ಈ ಬ್ಲಾಗ್ ಅನ್ನು ಹುಡುಕಿ

ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು - ಹುಯಿಲಗೋಳ ನಾರಾಯಣರಾಯರು

ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು

ಬದುಕು ಬಲುಹಿನ ನಿಧಿಯು ಸದಭಿಮಾನದ ಗೂಡು || ಪ ||

ರಾಜನ್ಯರಿಪು ಪರಶುರಾಮನಮ್ಮನ ನಾಡು

ಆ ಜಲಧಿಯನೆ ಜಿಗಿದ ಹನುಮನುದಿಸಿದ ನಾಡು

ಓಜೆಯಿಂ ಮೆರೆದರಸುಗಳ ಸಾಹಸದ ಸೂಡು

ತೇಜವನು ನಮಗೀವ ವೀರವೃಂದದ ಬೀಡು || ೧ ||

ಲೆಕ್ಕಿಗ ಮಿತಾಕ್ಷರರು ಬೆಳೆದು ಮೆರೆದಿಹ ನಾಡು

ಜಕ್ಕಣನ ಶಿಲ್ಪಿ ಕಲೆಯಚ್ಚರಿಯ ಕರುಗೋಡು

ಚೊಕ್ಕಮತಗಳ ಸಾರಿದವರಿಗಿದು ನೆಲೆವೀಡು

ಬೊಕ್ಕಸದ ಕಣಜವೈ ವಿದ್ವತ್ತೆಗಳ ಕಾಡು || ೨ ||

ಪಾವನೆಯರಾ ಕೃಷ್ಣೆ ಭೀಮೆಯರ ತಾಯ್ನಾಡು

ಕಾವೇರಿ ಗೋದೆಯರು ಮೈದೊಳೆವ ನಲುನಾಡು

ಅವಗಂ ಸ್ಪೂರ್ತಿಸುವ ಕಬ್ಬಿಗರ ನಡೆಮಾಡು

ಕಾವ ಗದುಗಿನ ವೀರನಾರಾಯಣನ ಬೀಡು|| ೩ ||

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಧನ್ಯವಾದಗಳು,
ತಮ್ಮ ಅಭಿಪ್ರಾಯಗಳನ್ನು Comment ಮಾಡಿ.
ಮತ್ತೇ BLOG ಗೆ ಭೇಟಿ ನೀಡಿ.