ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ ೧ನೇ ನವೆಂಬರ್ ೨೦೨೩ಕ್ಕೆ ೫೦ ವರ್ಷ ಪೂರ್ಣಗೊಳ್ಳಲಿರುವ ಸುವರ್ಣ ಮಹೋತ್ಸವದ ಪ್ರಯುಕ್ತ “ಕರ್ನಾಟಕ ಸಂಭ್ರಮ ೫೦” “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಂತ ವರ್ಷಪೂರ್ತಿ ಕರ್ನಾಟಕ ರಾಜ್ಯೋತ್ಸವವನ್ನು(೬೮) ವೈವಿಧ್ಯಮಯವಾಗಿ ಆಚರಿಸಲಾಗುತ್ತಿದೆ.
'ಕರ್ನಾಟಕ ಸಂಭ್ರಮ ೫೦' ಪ್ರಯುಕ್ತ ರಸಪ್ರಶ್ನೆ - ೨೦೨೩
“ಕರ್ನಾಟಕ ಸಂಭ್ರಮ ೫೦” ನುಡಿನಮನ ಗೀತೆಗಳು(ಆಡಿಯೋ ಸಹಿತ)
ಹೆಸರಾಯಿತು ಕರ್ನಾಟಕ - ಚನ್ನವೀರ ಕಣವಿ
ಉಸಿರಾಗಲಿ ಕನ್ನಡ
ಹಸಿಗೋಡೆಯ ಹರಳಿನಂತೆ
ಹುಸಿಹೋಗದ ಕನ್ನಡ
ಹೊಸೆದ ಹಾಗೆ ಹುರಿಗೊಳ್ಳುವ
ಗುರಿ ತಾಗುವ ಕನ್ನಡ;
ಕುರಿತೋದದ ಪರಿಣತಮತಿ -
ಅರಿತವರಿಗೆ ಹೂಗೊಂಡ
ಪಡುಗಡಲಿನ ತೆರೆಗಳಂತೆ
ಹೆಡೆ ಬಿಚ್ಚುತ ಮೊರೆಯುವ
ಸಹ್ಯಾದ್ರಿಯ ಶಿಖರದಂತೆ
ಬಾನೆತ್ತರ ಕರೆಯುವ
ಗುಡಿ - ಗೋಪುರ ಹೊಂಗಳಸಕೆ
ಚೆಂಬೆಳಕಿನ ಕನ್ನಡ;
ನಮ್ಮೆಲ್ಲರ ಮೈಮನಸಿನ
ಹೊಂಗನಸಿನ ಕನ್ನಡ
ತ್ರಿಪದಿಯಿಂದ ಸಾಸಿರಪದಿ
ಸ್ವಚ್ಛಂದದ ಉಲ್ಲಾಸ
ಭಾವಗೀತೆ, ಮಹಾಕಾವ್ಯ -
ವೀರ - ವಿನಯ ಸಮರಸ
ಹಳ್ಳಿ - ಊರು, ನಗರ - ಜಿಲ್ಲೆ
ಮೊಗದ ಹೊಗರು ಕನ್ನಡಿ;
ಎಲ್ಲ ದಿಸೆಗು ಚೆಲ್ಲುವರಿದ
ಚೈತನ್ಯದ ದಾಂಗುಡಿ
ಎಲ್ಲಾದರು ಇರು ಎಂತಾದರು ಇರು - ಕುವೆಂಪು
ಕನ್ನಡ ಗೋವಿನ ಓ ಮುದ್ದಿನ ಕರು,
ಕನ್ನಡತನವೊಂದಿದ್ದರೆ ನೀನಮ್ಮಗೆ ಕಲ್ಪತರು!
ನೀ ಮೆಟ್ಟುವ ನೆಲ – ಅದೆ ಕರ್ನಾಟಕ;
ನೀನೇರುವ ಮಲೆ – ಸಹ್ಯಾದ್ರಿ.
ನೀ ಮುಟ್ಟುವ ಮರ – ಶ್ರೀಗಂಧದ ಮರ;
ನೀ ಕುಡಿಯುವ ನೀರ್ – ಕಾವೇರಿ.
