2024-25 ನೇ ಸಾಲಿನ ಸರ್ಕಾರಿ ಶಾಲಾ ಪ್ರಾಥಮಿಕ ಶಿಕ್ಷಕರ ಹಾಗೂ ಮುಖ್ಯೋಪಾಧ್ಯಾಯರು ಮತ್ತು ಸರ್ಕಾರಿ ಪ್ರೌಢಶಾಲಾ ಶಿಕ್ಷಕರು/ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗಳನ್ನು ಹಮ್ಮಿಕೊಳ್ಳುವ ಕುರಿತು
ಅಧಿಸೂಚನೆ:
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿನಿಯಮ-2020 [2020ರ ಕರ್ನಾಟಕ ಅಧಿನಿಯಮ ಸಂಖ್ಯೆ:04] ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ ಹಾಗೂ ವರ್ಗಾವಣಾ ತಿದ್ದುಪಡಿ ಕಾಯ್ದೆ ಮತ್ತು ನಿಯಮಗಳು-2022ರ ಪ್ರಕಾರ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡಂತೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ತತ್ಸಮಾನ ವೃಂದದ ಶಿಕ್ಷಕರು ಮತ್ತು ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳಿಗೆ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗೆ ವರ್ಗಾವಣಾ ನಿಯಮ-2020ರ ನಿಯಮ-6 ರಲ್ಲಿ ನಿಗದಿಪಡಿಸಿರುವಂತೆ ವರ್ಗಾವಣೆ(ಅನುಸೂಚಿ) ವಿಸ್ತ್ರತವಾದ ಮಾರ್ಗಸೂಚಿಗಳನ್ನೊಳಗೊಂಡಂತೆ ವೇಳಾಪಟ್ಟಿಯನ್ನು ಹೊರಡಿಸಲಾಗಿದೆ.
ವರ್ಗಾವಣೆಯ ಪ್ರಮುಖ ದಿನಾಂಕಗಳು :
- ಕೋರಿಕೆ ವರ್ಗಾವಣೆಗೆ ಅರ್ಜಿ ಸಲ್ಲಿಕೆ ಪ್ರಾರಂಭ : 29/05/2025.
- ಕೊನೆಯ ದಿನಾಂಕ : 21/06/2025.
- ಹೆಚ್ಚುವರಿ ಶಿಕ್ಷಕರ ಪಟ್ಟಿ ಪ್ರಕಟ : 01/07/2025.
- ಹೆಚ್ಚುವರಿ ಶಿಕ್ಷಕರ ಕೌನ್ಸಿಲಿಂಗ್ : 02/07/2025.
- 31/05/2025ಕ್ಕೆ 5 ವರ್ಷ ಸೇವೆಯನ್ನು ಪೂರ್ಣಗೊಳಿಸಿದ CRP,BRP,ECO, ಕೌನ್ಸಿಲಿಂಗ್ ದಿನಾಂಕ : 10/07/2025.
- ಕೋರಿಕೆ ವರ್ಗಾವಣೆ ಕೌನ್ಸಲಿಂಗ್ ದಿನಾಂಕ : 18/07/2025 ರಿಂದ 21/07/2025.
- ಪರಸ್ಪರ ವರ್ಗಾವಣೆ ಕೌನ್ಸಲಿಂಗ್ ದಿನಾಂಕ : 24/07/2025.
- 3 ವರ್ಷ ಸೇವೆಯನ್ನು ಪೂರ್ಣಗೊಳಿಸಿದ CRP,BRP,ECO ಕೌನ್ಸಿಲಿಂಗ್ ದಿನಾಂಕ : 25/07/2025.
2020ರಲ್ಲಿ ಜಾರಿಯಾದ ಶಿಕ್ಷಕರ ವರ್ಗಾವಣೆ ಕಾಯ್ದೆಯಂತೆ ಹೆಚ್ಚುವರಿ ಶಿಕ್ಷಕರ ಸಮರ್ಪಕ ಮರುಹಂಚಿಕೆ ಮತ್ತು ಕಡ್ಡಾಯ ವಲಯ ವರ್ಗಾವಣೆಗಳನ್ನು ಒಂದರ ನಂತರ ಒಂದನ್ನು ಪರ್ಯಾಯ ವರ್ಷಗಳಲ್ಲಿ ಹಮ್ಮಿಕೊಳ್ಳಬೇಕಾಗಿರುತ್ತದೆ.
