ಮೆಟ್ರಿಕ್-ಪೂರ್ವ ವಿದ್ಯಾರ್ಥಿವೇತನ | ||||||||||||||||
ಮೆಟ್ರಿಕ್-ಪೂರ್ವ ವಿದ್ಯಾರ್ಥಿವೇತನದ ದರಗಳು | ||||||||||||||||
(ಸರ್ಕಾರದ ಆದೇಶ ಸಂ.ಬಿಸಿಡಬ್ಲ್ಯೂ 620 ಬಿಎಂಎಸ್ 2014, ದಿನಾಂಕ 7.1.2015ರಂತೆ) | ||||||||||||||||
| ||||||||||||||||
ವಿಶೇಷ ಸೂಚನೆ: ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆ ಗೆ ಆಧಾರ್ ಸಂಖ್ಯೆಯನ್ನು ಜೋಡಣೆ (link) ಮಾಡಿಸತಕ್ಕದ್ದು. | ||||||||||||||||
ಅರ್ಹತೆಗಳು : | ||||||||||||||||
1.ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. | ||||||||||||||||
2.ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ.44,500/-ರ ಒಳಗೆ ಇರಬೇಕು. | ||||||||||||||||
3.ಸರ್ಕಾರದ / ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ /ಅನುದಾನರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಅರ್ಹರು. | ||||||||||||||||
4.ಸರ್ಕಾರದ / ಸರ್ಕಾರದ ಅನುದಾನಿತ ವಿದ್ಯಾರ್ಥಿನಿಲಯಗಳಲ್ಲಿ/ವಸತಿಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ಅರ್ಹರಿರುವುದಿಲ್ಲ. | ||||||||||||||||
5.ಹಿಂದಿನ ತರಗತಿಯಲ್ಲಿ ಶೇ.75 ಕ್ಕಿಂತ ಹೆಚ್ಚು ಹಾಜರಾತಿ ಹೊಂದಿದವರು ಮಾತ್ರ ಅರ್ಹರು. | ||||||||||||||||
6.ಹಿಂದಿನ ತರಗತಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು, ವಿದ್ಯಾರ್ಥಿವೇತನ ಪಡೆಯಲು ಅರ್ಹರಿರುವುದಿಲ್ಲ. | ||||||||||||||||
ಆಯ್ಕೆ ವಿಧಾನ : | ||||||||||||||||
1.ಮೊದಲನೇ ಆದ್ಯತೆ: ಎಲ್ಲಾ ಅರ್ಹ ನವೀಕರಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮಂಜೂರು ಮಾಡುವುದು. | ||||||||||||||||
2.ಎರಡನೇ ಆದ್ಯತೆ: ಹಿಂದುಳಿದ ವರ್ಗಗಳ ಪ್ರವರ್ಗ-1ರ ಎಲ್ಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಮಂಜೂರು ಮಾಡುವುದು. | ||||||||||||||||
3.ಮೂರನೇ ಆದ್ಯತೆ: ಉಳಿದ ಮೊತ್ತವನ್ನು ಅರ್ಹವಿರುವ ಪ್ರವರ್ಗ-2ಎ, 3ಎ, 3ಬಿ ಮತ್ತು ಇತರೆ ಹಿಂದುಳಿದ ವರ್ಗಗಳ(ಕೇಂದ್ರ ಸರ್ಕಾರದ ಹಿಂದುಳಿದ ವರ್ಗದ ಪಟ್ಟಿಯಲ್ಲಿ ಇರುವ ಜಾತಿಗಳು ಮಾತ್ರ) ವಿದ್ಯಾರ್ಥಿಗಳಿಗೆ ಆದಾಯ ಮತ್ತು ಅರ್ಹತೆಯ ಆಧಾರದ ಮೇಲೆ ಈ ಕೆಳಕಂಡ ಪ್ರಮಾಣದಂತೆ ವಿದ್ಯಾರ್ಥಿವೇತನ ಮಂಜೂರು ಮಾಡುವುದು. | ||||||||||||||||
| ||||||||||||||||
