ಶಿಕ್ಷಕರಿಗೆ ತಮ್ಮ ದಾಖಲೆಗಳನ್ನು ಆನ್‌ಲೈನ್‌ನಲ್ಲಿ ನಿರ್ವಹಿಸಲು ಸಹಾಯ ಮಾಡಲು ಮತ್ತು ಅವರ ಕೆಲಸದ ಹೊರೆ ಕಡಿಮೆ ಮಾಡಲು ತಮ್ಮ ಕೆಲಸಗಳಿಗಾಗಿ ಶಾಲೆಗಳಿಗೆ ರಜೆ ಹಾಕಿ ಇಲಾಖೆಯ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಸಲುವಾಗಿ ಶಿಕ್ಷಕರುಗಳಿಗೆ ಅನುಕೂಲವಾಗುವಂತೆ 2019-20ರ ಆಯವ್ಯಯದಲ್ಲಿ ಪ್ರಕಟಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ತಂತ್ರಜ್ಞಾನಾಧಾರಿತ ಶಿಕ್ಷಕ ಮಿತ್ರ-ಆ್ಯಪ್ ತಯಾರಿಸಲಾಗಿದೆ.
ಶಿಕ್ಷಕರು ಮೊಬೈಲ್‍ನಲ್ಲಿ ಈ ಆ್ಯಪ್ ಅನ್ನು ಡೌನ್‍ಲೋಡ್ ಮಾಡಿಕೊಂಡು ತಾವು ಕುಳಿತಲ್ಲೇ ತಮ್ಮ ಸೇವಾ ವಿಷಯಗಳನ್ನು, ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು. ಅಲ್ಲದೆ,ನಿರ್ದಿಷ್ಟ ಸಮಸ್ಯೆಗಳನ್ನು ಇಂತಿಷ್ಟು ದಿನಗಳಲ್ಲಿ ಬಗೆಹರಿಸುವ ಬಗ್ಗೆ ಕಾಲಾವಧಿಯನ್ನೂ ನಿರ್ಧರಿಸಲಾಗಿದೆ.
ಶಿಕ್ಷಕರ ಮಿತ್ರ ಆ್ಯಪ್ ನಲ್ಲಿ ಶಿಕ್ಷಕರಿಗಾಗಿ ಸೇವೆಗಳು :
- ರಜಾ ಅರ್ಜಿ.
- ನಿಯಮ 32 ಮತ್ತು ನಿಯಮ 68 ರ ಅಡಿಯಲ್ಲಿ ಶುಲ್ಕ ಭತ್ಯೆ ಮಂಜೂರಾತಿ.
- ದೈಹಿಕ ಅಂಗವಿಕಲ ಭತ್ಯೆಯ ಮಂಜೂರಾತಿ.
- ಸಣ್ಣ ಕುಟುಂಬ ನಿಯಮಗಳ ಭತ್ಯೆಯ ಮಂಜೂರಾತಿ.
- ಮುಂಗಡಗಳನ್ನು ಪಡೆಯಲು ಅನುಮತಿ, ಭಾಗಶಃ ಹಿಂತೆಗೆದುಕೊಳ್ಳುವಿಕೆ ಅಥವಾ ಸಾಮಾನ್ಯ ಭವಿಷ್ಯ ನಿಧಿಯ ಅಂತಿಮ ಇತ್ಯರ್ಥ.
- ಹಬ್ಮುಂಬದ ಮುಂಗಡವನ್ನು ಪಡೆಯಲು ಅನುಮತಿ.
- ನಿಯಮ 247A/248/252B/224A ಅಡಿಯಲ್ಲಿ ಪಿಂಚಣಿ ಪ್ರಯೋಜನಗಳಿಗಾಗಿ ಉದ್ಯೋಗಿ ಅರ್ಹತಾ ಸೇವೆ.
- ಇತರೆ ಹುದ್ದೆಗೆ ಅರ್ಜಿ ಸಲ್ಲಿಸಲು ಅನುಮತಿ.
- ಉನ್ನತ ಶಿಕ್ಷಣ ಪಡೆಯಲು ಅನುಮತಿ.
- ಮನೆ ನಿರ್ಮಿಸಲು ಅಥವಾ ನಿವೇಶನ/ಮನೆ/ವಾಹನ ಅಥವಾ ಇತರೆ ಯಾವುದೇ ಚರ ಅಥವಾ ಸ್ಥಿರ ಆಸ್ತಿಗಳನ್ನು ಖರೀದಿಸಲು ಅನುಮತಿ.
- ಉದ್ಯೋಗಿ ಸಂಖ್ಯೆ - ಪಾಸ್‌ಪೋರ್ಟ್ ಮಾಡ್ಯೂಲ್‌ಗೆ ಅರ್ಜಿ ಸಲ್ಲಿಸಲು ಆಕ್ಷೇಪಣೆ ಪ್ರಮಾಣಪತ್ರ.
- ವಿದೇಶಿ ಪ್ರವಾಸ ಕೈಗೊಳ್ಳಲು ಅನುಮತಿ
- ಶಿಕ್ಷಕರ ವರ್ಗಾವಣೆ ಅರ್ಜಿಯನ್ನು ಕೂಡ ಈ ಆ್ಯಪ್ ನಲ್ಲಿಯೇ ಸಲ್ಲಿಸಬಹುದಾಗಿದೆ.
Click For ಶಿಕ್ಷಕ ಮಿತ್ರ Website
ಶಿಕ್ಷಕಮಿತ್ರ ಆ್ಯಪ್ ಡೌನ್‌ಲೋಡ್ ಮಾಡಿಕೊಂಡ ನಂತರ ನೀವು ಮಾಡಬೇಕಾದದ್ದು
- ಮೊದಲು ನಿಮ್ಮ ಕೆ.ಜಿ.ಐ.ಡಿ ನಮೂದಿಸಿ.
- ರಿಜಿಸ್ಟರ್ ನ ಮೇಲೆ ಕ್ಲಿಕ್ ಮಾಡಿ.
- ಬಂದ ಒ.ಟಿ.ಪಿ ನಮೂದಿಸಿ.
- ನಂತರ ಪಾಸ್ವರ್ಡ ಸೆಟ್ ಮಾಡಿಕೊಳ್ಳಿ. (ಪಾಸ್ವರ್ಡ ಕನಿಷ್ಠ ಎಂಟು ಅಕ್ಷರ ಹೊಂದಿರಬೇಕು ಅದರಲ್ಲಿ ಒಂದು ಕ್ಯಾಪಿಟಲ್ ಅಕ್ಷರ ಒಂದು ಸಂಖ್ಯೆ ಒಂದು ಸ್ಪೆಷಲ್ ಕ್ಯಾರೆಕ್ಟರ್ ಹೊಂದಿರಬೇಕು)
- ನಂತರ KGID Number ಹಾಗೂ PASSWORD ಹಾಕಿದಾಗ ನಿಮ್ಮ ಮಾಹಿತಿ ತೆರೆದುಕೊಳ್ಳುತ್ತದೆ.
- ನಿಮ್ಮ ಭಾವ ಚಿತ್ರದ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಸಂಪೂರ್ಣ ಮಾಹಿತಿ ತೆರೆದುಕೊಳ್ಳುತ್ತದೆ.
No comments:
Post a Comment
ಧನ್ಯವಾದಗಳು,
ತಮ್ಮ ಅಭಿಪ್ರಾಯಗಳನ್ನು Comment ಮಾಡಿ.
ಮತ್ತೇ BLOG ಗೆ ಭೇಟಿ ನೀಡಿ.