ಪಂಪನನೋದುವ ನಿನ್ನಾ ನಾಲಗೆ
ಕನ್ನಡವೇ ಸತ್ಯ.
ಕುಮಾರವ್ಯಾಸನನಾಲಿಪ ಕಿವಿಯದು
ಕನ್ನಡವೇ ನಿತ್ಯ.
ಹರಿಹರ ರಾಘವರಿಗೆ ಎರಗುವ ಮನ,
ಹಾಳಾಗಿಹ ಹಂಪೆಗೆ ಕೊರಗುವ ಮನ,
ಪೆಂಪಿನ ಬನವಾಸಿಗೆ ಕರಗುವ ಮನ;
ಬೆಳ್ಗೊಳ ಬೇಲೂರ್ಗಳ ನೆನೆಯುವ ಮನ,
ಜೋಗದ ಜಲಪಾತದಿ ಧುಮುಕುವ ಮನ
ಮಲೆನಾಡಿಗೆ ಹೊಂಪುಳಿವೋಗುವ ಮನ;
ಎಲ್ಲಿದ್ದರೆ ಏನ್? ಎಂತಿದ್ದರೆ ಏನ್?
ಎಂದೆಂದಿಗು ತಾನ್-
ಕನ್ನಡವೇ ಸತ್ಯ!
ಕನ್ನಡವೇ ನಿತ್ಯ!
ಕಾಜಾಣಕೆ ಗಿಳಿ ಕೋಗಿಲೆಯಿಂಪಿಗೆ,
ಮಲ್ಲಿಗೆ ಸಂಪಿಗೆ ಕೇದಗೆ ಸೊಂಪಿಗೆ,
ಮಾವಿನ ಹೊಂಗೆಯ ತಳಿರಿನ ತಂಪಿಗೆ,
ರಸರೋಮಾಂಚನಗೊಳುವಾತನ ಮನ
ಎಲ್ಲಿದ್ದರೆ ಏನ್? ಎಂತಿದ್ದರೆ ಏನ್?
ಎಂದೆಂದಿಗು ತಾನ್-
ಕನ್ನಡವೇ ಸತ್ಯ!
ಕನ್ನಡವೇ ನಿತ್ಯ!
ಅನ್ಯವನೆಲದೆ ಮಿಥ್ಯಾ!
ಸಾಹಿತ್ಯ: ಕುವೆಂಪು
ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು - ಹುಯಿಲಗೋಳ ನಾರಾಯಣರಾಯರು
ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು
ಬದುಕು ಬಲುಹಿನ ನಿಧಿಯು ಸದಭಿಮಾನದ ಗೂಡು || ಪ ||
ರಾಜನ್ಯರಿಪು ಪರಶುರಾಮನಮ್ಮನ ನಾಡು
ಆ ಜಲಧಿಯನೆ ಜಿಗಿದ ಹನುಮನುದಿಸಿದ ನಾಡು
ಓಜೆಯಿಂ ಮೆರೆದರಸುಗಳ ಸಾಹಸದ ಸೂಡು
ತೇಜವನು ನಮಗೀವ ವೀರವೃಂದದ ಬೀಡು || ೧ ||
ಲೆಕ್ಕಿಗ ಮಿತಾಕ್ಷರರು ಬೆಳೆದು ಮೆರೆದಿಹ ನಾಡು
ಜಕ್ಕಣನ ಶಿಲ್ಪಿ ಕಲೆಯಚ್ಚರಿಯ ಕರುಗೋಡು
ಚೊಕ್ಕಮತಗಳ ಸಾರಿದವರಿಗಿದು ನೆಲೆವೀಡು
ಬೊಕ್ಕಸದ ಕಣಜವೈ ವಿದ್ವತ್ತೆಗಳ ಕಾಡು || ೨ ||
ಪಾವನೆಯರಾ ಕೃಷ್ಣೆ ಭೀಮೆಯರ ತಾಯ್ನಾಡು