ಮಂಜೂರಾತಿ ವಿಧಾನ : | ||||||||||||||||
1.ಮೆಟ್ರಿಕ್-ಪೂರ್ವ ವಿದ್ಯಾರ್ಥಿವೇತನ ಸೌಲಭ್ಯವನ್ನು ಪಡೆಯಲು ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಿ ಸಾರ್ವಜನಿಕ ಪ್ರಕಟಣೆ ಹೊರಡಿಸುವುದು. | ||||||||||||||||
2.ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿಗಳನ್ನು ಆನ್ ಲೈನ್ ಮೂಲಕ ಪರಿಶೀಲಿಸಿ, ಅರ್ಹ ಅರ್ಜಿಗಳನ್ನು ದೃಢೀಕರಿಸುವುದು. | ||||||||||||||||
3.ಇಲಾಖೆಯ ಮೆಟ್ರಿಕ್-ಪೂರ್ವ ವಿದ್ಯಾರ್ಥಿವೇತನ SSP ತಂತ್ರಾಂಶದಲ್ಲಿ ವಿದ್ಯಾರ್ಥಿಗಳ ಮಾಹಿತಿಯನ್ನು ಭರ್ತಿ ಮಾಡುವುದು. | ||||||||||||||||
4.ಭರ್ತಿ ಮಾಡಿರುವ ಮಾಹಿತಿಯನ್ನು ಪರಿಶೀಲಿಸಿ, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ದೃಢೀಕರಿಸುವುದು. | ||||||||||||||||
5.ಆಯ್ಕೆಯಾದ ಅರ್ಹ ಅರ್ಜಿಗಳಿಗೆ ಆಯಾ ವರ್ಷದ ಆಯವ್ಯಯಕ್ಕೆ ಅನುಗುಣವಾಗಿ, ಮೀಸಲಾತಿ ನೀತಿಯನ್ವಯ ವಿದ್ಯಾರ್ಥಿವೇತನವನ್ನು ಮಂಜೂರು ಮಾಡಿ ಆಧಾರ್ ಪಾವತಿ ವ್ಯವಸ್ಥೆ (Aadhar Bridge Payment System) ಮೂಲಕ ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡುವುದು. |
ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ | |||||||||||||||
ಮೆಟ್ರಿಕ್-ನಂತರದ ವಿದ್ಯಾರ್ಥಿವೇತನದ ದರಗಳು | |||||||||||||||
(ಸರ್ಕಾರದ ಆದೇಶ ಸಂ.ಬಿಸಿಡಬ್ಲ್ಯೂ 518 ಬಿಎಂಎಸ್ 2013, ದಿನಾಂಕ 3.9.2013ರಂತೆ) | |||||||||||||||
| |||||||||||||||
ವಿಶೇಷ ಸೂಚನೆ: ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆ ಗೆ ಆಧಾರ್ ಸಂಖ್ಯೆಯನ್ನು ಜೋಡಣೆ (link) ಮಾಡಿಸತಕ್ಕದ್ದು. | |||||||||||||||
ಅರ್ಹತೆಗಳು : | |||||||||||||||
1.ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು ಹಾಗೂ ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಧಿಸೂಚಿಸಿರುವ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿರಬೇಕು. | |||||||||||||||
2. ಕರ್ನಾಟಕದ ಶಾಸನಬದ್ಧ ವಿಶ್ವ ವಿದ್ಯಾಲಯಗಳ ಅಧೀನಕ್ಕೆ ಒಳಪಡುವ ಸರ್ಕಾರಿ / ಸ್ಥಳೀಯ ಸಂಸ್ಥೆ/ ಅನುದಾನಿತ ಸಂಸ್ಥೆ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಸಂಸ್ಥೆಗಳಲ್ಲಿ ಮೆಟ್ರಿಕ್-ನಂತರದ ಶಿಕ್ಷಣವನ್ನು ಪಡೆಯುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ ಪಡೆಯಲು ಅರ್ಹರಿರುತ್ತಾರೆ. | |||||||||||||||
