ರಾಜ್ಯದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಏಕಲವ್ಯ ಮಾದರಿ/ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾ ಗಾಂಧಿ/ ಡಾ॥ ಬಿ.ಆರ್.ಅಂಬೇಡ್ಕರ್ / ಮಾಸ್ತಿ ವೆಂಕಟೇಶ ಅಯ್ಯಂಗಾರ್/ ಸಂಗೊಳ್ಳಿ ರಾಯಣ್ಣ/ ಕವಿ ರನ್ನ / ಗಾಂಧಿತತ್ವ / ಶ್ರೀ ನಾರಾಯಣ ಗುರು / ಪ್ರತಿಭಾನ್ವಿತ ಬಾಲಕಿಯರ ವಸತಿ ಶಾಲೆಗಳಿಗೆ 2025-26ನೇ ಸಾಲಿನ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ.
@ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು@
*ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 11-01-2025
*ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ : 29-01-2025
*Hall Ticket ಬಿಡುಗಡೆ ದಿನಾಂಕ : 06-02-2025
*ಪರೀಕ್ಷೆ ನಡೆಯುವ ದಿನಾಂಕ : 15-02-2025
@ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ ಪ್ರಶ್ನೆ ಪತ್ರಿಕೆಗಳು
@ಅರ್ಜಿ ಸಲ್ಲಿಸುವ ವಿಧಾನ@
* ಅರ್ಜಿಯನ್ನು ಸಮೀಪದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಯಲ್ಲಿಯೇ ONLINE ಮೂಲಕ ಭರ್ತಿ ಮಾಡಬೇಕು.
@ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು@
1. ವಿದ್ಯಾರ್ಥಿಯ SATS ಸಂಖ್ಯೆ: (ವಿದ್ಯಾರ್ಥಿಯ ಬಹುತೇಕ ಪ್ರಮುಖ ಮಾಹಿತಿಗಳು SATS ನಿಂದ fetch ಆಗುವದರಿಂದ SATS ನಲ್ಲಿ ವಿದ್ಯಾರ್ಥಿಯ ಸಂಪೂರ್ಣ ಮಾಹಿತಿ ಅಪ್ ಡೇಟ್ ಇರಬೇಕು)
2. ಜಾತಿ ಮತ್ತು ಆದಾಯ ಪ್ರಮಾಣ ಪತ್ರ:
3. ವಿದ್ಯಾರ್ಥಿಯ ಇತ್ತೀಚಿನ 2 ಭಾವಚಿತ್ರ
4. ಇತರೆ ಮೀಸಲಾತಿ ಕೋರುವ ಪ್ರಮಾಣ ಪತ್ರಗಳು
*ಇತರೆ ಮೀಸಲಾತಿ ಪ್ರಮಾಣ ಪತ್ರಗಳೆಂದರೆ*
A) ವಿಶೇಷ ಚೇತನ ಮಗು(PH)
B) ಅಲೆಮಾರಿ/ ಅರೆ ಅಲೆಮಾರಿ/ ಸೂಕ್ಷ್ಮ/ ಅತಿ ಸೂಕ್ಷ್ಮ ಮಗು
C) ಮಾಜಿ ಸೈನಿಕರ ಮಗು
D) ಆಶ್ರಮ/ ವಸತಿ ಶಾಲೆ ಮಗು
E) ಪೌರ ಕಾರ್ಮಿಕರ/ಸಫಾಯಿ ಕರ್ಮಚಾರಿ ಮಗು
F)ಬಾಲ ಕಾರ್ಮಿಕ,ವಿಧವೆ ಮಗು,ದೇವದಾಸಿ
ಮಗು,ವಿಧುರನ ಮಗು,ಯೋಜನಾ ನಿರಾಶ್ರಿತರ ಮಗು,ಅನಾಥ ಮಗು,ಹೆಚ್.ಐ.ವಿ ಪೀಡಿತರ ಮಗು,ಆತ್ಮಹತ್ಯೆ ರೈತರ ಮಗು.