ಕಾವೇರಿ ಗೋದೆಯರು ಮೈದೊಳೆವ ನಲುನಾಡು
ಅವಗಂ ಸ್ಪೂರ್ತಿಸುವ ಕಬ್ಬಿಗರ ನಡೆಮಾಡು
ಕಾವ ಗದುಗಿನ ವೀರನಾರಾಯಣನ ಬೀಡು|| ೩ ||
ಒಂದೇ ಒಂದೇ ಒಂದೇ ಕರ್ನಾಟಕ ಒಂದೇ - ದ. ರಾ. ಬೇಂದ್ರೆ
ಒಂದೇ ಒಂದೇ ಒಂದೇ ಕರ್ನಾಟಕ ಒಂದೇ
ಹಿಂದೆ ಮುಂದೆ ಎಂದೆ ಕರ್ನಾಟಕ ಒಂದೇ
ಹಿಂದೆ ಮುಂದೆ ಎಂದೆ ಕರ್ನಾಟಕ ಒಂದೇ
ಜಗದೇಳಿಗೆಯಾಗುವುದಿದೆ ಕರ್ನಾಟಕದಿಂದೆ
ಇಲ್ಲಿಯ ಜನ ಮನ ಭಾಷೆಯು ಕನ್ನಡವದು ಒಂದೇ
ಒಂದೇ ಜಗವು ಮನವು ಕನ್ನಡಿಗರು ಎಂದೆ
ಕುಲವೊಂದೇ ಛಲವೊಂದೇ ನೀತಿಯ ನೆಲೆಯೊಂದೇ
ಹೀಗೆನ್ನದ ಹೆರವರು ಅವರಿದ್ದರು ಒಂದೆ ಇರದಿದ್ದರು ಒಂದೆ
ಕನ್ನಡವೆಂದು ಒಪ್ಪದು ಕರ್ನಾಟಕ ನಿಂದೆ
ಕನ್ನಡ ಮಾತೇ ಮಾತೆಯು ಕರ್ನಾಟಕ ಒಂದೇ
ಅದು ದೈವತ ಅದು ಜೀವಿತ ಒಪ್ಪಿಹೆವದು ಎಂದೆ
ನಮ್ಮದು ನಿಮ್ಮದು ಅವರದು ಈ ಆಸ್ತಿ ಪಾಸ್ತಿ
ನಾಡಿನ ತಾಯಿಗೆ ಸೇರಿದೆ ಬೇರೆಯ ಮನೆ ನಾಸ್ತಿ
ಕನ್ನಡ ಕಾಯಕದಲ್ಲಿಲ್ಲವು ಕಮ್ಮೀ ಜಾಸ್ತಿ
ಇದನೊಪ್ಪದ ಹೆರವರು ಅವರಿದ್ದರು ಒಂದೆ ಇರದಿದ್ದರು ಒಂದೇ
ಕರ್ನಾಟಕ ಹಿತ ಹಿಡಿತವು ಕನ್ನಡ ಕುಲದಿಂದೆ
ಕನ್ನಡವು ಭಾರತವು ಜಗವೆಲ್ಲವು ಒಂದೇ
ತುಂಬಿದೆ ಕನ್ನಡ ಕುಲವನ್ನು ಒಪ್ಪುವ ಕುಲದಿಂದೇ
ಇಂತರಿಯದ ಹೆರವರು ಅವರಿದ್ದರು ಒಂದೆ ಇರದಿದ್ದರು ಒಂದೇ
ಉಚ್ಛರಿಸಿರಿ ಮಾತೆಗೆ ಜಯ ಜಯ ಜಯವೆಂದೇ
ಸಾಹಿತ್ಯ: ದ. ರಾ. ಬೇಂದ್ರೆ
ಹೊತ್ತಿತೋ ಹೊತ್ತಿತು ಕನ್ನಡದ ದೀಪ - ಡಾ.ಸಿದ್ದಯ್ಯ ಪುರಾಣಿಕ
ಹೊತ್ತಿತೋ ಹೊತ್ತಿತು ಕನ್ನಡದ ದೀಪ
ಮುಗಿಯಿತೋ ಮುಗಿಯಿತು ಶತಮಾನಗಳ ಶಾಪ..