3. ಸರ್ಕಾರದ ವಿದ್ಯಾರ್ಥಿನಿಲಯಗಳಲ್ಲಿ / ವಸತಿ ಕಾಲೇಜುಗಳಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಹರಿರುವುದಿಲ್ಲ. | |||||||||||||||
4.ವಾರ್ಷಿಕ ಆದಾಯಮಿತಿ ಪ್ರವರ್ಗ-1ರ ವಿದ್ಯಾರ್ಥಿಗಳಿಗೆ ರೂ.2.50 ಲಕ್ಷ, ಪ್ರವರ್ಗ-2ಎ, 3ಎ, ಮತ್ತು 3ಬಿ ವಿದ್ಯಾರ್ಥಿಗಳಿಗೆ- ರೂ.1.00 ಲಕ್ಷ ನಿಗದಿಪಡಿಸಿದೆ. | |||||||||||||||
5.ಹೊಸ ಮತ್ತು ನವೀಕರಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಹಿಂದಿನ ತರಗತಿಗಳಲ್ಲಿ ನಿಗದಿಪಡಿಸಿರುವ ಕನಿಷ್ಠ ಅಂಕ | |||||||||||||||
| |||||||||||||||
6. ಸಮಾನ ಕೋರ್ಸುಗಳಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ವ್ಯಾಸಂಗ ಮಾಡುತ್ತಿದ್ದಲ್ಲಿ, ವಿದ್ಯಾರ್ಥಿವೇತನಕ್ಕೆ ಅರ್ಹರಿರುವುದಿಲ್ಲ. | |||||||||||||||
7. ಒಂದೇ ಕುಟುಂಬದ ಇಬ್ಬರು ಗಂಡು ಮಕ್ಕಳು ಮಾತ್ರ ಈ ಯೋಜನೆಗೆ ಅರ್ಹರು. ಈ ನಿರ್ಬಂಧ ಹೆಣ್ಣು ಮಕ್ಕಳಿಗೆ ಅನ್ವಯಿಸುವುದಿಲ್ಲ. | |||||||||||||||
8. ವಿವಿಧ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿಗಳಿಗೆ ಕೋರ್ಸಿನ ಗುಂಪುವಾರು ಪ್ರತಿ ತಿಂಗಳಿಗೆ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನವನ್ನು10 ತಿಂಗಳ ಅವಧಿಗೆ ಅರ್ಹತೆ ಮತ್ತು ಆದಾಯಮಿತಿಯನ್ನು ಪರಿಗಣಿಸಿ, ಮಂಜೂರು ಮಾಡಲಾಗುವುದು. | |||||||||||||||
ಮಂಜೂರಾತಿ ವಿಧಾನ : | |||||||||||||||
1.ಆನ್‍ಲೈನ್ ಮೂಲಕ SSP ತಂತ್ರಾಂಶದಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗುವುದು. | |||||||||||||||
2.ವಿದ್ಯಾರ್ಥಿಗಳು ನಿಗದಿತ ದಾಖಲೆಗಳು ಹಾಗೂ ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಐ.ಎಫ್.ಸಿ.ಕೋಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಿಂದಿನ ತರಗತಿಯ ಅಂಕಪಟ್ಟಿ ಇತ್ಯಾದಿ ಮಾಹಿತಿಯೊಂದಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹಾಗೂ ಹಾರ್ಡ್ ಕಾಪಿಯನ್ನು ಸಂಬಂಧಪಟ್ಟ ಕಾಲೇಜುಗಳಿಗೆ ಸಲ್ಲಿಸುವುದು. | |||||||||||||||
3.ಕಾಲೇಜು ಪ್ರಾಂಶುಪಾಲರು ಮತ್ತು ಪರಿಶೀಲನಾ ಅಧಿಕಾರಿಗಳು ಆಯಾ ಹಂತದಲ್ಲಿ ಅರ್ಜಿ ಹಾಗೂ ದಾಖಲೆಗಳನ್ನು ಪರಿಶೀಲಿಸಿ, ಆನ್‍ಲೈನ್‍ನಲ್ಲಿ ದೃಢೀಕರಿಸಿ ಸದರಿ ದಾಖಲೆಗಳನ್ನು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ಸಲ್ಲಿಸಬೇಕು. | |||||||||||||||
