Home ವಿವೇಕ ಜ್ಯೋತಿ ನಲಿಕಲಿ About Me ☰ Menu

ಅನ್ನಭಾಗ್ಯದ ಹಣ ನಿಮಗೆ ಬಂದಿದೆಯೇ? ಎಂದು ಈಗಲೇ ಚೆಕ್ ಮಾಡಿ..

ಕರ್ನಾಟಕ ಸರ್ಕಾರ  ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ 5kg ಅಕ್ಕಿಯ ಬದಲಾಗಿ ಬಿಪಿಎಲ್ ಕಾರ್ಡ್ ಹೊಂದಿದ ಪ್ರತಿ ಸದಸ್ಯರಿಗೆ ತಿಂಗಳಿಗೆ 170 ರೂಗಳನ್ನು ಖಾತೆಗೆ ಜಮಾ ಮಾಡುವುದಾಗಿ ಘೋಷಿಸಿದ್ದು , ಅನ್ನ  ಭಾಗ್ಯ ಯೋಜನೆಯ ಅಡಿಯಲ್ಲಿ ಹಣವು ನಿಮ್ಮ ಖಾತೆಗೆ ಜಮಾ ಆಗಿದೆಯೇ ಎಂಬುದನ್ನು ಹೇಗೆ ತಿಳಿದುಕೊಳ್ಳುವುದು ಎಂಬುದರ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ.

ಅನ್ನಭಾಗ್ಯದ ಹಣವು ಬಂದಿದೆಯೇ ಎಂದು ಈಗಲೇ ಚೆಕ್ ಮಾಡಿ :

ಅಕ್ಕಿ ದಾಸ್ತಾನು ಕೊರತೆಯಿಂದ ಅನ್ನಭಾಗ್ಯ ಅಕ್ಕಿಯ ಬದಲು ಹಣ ಜಮೆ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿತು. ಕರ್ನಾಟಕದ ಎಲ್ಲಾ ಜಿಲ್ಲೆಗಳಿಗೆ ಹಂತ ಹಂತವಾಗಿ ಈ ಹಣ ವರ್ಗಾವಣೆ ಆಗುತ್ತದೆ. ನಿಮ್ಮ ಖಾತೆಗೆ ಹಣ ವರ್ಗಾವಣೆ ಆಗಿದೆಯೇ?, ಎಷ್ಟು ಹಣ ಬಂದಿದೆ?, ಯಾರ ಖಾತೆಗೆ ಹಣ ವರ್ಗಾವಣೆ ಆಗಿದೆ ಎಂಬುದನ್ನು ತಿಳಿಯಲು ಸರ್ಕಾರವು ಒಂದು ಅಧಿಕೃತ ಜಾಲತಾಣ(Website) ಅನ್ನು ಬಿಡುಗಡೆ ಮಾಡಿದೆ.

ಅನ್ನಭಾಗ್ಯದ ಹಣ ಜಮಾ ಆಗಿದೆಯೇ ಎಂಬುದನ್ನು ನೋಡುವ ವಿಧಾನ :

STEP - 1: ಮೊದಲನೆಯದಾಗಿ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಯ ಜಾಲತಾಣಕ್ಕೆ ಭೇಟಿ ನೀಡಿ. ಇಲ್ಲಿ ಕ್ಲಿಕ್ ಮಾಡಿ  

Click Here

ಆಗ ಮುಖ ಪುಟ ತೆರೆದುಕೊಳ್ಳುತ್ತದೆ, ಅದರಲ್ಲಿ e-Status ಎಂಬ ಆಯ್ಕೆಯನ್ನು ಒತ್ತಿ, ನಂತರ DBT Status ಮೇಲೆ ಕ್ಲಿಕ್ ಮಾಡಿ.

ahara-1

STEP - 2: ನಂತರ ನಿಮ್ಮ ಜಿಲ್ಲೆಯ ಮೇಲಿನ ಲಿಂಕನ್ನು ಕ್ಲಿಕ್ ಮಾಡಿ.

ahara-2


STEP - 3 : ನಂತರ ಕೆಳಗಿನ ಭಾಗದಲ್ಲಿರುವ  DBT Status ಮೇಲೆ ಕ್ಲಿಕ್ ಮಾಡಿ. 

ahara-3


STEP - 4: ನಂತರ ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ(Type ಮಾಡಿ), GO ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ಆಗ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವ ಸದಸ್ಯರ ಸಂಖ್ಯೆ, ಮುಖ್ಯಸ್ಥರ ಹೆಸರು, ಸದಸ್ಯರ UID ಮತ್ತು ಎಷ್ಟು ಹಣ ಜಮಾ ಆಗುತ್ತದೆ ಅಥವಾ ಆಗಿದೆ ಎಂಬ ಮಾಹಿತಿಯನ್ನು ನೋಡಬಹುದಾಗಿದೆ.

ಅನ್ನಭಾಗ್ಯದ ಹಣ ಬಂದಿದೆಯೇ ಎಂದು ಈಗಲೇ ಚೆಕ್ ಮಾಡಿ..

ಹೀಗೆ ನೀವು ಅನ್ನಭಾಗ್ಯ ಯೋಜನೆಯಡಿಯಲ್ಲಿನ ಹಣ ನಿಮಗೆ ಜಮಾ ಆಗಿದೆಯೇ ಅಥವಾ ಅದರ ಸ್ಥಿತಿ ಹೇಗಿದೆ ಎಂಬುವುದನ್ನು ಚೆಕ್ ಮಾಡಬಹುದು

✅ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಖಾತೆಗೆ ಜಮೆಯಾದ ತಕ್ಷಣ, ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಇರುವ ಮೊಬೈಲ್ ನಂಬರಿಗೆ ಹಣ ಜಮಾ ಆಗಿರುವುದರ ಬಗ್ಗೆ ಸಂದೇಶ(Message) ಕೂಡ ಬರುತ್ತದೆ.

No comments:

Post a Comment

ಧನ್ಯವಾದಗಳು,
ತಮ್ಮ ಅಭಿಪ್ರಾಯಗಳನ್ನು Comment ಮಾಡಿ.
ಮತ್ತೇ BLOG ಗೆ ಭೇಟಿ ನೀಡಿ.