ಹೊತ್ತಿತೋ ಹೊತ್ತಿತು ಕನ್ನಡದ ದೀಪ
ಹೊತ್ತಿತೋ.. ಹೊತ್ತಿತು…ಕನ್ನಡದ ದೀಪ
ಕಣ್ಣು ಕುಕ್ಕಿಸುವಂತೆ ದೇದೀಪ್ಯಮಾನ
ಹರ್ಷ ಉಕ್ಕಿಸುವಂತೆ ಶೋಭಾಯಮಾನ..
ಕನ್ನಡದ ಮನೆಯಾಗೇ ಜ್ಯೋತಿರ್ನಿಧಾನ
ಕನ್ನಡದ ಪ್ರಾಣ.. ಕನ್ನಡದ ಮಾನ ..
ಹೊತ್ತಿತೋ ಹೊತ್ತಿತು ಕನ್ನಡದ ದೀಪ
ಉರಿವವರು ಬೇಕಿನ್ನು ಇದರೆಣ್ಣೆಯಾಗಿ
ಸುಡುವವರು ಬೇಕಿನ್ನು ನಿಡುಬತ್ತಿಯಾಗಿ..
ಧರಿಸುವವರು ಬೇಕಿನ್ನು ಸಿರಿಹಣತೆಯಾಗಿ
ನಮ್ಮೀ ಉಸಿರಾಗಿ ಧರ್ಮಕ್ಕೆ ಬಾಗಿ..
ಹೊತ್ತಿತೋ ಹೊತ್ತಿತು ಕನ್ನಡದ ದೀಪ
ಚಿರಕಾಲ ಬೆಳಗಲಿ ಕನ್ನಡದ ದೀಪ
ಜನಕೆಲ್ಲ ಬೆಳಕಾಗಿ ಪುಣ್ಯ ಪ್ರದೀಪ..
ಭಾರತಕೆ ಬಲವಾಗಿ ಭವ್ಯ ಪ್ರದೀಪ
ಕಳೆಯುತ್ತ ತಾಪ , ಬೆಳೆಸುತ್ತ ಸೈಪ..
ಹೊತ್ತಿತೋ ಹೊತ್ತಿತು ಕನ್ನಡದ ದೀಪ
ಹೊತ್ತಿತೋ ಹೊತ್ತಿತು ಕನ್ನಡದ ದೀಪ
ಮುಗಿಯಿತೋ ಮುಗಿಯಿತು ಶತಮಾನಗಳ ಶಾಪ
ಹೊತ್ತಿತೋ.. ಹೊತ್ತಿತು.. ಕನ್ನಡದ ದೀಪ.
ಸಾಹಿತ್ಯ: ಡಾ.ಸಿದ್ದಯ್ಯ ಪುರಾಣಿಕ
GPT(6-8) 2022 ಶಿಕ್ಷಕರ 1:1 ಅಂತಿಮ ಆಯ್ಕೆ ಪಟ್ಟಿ ಪ್ರಕಟ(19/10/2023)
“ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8ನೇ ತರಗತಿ) ನೇಮಕಾತಿ-2022ರ ನೇಮಕಾತಿಗೆ ಸಂಬಂಧಿಸಿದಂತೆ ಮಾನ್ಯ ಉಚ್ಛ ನ್ಯಾಯಾಲಯದ ರಿಟ್ ಅಪೀಲು ಸಂಖ್ಯೆ: WA.No.305/2023 ರಲ್ಲಿ ದಿನಾಂಕ: 12/10/2023ರ ವಿಭಾಗೀಯ ಪೀಠದ ತೀರ್ಪಿನಂತೆ ದಿನಾಂಕ: 08/03/2023 ರಂದು ಪ್ರಕಟಿತ 1:1 ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಕೌನ್ಸಿಲಿಂಗ್‌ಗೆ ಅರ್ಹ ಅಭ್ಯರ್ಥಿಗಳ ವಿವರಗಳನ್ನು ದಿನಾಂಕ: 19/10/2023 ರಂದು ಶಾಲಾ ಶಿಕ್ಷಣ ಇಲಾಖೆಯ ವೆಬ್‌ಸೈಟ್ https://schooleducation.karnataka.gov.in ನಲ್ಲಿ ಪ್ರಕಟಿಸಿದೆ. ಸದರಿ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಕ್ರಮವಾಗಿ ಗಣಿತ ಮತ್ತು ವಿಜ್ಞಾನ, ಸಮಾಜ ವಿಜ್ಞಾನ, ಜೀವವಿಜ್ಞಾನ ಮತ್ತು ಆಂಗ್ಲಭಾಷಾ ಹುದ್ದೆಗಳಿಗೆ ಸ್ಥಳನಿಯುಕ್ತಿ ಕೌನ್ಸಿಲಿಂಗ್‌ನ್ನು ದಿನಾಂಕ: 21/10/2023 ರಿಂದ ಬೆಳಿಗ್ಗೆ 10.30 ಗಂಟೆಯಿಂದ ರಾಜ್ಯದ (371ಜೆ ಗೆ ಸಂಬಂಧಿಸಿದಂತೆ ನ್ಯಾಯಾಲಯ ಪ್ರಕರಣಗಳು ಬಾಕಿ ಇರುವ ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳನ್ನು ಹೊರತುಪಡಿಸಿ ಮತ್ತು ಬಿ.ಬಿ.ಎಂ.ಪಿ ವ್ಯಾಪ್ತಿಯ 8% ಹುದ್ದೆಗಳಿಗೆ ಸಂಬಂಧಿಸಿದಂತೆ ಜಿಲ್ಲೆಗಳಾದ ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲೆಗಳನ್ನು ಹೊರತುಪಡಿಸಿ) ಜಿಲ್ಲೆಗಳಲ್ಲಿನ ಆಯಾ ಜಿಲ್ಲಾ ನೇಮಕಾತಿ ಪ್ರಾಧಿಕಾರಿಯವರಾದ ಜಿಲ್ಲಾ ಉಪನಿರ್ದೇಶಕರು (ಆಡಳಿತ) ರವರ ಕಛೇರಿಯಲ್ಲಿ ನಡೆಸಲಾಗುವುದು. ಆದ್ದರಿಂದ ಅಭ್ಯರ್ಥಿಗಳು ಇಲಾಖಾ ವೆಬ್‌ಸೈಟ್‌ನಲ್ಲಿರುವಂತೆ ಎಲ್ಲಾ ಅಗತ್ಯ ವಿವರಗಳನ್ನು ಪಡೆದುಕೊಂಡು ಸಕಾಲದಲ್ಲಿ ಕೌನ್ಸಿಲಿಂಗ್ ಸ್ಥಳದಲ್ಲಿ ಭಾವಚಿತ್ರವಿರುವ ಗುರುತಿನ ಚೀಟಿ ಮತ್ತು ನೇಮಕಾತಿಗೆ ಸಂಬಂಧಪಟ್ಟಂತೆ ಅಗತ್ಯ ದಾಖಲೆಗಳೊಂದಿಗೆ ಕಡ್ಡಾಯವಾಗಿ ಹಾಜರಾಗುವುದು.
ಹೆಚ್ಚಿನ ವಿವರಗಳಿಗೆ ಆಯಾ ಜಿಲ್ಲಾ ಉಪನಿರ್ದೇಶಕರು(ಆಡಳಿತ), ಶಾಲಾ ಶಿಕ್ಷಣ ಇಲಾಖೆಯ ಕಛೇರಿಯನ್ನು ಸಂಪರ್ಕಿಸುವುದು.
ಜಿಲ್ಲಾವಾರು 1:1 ಅಂತಿಮ ಪಟ್ಟಿಯಲ್ಲಿ ಅರ್ಹರಾದ ಅಭ್ಯರ್ಥಿಗಳ ಪಟ್ಟಿ.(19/10/2023)
- # ಕೆಳಗಿನ ಲಿಂಕ್ Click ಮಾಡಿ
ದಿನಾಂಕ: 21.10.2023 ರಿಂದ ನಡೆಯುವ ಕೌನ್ಸಿಲಿಂಗ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಕಡ್ಡಾಯ ಸೂಚನೆಗಳು.