4.ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪರಿಶೀಲಿಸಿ, ಆನ್‍ಲೈನ್‍ನಲ್ಲಿ ದೃಢೀಕರಿಸುವುದು. | |||||||||||||||
5.ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಸದರಿ ಮಾಹಿತಿಯ ಪರಿಶೀಲನೆಯನ್ನು ಮಾಡುವುದು. | |||||||||||||||
6.ಆಯಾ ವರ್ಷದಲ್ಲಿ ಲಭ್ಯವಾಗುವ ಜಿಲ್ಲಾವಾರು ಅನುದಾನಕ್ಕೆ ತಕ್ಕಂತೆ ಅರ್ಹತೆ ಮತ್ತು ಅಂಕಗಳ ಆಧಾರದ ಮೇಲೆ ಅರ್ಹ ವಿದ್ಯಾರ್ಥಿಗಳಿಗೆ ತಾಲ್ಲೂಕು ಹಂತದಲ್ಲಿ ವಿದ್ಯಾರ್ಥಿವೇತನವನ್ನು ಮಂಜೂರುಮಾಡುವುದು. | |||||||||||||||
7.ಆಯ್ಕೆಯಾದ ಅರ್ಹ ಅರ್ಜಿಗಳಿಗೆ ಆಯಾ ವರ್ಷದ ಆಯವ್ಯಯಕ್ಕೆ ಅನುಗುಣವಾಗಿ, ಮೀಸಲಾತಿ ನೀತಿಯನ್ವಯ ವಿದ್ಯಾರ್ಥಿವೇತನವನ್ನು ಮಂಜೂರು ಮಾಡಿ ಖಜಾನೆ-2 ತಂತ್ರಾಂಶದ ಮೂಲಕ ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾಮಾಡುವುದು. |
ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ | |||||||||||||||
ವಿಶೇಷ ಸೂಚನೆ: ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆ ಗೆ ಆಧಾರ್ ಸಂಖ್ಯೆಯನ್ನು ಜೋಡಣೆ (link) ಮಾಡಿಸತಕ್ಕದ್ದು. | |||||||||||||||
ಅರ್ಹತೆಗಳು : | |||||||||||||||
1.ಅ) ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು. ಆ) ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಧಿಸೂಚಿಸಿರುವ, ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿರಬೇಕು. ಇ) ಕರ್ನಾಟಕದ ಶಾಸನಬದ್ದ ವಿಶ್ವವಿದ್ಯಾಲಯಗಳ ಅಧೀನಕ್ಕೆ ಒಳಪಡುವ, ಸರ್ಕಾರಿ / ಸ್ಥಳೀಯ ಸಂಸ್ಥೆ/ ಅನುದಾನಿತ ಸಂಸ್ಥೆಗಳು / ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಸಂಸ್ಥೆಗಳಲ್ಲಿ - ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾಗಿರಬೇಕು. | |||||||||||||||
2.ಯಾವುದೇ ಇಲಾಖೆಯ ಸರ್ಕಾರಿ / ಸರ್ಕಾರಿ ಅನುದಾನಿತ ವಿದ್ಯಾರ್ಥಿನಿಲಯ / ವಸತಿ ಕಾಲೇಜುಗಳಲ್ಲಿ, ಪ್ರವೇಶ ದೊರೆಯದ ಹಾಗೂ ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ, ವಿದ್ಯಾಸಿರಿ- ಊಟ ಮತ್ತು ವಸತಿ ಕಾರ್ಯಕ್ರಮದಲ್ಲಿ ಮಂಜೂರಾತಿ ನೀಡಲಾಗುವುದು. | |||||||||||||||