ಹಾಗೆಯೇ, ಮೇಲ್ಕಂಡಂತೆ ಪ್ರಸಕ್ತ ಸಾಲಿನ ವರ್ಗಾವಣೆ ಪ್ರಕ್ರಿಯೆಯಲ್ಲಿ ಆಡಳಿತಾತ್ಮಕ ಮತ್ತು ಶೈಕ್ಷಣಿಕ ಹಿತದೃಷ್ಟಿಯಿಂದ ಹೆಚ್ಚುವರಿ ಶಿಕ್ಷಕರ ಸಮರ್ಪಕ ಮರುಹೊಂದಾಣಿಕೆ ಪ್ರಕ್ರಿಯೆಯನ್ನು ಕೈಗೊಳ್ಳಬೇಕಾಗಿದ್ದು, ಹೆಚ್ಚುವರಿ b ಪ್ರಕ್ರಿಯೆಯ ಸಹಿತವಾಗಿ ಶಿಕ್ಷಕರ ಸಾಮಾನ್ಯ ವರ್ಗಾವಣಾ ಪ್ರಕ್ರಿಯೆಯನ್ನು ಹಮ್ಮಿಕೊಳ್ಳಲು ಮಾರ್ಗಸೂಚಿಗಳನ್ನು ಮತ್ತು ವೇಳಾಪಟ್ಟಿಯನ್ನು ಹೊರಡಿಸಲಾಗಿದೆ. ಈ ಸಂಬಂಧ ವರ್ಗಾವಣೆಗೆ ಪೂರಕವಾದ ಇ.ಇ.ಡಿ.ಎಸ್ ದತ್ತಾಂಶ, ಖಾಲಿ ಹುದ್ದೆಗಳ ಮಾಹಿತಿ, ಶಾಲಾ ವಲಯಗಳ ದತ್ತಾಂಶ ಇತ್ಯಾದಿಗಳ ಇಂದೀಕರಣವಾಗಬೇಕಾಗಿದೆ.
ಸಾಮಾನ್ಯ/ಪರಸ್ಪರ ವರ್ಗಾವಣೆಗಳನ್ನು ಒಳಗೊಂಡಂತೆ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು On Line ಮೂಲಕವೇ ನಿರ್ವಹಿಸಬೇಕಾಗಿದ್ದು, ಈಗಾಗಲೇ ಶಿಕ್ಷಕರ (Weighted score) ಅಂಕಗಳ ಪ್ರಕಟಣೆ ಮಾಡಲಾಗಿರುತ್ತದೆ. ಸಲ್ಲಿಕೆ ವರ್ಗಾವಣಾ ಅರ್ಜಿ ಸಲ್ಲಿಸುವುದು, ಅರ್ಜಿಗಳ/ಆದ್ಯತೆಗಳ ಪರಿಶೀಲನೆ, ಅರ್ಜಿಗಳ/ ಆದ್ಯತೆಗಳ ಅನುಮೋದನೆ/ತಿರಸ್ಕಾರ, ಕರಡು ಅರ್ಹ/ ಅನರ್ಹ(ಕಾರಣ ಸಹಿತ) ಪಟ್ಟಿ ಪ್ರಕಟಣೆ, ಆಕ್ಷೇಪಣೆಗಳ ಸಲ್ಲಿಕೆ, ಅಂತಿಮ ಆದ್ಯತಾ ಪಟ್ಟಿ ಪ್ರಕಟಣೆ, ಆದ್ಯತಾ ಪಟ್ಟಿ ಅನುಸಾರ ವರ್ಗಾವಣಾ ಕೌನ್ಸಿಲಿಂಗ್ ಪ್ರಕ್ರಿಯೆಗಳು ಇಲಾಖೆಯು ನಿಗದಿಪಡಿಸಿರುವ ಶಿಕ್ಷಕರ ವರ್ಗಾವಣಾ ತಂತ್ರಾಂಶದಲ್ಲಿಯೇ ನಿರ್ವಹಿಸುವುದು ಕಡ್ಡಾಯವಾಗಿರುತ್ತದೆ.
ವರ್ಗಾವಣಾ ಅರ್ಜಿ ಸಲ್ಲಿಸುವುದು, ಅರ್ಜಿಗಳ/ಆದ್ಯತೆಗಳ ಪರಿಶೀಲನೆ, ಅರ್ಜಿಗಳ/ ಆದ್ಯತೆಗಳ ಅನುಮೋದನೆ/ತಿರಸ್ಕಾರ, ಕರಡು ಅರ್ಹ/ ಅನರ್ಹ(ಕಾರಣ ಸಹಿತ) ಪಟ್ಟಿ ಪ್ರಕಟಣೆ, ಆಕ್ಷೇಪಣೆಗಳ ಸಲ್ಲಿಕೆ, ಅಂತಿಮ ಆದ್ಯತಾ ಪಟ್ಟಿ ಪ್ರಕಟಣೆ, ಆದ್ಯತಾ ಪಟ್ಟಿ ಅನುಸಾರ ವರ್ಗಾವಣಾ ಕೌನ್ಸಿಲಿಂಗ್ ಪ್ರಕ್ರಿಯೆಗಳು ಇಲಾಖೆಯು ನಿಗದಿಪಡಿಸಿರುವ ಶಿಕ್ಷಕರ ವರ್ಗಾವಣಾ ತಂತ್ರಾಂಶದಲ್ಲಿಯೇ ನಿರ್ವಹಿಸುವುದು ಕಡ್ಡಾಯವಾಗಿರುತ್ತದೆ.