NMMS ಪರೀಕ್ಷೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ವಿಸ್ತರಣೆ..
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ Online ಅರ್ಜಿ 2023-24.
- ವಿದ್ಯಾರ್ಥಿಯ SATS ಸಂಖ್ಯೆ.
- ವಿದ್ಯಾರ್ಥಿಯ ಆಧಾರ ಕಾರ್ಡ್.
- ವಿದ್ಯಾರ್ಥಿಯ ತಂದೆ & ತಾಯಿಯ ಆಧಾರ ಕಾರ್ಡ್.
- ಜಾತಿ & ಆದಾಯ ಪ್ರಮಾಣ ಪತ್ರ.
- ವಿದ್ಯಾರ್ಥಿ ವಿಕಲಚೇತನ ಆಗಿದ್ದಲ್ಲಿ ವಿಕಲಚೇತನ ಪ್ರಮಾಣ ಪತ್ರ.
- ತಂದೆ ಅಥವಾ ತಾಯಿ ಕೂಲಿ ಕಾರ್ಮಿಕರಾಗಿದ್ದಲ್ಲಿ ಕಾರ್ಮಿಕ ಇಲಾಖೆಯಿಂದ ಪಡೆದಕೊಂಡ ಪ್ರಮಾಣ ಪತ್ರ.
- ಅಲ್ಪಸಂಖ್ಯಾತ ವಿದ್ಯಾರ್ಥಿಗಳಾಗಿದ್ದಲ್ಲಿ NSP ವಿದ್ಯಾರ್ಥಿವೇತನದ ID ಹಿಂದಿನ ವರ್ಷ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ನವೀಕರಣ ಮಾಡಿಕೊಳ್ಳಬಹುದು.
- ಮೋಬೈಲ್ ಸಂಖ್ಯೆ (OTP ಸಲುವಾಗಿ)
- ನಿಮ್ಮ SATS ಸಂಖ್ಯೆ ನಮೂದಿಸಿ.
- ಶೈಕ್ಷಣಿಕ ವರ್ಷ ನಮೂದಿಸಿ.
- Submit ಮೇಲೆ ಕ್ಲಿಕ್ ಮಾಡಿ.
- Status ತಿಳಿಯಿರಿ.
Download ನವೋದಯ ವಿದ್ಯಾಲಯ 6th ಹಾಲ್ ಟಿಕೆಟ್ / JNV Admit Card-2024
ಜವಾಹರ್ ನವೋದಯ ವಿದ್ಯಾಲಯ ಸಮಿತಿ ನಡೆಸುವ 2024-25 ಶೈಕ್ಷಣಿಕ ವರ್ಷದ, 6 ನೇ ತರಗತಿ ಪರೀಕ್ಷೆ 04-11-2023 ರ ಶನಿವಾರದಂದು ನಡೆಯಲಿದೆ.
ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು https://navodaya.gov.in/nvs/en/Home1 ವೆಬ್‌ಸೈಟ್ ಮೂಲಕ ಡೌನ್ಲೋಡ್ ಮಾಡಬಹುದು.
Popular Post
-
ಪರಿಷ್ಕೃತ ಪಠ್ಯಕ್ರಮದಂತೆ, 1 ರಿಂದ 9ನೇ ತರಗತಿಯ ಎಲ್ಲಾ ವಿಷಯಗಳ ಮೊದಲ ಸಂಕಲನಾತ್ಮಕ ಪರೀಕ್ಷೆ ಪ್ರಶ್ನೆ ಪತ್ರಿಕೆಗಳು, ನೀಲನಕ್ಷೆ ಮತ್ತು ಮಾದರಿ ಉತ್ತರ ಗಳನ್ನು ವಿವಿಧ ಮ...
-
2 ರಿಂದ 10ನೇ ತರಗತಿಯ ಎಲ್ಲಾ ವಿಷಯಗಳ ಸೇತು ಬಂಧ ಪೂರ್ವ ಪರೀಕ್ಷೆ, ಸಾಫಲ್ಯ ಪರೀಕ್ಷೆ ಪ್ರಶ್ನೆ ಪತ್ರಿಕೆಗಳು ಮತ್ತು ಸಾಮರ್ಥ್ಯಗಳ ಪಟ್ಟಿಯನ್ನು ಒಳಗೊಂಡ ಸಂಪ...