3.ಈ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ, ಪ್ರತಿ ತಿಂಗಳಿಗೆ ರೂ.1500/-ರಂತೆ, ಶೈಕ್ಷಣಿಕ ಅವಧಿಯಲ್ಲಿ ಪ್ರತಿ ವರ್ಷ 10 ತಿಂಗಳಿಗೆ ಒಟ್ಟು ರೂ.15,000/- ಸಹಾಯಧನವನ್ನು, ಇತರೆ ನಿಬಂಧನೆಗಳಿಗೊಳಪಟ್ಟು, ವಿದ್ಯಾರ್ಥಿಗಳು ಯಾವುದಾದರೂ ಕೋರ್ ಬ್ಯಾಂಕಿಂಗ್ ವ್ಯವಸ್ಥೆ ಇರುವ ಬ್ಯಾಂಕಿನಲ್ಲಿ ತೆರೆದಿರುವ ಬ್ಯಾಂಕ್ ಖಾತೆಗೆ, ಆನ್‍ಲೈನ್ ಮೂಲಕ ಜಮಾ ಮಾಡಲಾಗುವುದು. | |||||||||||||||
4.ವಿದ್ಯಾರ್ಥಿಗಳು (i) ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ, (ii) ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು (iii) ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ-ಇವುಗಳಲ್ಲಿ ಯಾವುದಾದರೂ ಒಂದು ಸೌಲಭ್ಯಕ್ಕೆ ಮಾತ್ರ ಅರ್ಹರಿರುತ್ತಾರೆ. | |||||||||||||||
5.ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹರಾದವರು, ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. | |||||||||||||||
6.ಅ) ಈ ಮೇಲಿನ ಸೌಲಭ್ಯ ಪಡೆಯಲು ವಿದ್ಯಾರ್ಥಿಯ, ತಂದೆ-ತಾಯಿ/ಪೋಷಕರ ಕುಟುಂಬದ, ಒಟ್ಟು ವಾರ್ಷಿಕ ಇ) ಹೊಸ ಮತ್ತು ನವೀಕರಣ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆಯಲು ಈ ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಈ ಕೆಳಗಿನಂತೆ ಕನಿಷ್ಠ ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. | |||||||||||||||
| |||||||||||||||
(ಒಂದು ವೇಳೆ, ವೈದ್ಯಕೀಯ ಕಾರಣಗಳಿಂದಾಗಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದಿದ್ದಲ್ಲಿ, ಅಂತಹವರು, ವೈದ್ಯಕೀಯ ಮಂಡಳಿಯಿಂದ ಪ್ರಮಾಣ ಪತ್ರ ಪಡೆದು ಸಲ್ಲಿಸಬೇಕು.) | |||||||||||||||
7. ಅ) ಸಮಾನ ಕೋರ್ಸುಗಳಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ವ್ಯಾಸಂಗ ಮಾಡುತ್ತಿದ್ದಲ್ಲಿ ಅಂತಹವರು ಅರ್ಹರಿರುವುದಿಲ್ಲ.(ಉದಾ: ಬಿ.ಎ ನಂತರ ಬಿ.ಕಾಂ, ಎಂ.ಎ (ಕನ್ನಡ) ನಂತರ ಎಂ.ಎ (ಇಂಗ್ಲೀಷ್), ಬಿ.ಇಡ್ ನಂತರ ಎಲ್.ಎಲ್.ಬಿ, ಇತ್ಯಾದಿಗಳಿಗೆ ಪ್ರವೇಶ ಪಡೆದಿದ್ದಲ್ಲಿ) ಆ) ಸ್ನಾತಕೋತ್ತರ ವೈದ್ಯಕೀಯ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು, ಕೋರ್ಸಿನ ಅವಧಿಯಲ್ಲಿ ಮೆಡಿಕಲ್ ಪ್ರಾಕ್ಟೀಸ್ ಮಾಡುತ್ತಿದ್ದಲ್ಲಿ, ಈ ಸೌಲಭ್ಯಕ್ಕೆ ಅರ್ಹರಿರುವುದಿಲ್ಲ. ಇ) ಕಲೆ, ವಿಜ್ಞಾನ, ಹಾಗೂ ವಾಣಿಜ್ಯ ಕೋರ್ಸುಗಳ, ಪದವಿ ಅಥವಾ ಸ್ನಾತಕೋತ್ತರ ಪದವಿಗಳಲ್ಲಿ ಉತ್ತೀರ್ಣ / ಅನುತ್ತೀರ್ಣರಾದವರು ಅಂಗೀಕೃತ ವೃತ್ತಿಪರ ಅಥವಾ ತಾಂತ್ರಿಕ ಸರ್ಟಿಫಿಕೇಟ್, ಡಿಪ್ಲೋಮ, ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡಿದ್ದಲ್ಲಿ, ಹಾಗೂ ಇತರೆ ರೀತಿ ಅರ್ಹರಿದ್ದಲ್ಲಿ ಅವರು ಈ ಯೋಜನೆಯ ಅಡಿ ಸೌಲಭ್ಯಗಳಿಗೆ ಅರ್ಹರಿರುತ್ತಾರೆ. ಒಂದಕ್ಕಿಂತ ಹೆಚ್ಚು ಬಾರಿ ಕೋರ್ಸುಗಳ ಬದಲಾವಣೆ ಮಾಡಿಕೊಂಡವರು ಅರ್ಹರಿರುವುದಿಲ್ಲ. ಈ) ಒಂದೇ ಕುಟುಂಬದ ಇಬ್ಬರು ಗಂಡು ಮಕ್ಕಳು ಮಾತ್ರ ಈ ಯೋಜನೆಗೆ ಅರ್ಹರು. ಆದರೆ, ಈ ನಿರ್ಬಂಧ ಹೆಣ್ಣು ಮಕ್ಕಳಿಗೆ ಅನ್ವಯಿಸುವುದಿಲ್ಲ. | |||||||||||||||
8. ಪ್ರತಿ ಮಾಹೆ ವಿದ್ಯಾರ್ಥಿಯ ತರಗತಿ ಹಾಜರಾತಿ ಕನಿಷ್ಟ ಶೇ.75 ರಷ್ಟಿರಬೇಕು. | |||||||||||||||
ಅನುದಾನ ಹಂಚಿಕೆ ವಿಧಾನ : | |||||||||||||||
(ಅ) ಆಯಾ ಶೈಕ್ಷಣಿಕ ವರ್ಷದಲ್ಲಿ ಲಭ್ಯವಾಗುವ ಅನುದಾನವನ್ನು ಪ್ರವರ್ಗವಾರು ಈ ಕೆಳಗಿನ ಮೀಸಲಾತಿಯಂತೆ ಮರು ಹಂಚಿಕೆ ಮಾಡಲಾಗುವುದು. | |||||||||||||||
ಪ್ರವರ್ಗವಾರು ಹಂಚಿಕೆ ಮಾಡಬೇಕಾಗಿರುವ ಮೊತ್ತದ ಶೇಕಡಾವಾರು | |||||||||||||||
| |||||||||||||||
(ಆ) ಆರ್ಥಿಕ ವರ್ಷಕ್ಕೆ ಲಭ್ಯವಾಗುವ ಅನುದಾನದ ಮಿತಿಗೆ ಒಳಪಟ್ಟು, ಅರ್ಹತೆ ಮತ್ತು ಆದಾಯಕ್ಕೆ (Merit cum Means) ಅನುಗುಣವಾಗಿ ಮಂಜೂರು ಮಾಡಬೇಕು. | |||||||||||||||
ಮಂಜೂರಾತಿ ವಿಧಾನ : | |||||||||||||||
1.ಆನ್‍ಲೈನ್ ಮೂಲಕ SSP ತಂತ್ರಾಂಶದಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗುವುದು. | |||||||||||||||
2.ವಿದ್ಯಾರ್ಥಿಗಳು ನಿಗದಿತ ದಾಖಲೆಗಳು ಹಾಗೂ ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಐ.ಎಫ್.ಸಿ.ಕೋಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಿಂದಿನ ತರಗತಿಯ ಅಂಕಪಟ್ಟಿಯ ಮಾಹಿತಿಯೊಂದಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹಾಗೂ ಹಾರ್ಡ್ ಕಾಪಿಯನ್ನು ಸಂಬಂಧಪಟ್ಟ ಕಾಲೇಜುಗಳಿಗೆ ಸಲ್ಲಿಸುವುದು. | |||||||||||||||
3.ಕಾಲೇಜು ಪ್ರಾಂಶುಪಾಲರು ಮತ್ತು ಪರಿಶೀಲನಾ ಅಧಿಕಾರಿಗಳು ಆಯಾ ಹಂತದಲ್ಲಿ ಅರ್ಜಿ ಹಾಗೂ ದಾಖಲೆಗಳನ್ನು ಪರಿಶೀಲಿಸಿ, ಆನ್‍ಲೈನ್‍ನಲ್ಲಿ ದೃಢೀಕರಿಸಿ ಸದರಿ ದಾಖಲೆಗಳನ್ನು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ಸಲ್ಲಿಸಬೇಕು. | |||||||||||||||
4.ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪರಿಶೀಲಿಸಿ, ಆನ್‍ಲೈನ್‍ನಲ್ಲಿ ದೃಢೀಕರಿಸುವುದು. | |||||||||||||||
