Menu

Home ನಲಿಕಲಿ About ☰ Menu


 

🔍

“ಕರ್ನಾಟಕ ಸಂಭ್ರಮ ೫೦” ನುಡಿನಮನ ಗೀತೆಗಳು(ಆಡಿಯೋ ಸಹಿತ)

“ಕರ್ನಾಟಕ ಸಂಭ್ರಮ ೫೦”  ನುಡಿನಮನ ಗೀತೆಗಳು(ಆಡಿಯೋ ಸಹಿತ)
             ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ ೧ನೇ ನವೆಂಬರ್ ೨೦೨೩ಕ್ಕೆ ೫೦ ವರ್ಷ ಪೂರ್ಣಗೊಳ್ಳಲಿರುವ ಸುವರ್ಣ ಮಹೋತ್ಸವದ ಸುಸಂದರ್ಭದಲ್ಲಿ “ಕರ್ನಾಟಕ ಸಂಭ್ರಮ ೫೦” “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಂತ ವರ್ಷಪೂರ್ತಿ ವೈವಿಧ್ಯಮಯವಾಗಿ, ವರ್ಣಮಯವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಇದಕ್ಕೊಂದು ವಿಶೇಷ ಮೆರುಗು ನೀಡಲು ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಉದ್ದೇಶಿಸಿದೆ.
                 2023ರ ನವೆಂಬರ್ 01ರಂದು ರಾಜ್ಯದಲ್ಲೆಡೆ ಆಚರಿಸುವ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ಸಂಭ್ರಮ-50 ಅಭಿಯಾನದ ಅಂಗವಾಗಿ ಆಯ್ಕೆಮಾಡಿರುವ ನಾಡಿನ ಹೆಸರಾಂತ ಕವಿಗಳ 5 ಕನ್ನಡ ಗೀತೆಗಳನ್ನು ಹಾಡುವ ಮೂಲಕ ಸಮಸ್ತ ಕನ್ನಡಿಗರು ಕನ್ನಡಾಂಬೆಗೆ ನುಡಿ ನಮನ (ಗೀತ ಗಾಯನ) ಸಲ್ಲಿಸುವುದು ಸರ್ಕಾರದ ಉದ್ದೇಶವಾಗಿದೆ.
               ಆದ್ದರಿಂದ, ರಾಜ್ಯದ ಎಲ್ಲಾ ಜಿಲ್ಲಾಮಟ್ಟ, ತಾಲ್ಲೂಕು ಮಟ್ಟ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ನವೆಂಬರ್ 01 ರಂದು ಆಚರಿಸುವ ರಾಜ್ಯೋತ್ಸವ ಕಾರ್ಯಕ್ರಮ ವೇಳಾಪಟ್ಟಿಯಲ್ಲಿರುವಂತೆ ಧ್ವಜಾರೋಹಣ, ರಾಷ್ಟ್ರಗೀತೆ, ನಾಡಗೀತೆ, ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಯಾದ ನಂತರ 5 ಕನ್ನಡ ಗೀತೆಗಳನ್ನು ಕಡ್ಡಾಯವಾಗಿ ಹಾಡುವ ಮೂಲಕ ನುಡಿ ನಮನ ಸಲ್ಲಿಸಬೇಕೆಂದು ಕರ್ನಾಟಕ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತಿಳಿಸಿದೆ.

೫ ಹಾಡುಗಳನ್ನು  ಈ ಕೆಳಗೆ ನೀಡಲಾಗಿದೆ  
(ಸೂಚನೆ: *ಹಾಡುಗಳ ಹೆಸರಿನ ಮೇಲೆ ಒತ್ತಿ ಹಾಡಿನ ಸಾಹಿತ್ಯವನ್ನು  ಪಡೆಯಿರಿ.
*ಆಡಿಯೋ ಮೇಲೆ ಒತ್ತಿ ಹಾಡು ಕೇಳಿ & ಡೌನ್ಲೋಡ್ ಮಾಡಿಕೊಳ್ಳಬಹುದು)

 

No comments:

Post a Comment

ಧನ್ಯವಾದಗಳು,
ತಮ್ಮ ಅಭಿಪ್ರಾಯಗಳನ್ನು Comment ಮಾಡಿ.
ಮತ್ತೇ BLOG ಗೆ ಭೇಟಿ ನೀಡಿ.

Popular Post