-
NMMS ಪರೀಕ್ಷೆಯ ಹಿಂದಿನ ವರ್ಷಗಳ ಎಲ್ಲಾ GMAT ಮತ್ತು SAT ಪ್ರಶ್ನೆ ಪತ್ರಿಕೆಗಳು ಹಾಗೂ KEY ANSWERS.. ವರ್ಷ ಪ್ರಶ್ನೆ ಪತ್ರಿಕೆಗಳ...
-
NMMS ಪರೀಕ್ಷೆಯ, ಪತ್ರಿಕೆ-1 ಮಾನಸಿಕ ಸಾಮರ್ಥ್ಯ ಪರೀಕ್ಷೆ (MAT) ಮತ್ತು ಪತ್ರಿಕೆ-2 ವ್ಯಾಸಂಗಿಕ ಪ್ರವೃತ್ತಿ ಪರೀಕ್ಷೆ (SAT) , ಈ ಎರಡು ಪತ್ರಿಕೆಗಳ ಸಂಪೂರ...
-
ಇಲಾಖೆಯು 2 ರಿಂದ 10ನೇ ತರಗತಿಯ ಎಲ್ಲಾ ವಿಷಯಗಳ ಸೇತು ಬಂಧ ಪೂರ್ವ ಪರೀಕ್ಷೆ, ಸಾಫಲ್ಯ ಪರೀಕ್ಷೆ ಪ್ರಶ್ನೆ ಪತ್ರಿಕೆಗಳು, ಚಟುವಟಿಕೆಗಳು ಮತ್ತು ಸಾಮರ್ಥ್ಯಗಳ ಪಟ...
-
ಕರ್ನಾಟಕ ರಾಜ್ಯದ ' ಕಲಿಕಾ ಚೇತರಿಕೆ 2022-23' ರ ಪಠ್ಯಕ್ರಮಕ್ಕಗುಣವಾಗಿ (ಕಲಿಕಾ ಹಾಳೆಗಳನ್ನು ಆಧರಿಸಿ) 4, 6 ಮತ್ತು 7ನೇ ತರಗತಿಯ ಎ...
-
67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ರಾಜ್ಯದಾ ದ್ಯಂತ 'ನನ್ನ ನಾಡು ನನ್ನ ಹಾಡು - ಕೋಟಿ ಕಂಠ ಗಾಯನ’ ...
-
ಸ ಮಾಜ ವಿಜ್ಞಾನದ ಮೂಲಭೂತ ಜ್ಞಾನದ ಬಗ್ಗೆ ನಮಗೆಷ್ಟು ಗೊತ್ತು? ಸಮಾಜ ವಿಜ್ಞಾನವು ಇತಿಹಾಸ, ರಾಜ್ಯಶಾಸ್ತ್ರ, ಭೂಗೋಳಶಾಸ್ತ್ರ, ಅರ್ಥಶಾಸ್ತ್ರ, ಸಮಾಜಶಾಸ್ತ್ರ ಮತ...
-
ಶಾಲಾ ದಾಖಲಾತಿಗೆ ವಯಸ್ಸು ಲೆಕ್ಕ ಹಾಕಲು ಸುಲಭವಾಗುವ ಚಾರ್ಟ್ (31-05-2025 ಕ್ಕೆ ಇದ್ದಂತೆ ). 1-10ನೇ ತರಗತಿ ಶಾಲಾ ದಾಖಲಾತಿ ಪ್ರವೇಶ ಅರ್ಜಿ.
-
ನಿಮ್ಮ ಹೆಸರು Enter ಮಾಡಿ ರಸಪ್ರಶ್ನೆ ಪ್ರಾರಂಭಿಸಿ ರಸಪ್ರಶ್ನೆ ಪ್ರಾರಂಭಿಸಿ Apu Right 0 Wrong 0 Next question See Your Result Total Questions: Attemp...