5.ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಸದರಿ ಮಾಹಿತಿಯ ಪರಿಶೀಲನೆಯನ್ನು ಮಾಡುವುದು. | |||||||||||||||
6.ಈ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಯ ಹಾಜರಾತಿ ಪ್ರತಿ ಮಾಹೆ ಕನಿಷ್ಠ ಶೇ.75 ರಷ್ಟು ಇರುವುದನ್ನು ಕಾಲೇಜು ಪ್ರಾಂಶುಪಾಲರಿಂದ ಪಡೆದು, ಆನ್‍ಲೈನ್‍ನಲ್ಲಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಅಪ್‍ಲೋಡ್ ಮಾಡುವುದು. | |||||||||||||||
7.ಆಯಾ ವರ್ಷದ ಆಯವ್ಯಯಕ್ಕನುಗುಣವಾಗಿ ಅರ್ಹತೆ ಮತ್ತು ಅಂಕಗಳ ಆಧಾರದ ಮೇಲೆ ಅರ್ಹ ವಿದ್ಯಾರ್ಥಿಗಳಿಗೆ ತಾಲ್ಲೂಕು ಹಂತದಲ್ಲಿ ವಿದ್ಯಾಸಿರಿ ಊಟ ಮತ್ತು ವಸತಿ ಸೌಲಭ್ಯವನ್ನು ಮಂಜೂರು ಮಾಡುವುದು. | |||||||||||||||
8.ಮಂಜೂರಾದ ಮೊತ್ತವನ್ನು ಸಂಬಂಧಿತ ವಿದ್ಯಾರ್ಥಿಗಳಿಗೆ ಬ್ಯಾಂಕ್ ಖಾತೆಗೆ ನೇರವಾಗಿ ಖಜಾನೆ-2 ತಂತ್ರಾಂಶದ ಮೂಲಕ ಪಾವತಿಸುವುದು. |
ಶುಲ್ಕ ವಿನಾಯಿತಿ | ||||||||||||
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ನೆರವಾಗುವ ದೃಷ್ಟಿಯಿಂದ ಸರ್ಕಾರವು, ಸರ್ಕಾರದ ಕಾಲೇಜುಗಳಿಗೆ ನಿಗದಿಪಡಿಸುವ ಶುಲ್ಕದ ದರಗಳನ್ನು ಸಂಬಂಧಪಟ್ಟ ವಿದ್ಯಾರ್ಥಿಯ ಕಾಲೇಜಿನ ಪ್ರಾಂಶುಪಾಲರ ಖಾತೆಗೆ ಜಮಾಗೊಳಿಸಲಾಗುವುದು. | ||||||||||||
ವಿಶೇಷ ಸೂಚನೆ: ವಿದ್ಯಾರ್ಥಿಗಳು ಖಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆ ಗೆ ಆಧಾರ್ ಸಂಖ್ಯೆಯನ್ನು ಜೋಡಣೆ (link) ಮಾಡಿಸತಕ್ಕದ್ದು. | ||||||||||||
ಅರ್ಹತೆಗಳು: | ||||||||||||
1.ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು ಹಾಗೂ ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಧಿಸೂಚಿಸಿರುವ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿರಬೇಕು. | ||||||||||||
2.ಕರ್ನಾಟಕದ ಶಾಸನಬದ್ಧ ವಿಶ್ವ ವಿದ್ಯಾಲಯಗಳ ಅಧೀನಕ್ಕೆ ಒಳಪಡುವ ಸರ್ಕಾರಿ / ಸ್ಥಳೀಯ ಸಂಸ್ಥೆ/ ಅನುದಾನಿತ ಸಂಸ್ಥೆ / ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಸಂಸ್ಥೆಗಳಲ್ಲಿ – ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾಗಿರಬೇಕು. | ||||||||||||
3.ಈ ಸೌಲಭ್ಯವನ್ನು ಪಡೆಯಲು ವಿದ್ಯಾರ್ಥಿಯ ತಂದೆ-ತಾಯಿ/ಪೋಷಕರ ಕುಟುಂಬದ ವಾರ್ಷಿಕ ವರಮಾನ ಈ ಕೆಳಗೆ ನಿಗದಿಪಡಿಸಿದ ಗರಿಷ್ಠ ಮಿತಿಯೊಳಗೆ ಇರಬೇಕು.
