : ಜಿ. ಎಸ್. ಶಿವರುದ್ರಪ್ಪ
ಸಂಗೀತ / ಗಾಯನ : ಸಿ ಅಶ್ವಥ್

No comments:

Post a Comment

ಧನ್ಯವಾದಗಳು,
ತಮ್ಮ ಅಭಿಪ್ರಾಯಗಳನ್ನು Comment ಮಾಡಿ.
ಮತ್ತೇ BLOG ಗೆ ಭೇಟಿ ನೀಡಿ.

Popular Post