G)ಸ್ಥಳೀಯ ಅಭ್ಯರ್ಥಿ( ಸ್ಥಳೀಯ ಅಭ್ಯರ್ಥಿ ಎಂದರೆ ಸ್ವಂತ ತಾಲ್ಲೂಕಿನ ಅಭ್ಯರ್ಥಿ)
*ಮೇಲ್ಕಂಡ ವಿಶೇಷ ವರ್ಗಕ್ಕೆ ಸೇರಿದಲ್ಲಿ ಸಂಬಂಧಿತ ಸಕ್ಷಮ ಪ್ರಾಧಿಕಾರದಿಂದ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಅರ್ಜಿ ಸಲ್ಲಿಸುವ ಸಮಯದಲ್ಲಿ ಸಲ್ಲಿಸುವುದು.
*ಅರ್ಜಿ ಸಲ್ಲಿಸುವಾಗ ಪ್ರವೇಶ ಬಯಸುವ ವಸತಿ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ಆಯ್ಕೆ ಮಾಡಿಕೊಳ್ಳುವುದು ಕಡ್ಡಾಯವಾಗಿರುತ್ತದೆ(ಜಿಲ್ಲೆಯ ಎಲ್ಲ ವಸತಿ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ಆಯ್ಕೆ ಮಾಡಿಕೊಳ್ಳುವುದು)
*ಅಭ್ಯರ್ಥಿಯು ತನ್ನ ಸ್ವಂತ ಜಿಲ್ಲೆಯ ವಸತಿ ಶಾಲೆಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. (ಸ್ವಂತ ಜಿಲ್ಲೆ ಎಂದರೆ ಜಾತಿ, ಆದಾಯ ಪ್ರಮಾಣ ಪತ್ರ ಅಥವಾ ಆಧಾರ್ ಕಾರ್ಡ್ ನಲ್ಲಿ ನಮೂದಿಸಿರುವ ಜಿಲ್ಲೆ.)
*ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಿ.
*ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ತಾಲೂಕು ಕೇಂದ್ರಗಳಲ್ಲಿ ಪರೀಕ್ಷೆ ನಡೆಸುತ್ತದೆ.
*ಅಪ್ಲಿಕೇಶನ್ ಸಲ್ಲಿಸುವ ವಿಧಾನ, ಹಾಗೂ 'ಮಾಹಿತಿ ಪುಸ್ತಕ-2024' ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ ಮತ್ತು ವಸತಿ ಶಿಕ್ಷಣ ಸಂಸ್ಥೆಗಳ ವೆಬ್‌ಸೈಟ್ https://kreis.karnataka.gov.in/ ನಲ್ಲಿ ನೀಡಲಾಗಿದ್ದು, ಅಗತ್ಯವಿದ್ದಲ್ಲಿ ಡೌನ್‌ಲೋಡ್ ಮಾಡಿ ಓದಿಕೊಳ್ಳಬಹುದು.
@KREIS 2024 ಮಾಹಿತಿ ಪುಸ್ತಕ
@12-01 KREIS - 2025 ಅಧಿಸೂಚನೆ. 12/01/2025
------------- ----------------------- -------------------- -----
**NMMS ನ ಹಳೆಯ ಎಲ್ಲಾ ಪ್ರಶ್ನೆ ಪತ್ರಿಕೆ & ಕೀ ಉತ್ತರಗಳು
**NMMS ನ ಅಧ್ಯಯನ ವಸ್ತು/Study Material
No comments:
Post a Comment
ಧನ್ಯವಾದಗಳು,
ತಮ್ಮ ಅಭಿಪ್ರಾಯಗಳನ್ನು Comment ಮಾಡಿ.
ಮತ್ತೇ BLOG ಗೆ ಭೇಟಿ ನೀಡಿ.