| ||||||||||||
4.ಹೊಸ ಮತ್ತು ನವೀಕರಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಈ ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಈ ಕೆಳಗಿನಂತೆ ಕನಿಷ್ಠ ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. | ||||||||||||
| ||||||||||||
5.ಅ) ಸಮಾನ ಕೋರ್ಸುಗಳಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ವ್ಯಾಸಂಗ ಮಾಡುತ್ತಿದ್ದಲ್ಲಿ, ಅಂತಹವರು ಅರ್ಹರಿರುವುದಿಲ್ಲ. ಆ) ಸ್ನಾತಕೋತ್ತರ, ವೈದ್ಯಕೀಯ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಕೋರ್ಸಿನ ಅವಧಿಯಲ್ಲಿ ಮೆಡಿಕಲ್ ಪ್ರಾಕ್ಟೀಸ್ ಮಾಡುತ್ತಿದ್ದಲ್ಲಿ, ಈ ಸೌಲಭ್ಯಕ್ಕೆ ಅರ್ಹರಿರುವುದಿಲ್ಲ. ಇ) ಕಲೆ, ವಿಜ್ಞಾನ ಹಾಗೂ ವಾಣಿಜ್ಯ ಕೋರ್ಸುಗಳ, ಪದವಿ ಅಥವಾ ಸ್ನಾತಕೋತ್ತರ ಪದವಿಗಳಲ್ಲಿ ಉತ್ತೀರ್ಣ / ಅನುತ್ತೀರ್ಣರಾದವರು ಅಂಗೀಕೃತ ವೃತ್ತಿಪರ ಅಥವಾ ತಾಂತ್ರಿಕ ಸರ್ಟಿಫಿಕೇಟ್, ಡಿಪ್ಲೋಮಾ, ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡಿದ್ದಲ್ಲಿ ಹಾಗೂ ಇತರೆ ರೀತಿ ಅರ್ಹರಿದ್ದಲ್ಲಿ ಅವರು ಈ ಯೋಜನೆಯ ಅಡಿ ಸೌಲಭ್ಯಗಳಿಗೆ ಅರ್ಹರಿರುತ್ತಾರೆ. ಒಂದಕ್ಕಿಂತ ಹೆಚ್ಚು ಬಾರಿ ಕೋರ್ಸುಗಳ ಬದಲಾವಣೆ ಮಾಡಿಕೊಂಡವರು ಅರ್ಹರಿರುವುದಿಲ್ಲ. ಈ) ಒಂದೇ ಕುಟುಂಬದ ಇಬ್ಬರು ಗಂಡು ಮಕ್ಕಳು ಮಾತ್ರ ಈ ಯೋಜನೆಗೆ ಅರ್ಹರು. ಆದರೆ, ಈ ನಿರ್ಬಂಧ ಹೆಣ್ಣು ಮಕ್ಕಳಿಗೆ ಅನ್ವಯಿಸುವುದಿಲ್ಲ. | ||||||||||||
6.ಅ) ಶುಲ್ಕ ವಿನಾಯಿತಿಗೆ ಅರ್ಹ ಇರುವ ಶುಲ್ಕಗಳು:ರಾಜ್ಯಮಟ್ಟದ ಸಮಿತಿಯು ನಿಗದಿಪಡಿಸುವ ದರಗಳಂತೆ ಈ ಕೆಳಗಿನ ಐದು ಶುಲ್ಕಗಳಿಗೆ ಮಾತ್ರ ವಿನಾಯಿತಿ ನೀಡಲಾಗುವುದು. ಅ) ಬೋಧನಾ ಶುಲ್ಕ ಆ) ಪ್ರಯೋಗಾಲಯ ಶುಲ್ಕ (ಯಾವ ಕೋರ್ಸುಗಳಲ್ಲಿ ಪ್ರಯೋಗಾಲಯ ಕಡ್ಡಾಯವಿದೆಯೋ ಆ ಕೋರ್ಸುಗಳಿಗೆ ಮಾತ್ರ) ಇ) ಪರೀಕ್ಷಾ ಶುಲ್ಕ ಈ) ಕ್ರೀಡಾ ಶುಲ್ಕ ಉ) ಗ್ರಂಥಾಲಯ ಶುಲ್ಕ | ||||||||||||
ಆ) Readers Charges ದರಗಳು: | ||||||||||||
ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಮೇಲಿನ ದರಗಳಂತೆ ಶುಲ್ಕ ವಿನಾಯಿತಿ ನೀಡುವುದರ ಜೊತೆಗೆ ಈ ಕೆಳಗಿನಂತೆ ಖeಚಿಜeಡಿs ಅhಚಿಡಿges ಅನ್ನು ಸಹ ಪಾವತಿಸಲಾಗುವುದು. | ||||||||||||
|
: ಮಾಹಿತಿ ಮೂಲ :
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ,
ಕರ್ನಾಟಕ ಸರ್ಕಾರ
No comments:
Post a Comment
ಧನ್ಯವಾದಗಳು,
ತಮ್ಮ ಅಭಿಪ್ರಾಯಗಳನ್ನು Comment ಮಾಡಿ.
ಮತ್ತೇ BLOG ಗೆ ಭೇಟಿ ನೀಡಿ.