67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ರಾಜ್ಯದಾದ್ಯಂತ 'ನನ್ನ ನಾಡು ನನ್ನ ಹಾಡು - ಕೋಟಿ ಕಂಠ ಗಾಯನ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಅಕ್ಟೋಬರ್ ೨೮ ರ ಬೆಳಿಗ್ಗೆ ೧೧ ಗಂಟೆಗೆ ರಾಜ್ಯ ಸೇರಿದಂತೆ ವಿಶ್ವದ ಇತರೆ ಭಾಗದಲ್ಲಿರುವ 1 ಕೋಟಿಗೂ ಅಧಿಕ ಕನ್ನಡಿಗರಿಂದ ಕನ್ನಡದ ಹಿರಿಮೆ ಸಾರುವ ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ ನಡೆಸಲು ತಯಾರಿ ಮಾಡಿಕೊಳ್ಳಲಾಗುತ್ತಿದ್ದು, ನಾಡಗೀತೆಯಾದ ಜಯ ಭಾರತ ಜನನಿಯ ತನುಜಾತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ ವಿದ್ಯಾಚೇತನ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು, ಹಚ್ಚೇವು ಕನ್ನಡದ ದೀಪ ಸೇರಿದಂತೆ ಆಯ್ದ ೫ ಹಾಡುಗಳನ್ನು ಹಾಡಬೇಕಿದೆ. ಇವುಗಳನ್ನು ಹೊರತುಪಡಿಸಿಯೂ ಆಸಕ್ತರು ಬೇರೆ ಕನ್ನಡ ಗೀತೆಗಳನ್ನು ಸಮಯದ ಮಿತಿ ಆಧರಿಸಿ ಪ್ರಸ್ತುಪಡಿಸಬಹುದಾಗಿದೆ.
ಶಾಲಾ ಕಾಲೇಜುಗಳಲ್ಲಿ, ಕಚೇರಿಗಳಲ್ಲಿ, ವಿಶ್ವವಿದ್ಯಾಲಯಗಳು, ತಾಲೂಕು ಕೇಂದ್ರಗಳು, ದೆಹಲಿ ಕನ್ನಡ ಸಂಘ, ಹೊರನಾಡು, ಗಡಿನಾಡ ಸಂಘಗಳ ಕಚೇರಿ, ವಿಧಾನಸೌಧದ ಮೆಟ್ಟಿಲು ಹಾಗೂ ವಿಧಾನಸೌಧ-ವಿಕಾಸ ಸೌಧದ ಮಧ್ಯೆ ಇರುವ ಗಾಂಧಿ ಪ್ರತಿಮೆ ಎದುರು, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಸಮೂಹ ಗಾಯನ ನಡೆಸುವರು.
ಅದೇ ರೀತಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಮೆಜೆಸ್ಟಿಕ್ ರೈಲು ನಿಲ್ದಾಣ, ಮೆಟ್ರೋ ನಿಲ್ದಾಣದಲ್ಲೂ ಈ ಐದು ಕನ್ನಡ ಗೀತೆಗಳನ್ನು ಹಾಡುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ನಾಡಿನ ಪ್ರಮುಖ ಪ್ರವಾಸಿ ಸ್ಥಾನಗಳು, ಕೋಟೆಗಳು, ಕಡಲತೀರ, ಐಟಿ ಕಂಪನಿಗಳು, ಆಸ್ಪತ್ರೆ ಹಾಗೂ ಜಿಲ್ಲಾ ಕೇಂದ್ರಗಳಲ್ಲೂ ಕೋಟಿ ಕಂಠ ಗಾಯನ ಅಭಿಯಾನ ನಡೆಯಲಿದೆ.
೬ ಹಾಡುಗಳನ್ನು ಈ ಕೆಳಗೆ ನೀಡಲಾಗಿದೆ (ಸೂಚನೆ: *ಹಾಡುಗಳ ಹೆಸರಿನ ಮೇಲೆ ಒತ್ತಿ ಹಾಡಿನ ಸಾಹಿತ್ಯವನ್ನು ಪಡೆಯಿರಿ.
*ಆಡಿಯೋ ಮೇಲೆ ಒತ್ತಿ ಹಾಡು ಕೇಳಿ & ಡೌನ್ಲೋಡ್ ಮಾಡಿಕೊಳ್ಳಬಹುದು)
೫. ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು..
#ನನ್ನ ನಾಡು ನನ್ನ ಹಾಡು.
ಕೋಟಿ ಕಂಠ ಗಾಯನ.
ಗಾಯನದಲ್ಲಿ ಭಾಗವಹಿಸಲು ದಯವಿಟ್ಟು ಈ ಕ್ಯೂಆರ್ ಕೋಡ್ ಅಥವಾ ಈ ಕೆಳಗೆ ನೀಡಿದ ಲಿಂಕ್ ಉಪಯೋಗಿಸಿ ನೋಂದಾಯಿಸಿಕೊಳ್ಳಿ.
++++++++++೦++++++++++
ಕನ್ನಡ ದೇಶ ಭಕ್ತಿ ಗೀತೆಗಳಿಗಾಗಿ ಇಲ್ಲಿ ಒತ್ತಿ...
No comments:
Post a Comment
ಧನ್ಯವಾದಗಳು,
ತಮ್ಮ ಅಭಿಪ್ರಾಯಗಳನ್ನು Comment ಮಾಡಿ.
ಮತ್ತೇ BLOG ಗೆ ಭೇಟಿ ನೀಡಿ.