ವರ್ಗಾವಣೆ ಪ್ರಕ್ರಿಯೆಗಳಿಗೆ ಸಂಬಂಧಪಟ್ಟಂತೆ ಪ್ರಸ್ತುತ ಮಾರ್ಗಸೂಚಿ ಮತ್ತು ವೇಳಾಪಟ್ಟಿಯಲ್ಲಿನ ಎಲ್ಲಾ ಪದ, ನಮೂದು ಮತ್ತು ಉಲ್ಲೇಖಗಳು ವರ್ಗಾವಣೆ ಕಾಯ್ದೆ ಮತ್ತು ನಿಯಮಗಳಲ್ಲಿನ ವ್ಯಾಖ್ಯೆಯಂತೆಯೇ ಇರುತ್ತವೆ. ವರ್ಗಾವಣಾ ಕಾಯ್ದೆ ಮತ್ತು ನಿಯಮಗಳಲ್ಲಿನ ವ್ಯಾಖ್ಯಾನ ಪರಿಭಾಷೆಯನ್ನು ಮತ್ತು ಅರ್ಥವ್ಯಾಪ್ತಿಯನ್ನೇ ಅವು ಹೊಂದಿದ್ದು, ಪ್ರತ್ಯೇಕವಾದ ಅರ್ಥ ವಿವರಣೆ ಮತ್ತು ವ್ಯಾಪ್ತಿಯನ್ನು ಹೊಂದಿರುವುದಿಲ್ಲ. ಮಾರ್ಗಸೂಚಿ ಅಂಶಗಳು ಕೇವಲ ವರ್ಗಾವಣೆಗಳ ಆಡಳಿತ ನಿರ್ವಹಣೆಗಾಗಿ ಮತ್ತು ಶಿಕ್ಷಕರ ಆಕರ ಸೂಚನೆಗಾಗಿ ಮಾತ್ರ ಹೊರಡಿಸಲಾಗಿದೆ ಎಂಬುದನ್ನು ಸ್ಪಷ್ಟಪಡಿಸಿದೆ.
ಅಧಿನಿಯಮ, ನಿಯಮಗಳು ಮತ್ತು ಕಾಲಕಾಲಕ್ಕೆ ಇಲಾಖೆಯಿಂದ ಹೊರಡಿಸಿರುವ ಸುತ್ತೋಲೆಗಳನ್ನು ಎಲ್ಲಾ ಹಂತದ ವರ್ಗಾವಣಾ ಪ್ರಾಧಿಕಾರಿಗಳು ಕಡ್ಡಾಯವಾಗಿ ಓದಿಕೊಳ್ಳತಕ್ಕದ್ದು. ಮಾರ್ಗಸೂಚಿಗಳಲ್ಲಿ ತಿಳಿಸಿರುವಂತೆ ಹಾಗೂ ಶಿಕ್ಷಕರ ವರ್ಗಾವಣೆ ಕಾಯ್ದೆ/ನಿಯಮಗಳು-2020 ಮತ್ತು ತಿದ್ದುಪಡಿ ಕಾಯ್ದೆ/ನಿಯಮಗಳು-2022ರ ಪ್ರಕಾರ ಕ್ರಮವಹಿಸಲು ಸಕ್ಷಮ ಪ್ರಾಧಿಕಾರಿಗಳಿಗೆ ಸೂಚಿಸಿದೆ.
ಈ ಅಧಿಸೂಚನೆಯು, ತಾಂತ್ರಿಕ/ಆಡಳಿತಾತ್ಮಕ ಕಾರಣಗಳಿಂದಾಗಿ ವ್ಯತ್ಯಯಗಳುಂಟಾದಲ್ಲಿ ಅವಶ್ಯಕತೆಗೆ ಅನುಗುಣವಾಗಿ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿಕೊಳ್ಳುವ ಷರತ್ತಿಗೆ ಒಳಪಟ್ಟಿರುತ್ತದೆ. ಈ ಸಂಬಂಧ ವರ್ಗಾವಣಾ ಪ್ರಕ್ರಿಯೆಯನ್ನು ನಿರ್ವಹಿಸುವ ಸಲುವಾಗಿ ಮಾರ್ಗಸೂಚಿಯ ಅಂಶಗಳನ್ನು ಅನುಬಂಧ-1 ರಲ್ಲಿ ಮತ್ತು ಅನುಬಂಧ-2ರಲ್ಲಿ ವರ್ಗಾವಣಾ ವೇಳಾಪಟ್ಟಿಯನ್ನು ಹೊರಡಿಸಿದೆ.
ಸರ್ಕಾರದ ಅಧಿಸೂಚನೆ ಸಂಖ್ಯೆ: ಸಂವ್ಯಶಾಇ 12 ಶಾಸನ 2020 ಬೆಂಗಳೂರು ದಿನಾಂಕ:27/03/2020 ಮತ್ತು ಸರ್ಕಾರದ ಅಧಿಸೂಚನೆ ಸಂಖ್ಯೆ: ಇಪಿ 8 ಇಟಿಆರ್ 2020 ದಿನಾಂಕ:22/07/2020 ಹಾಗೂ ನಂತರದ ತಿದ್ದುಪಡಿ ಕಾಯ್ದೆ/ನಿಯಮಗಳು-2022ರ ಪ್ರಕಾರ ಮತ್ತು ಇಲಾಖಾ ಆದೇಶಗಳನ್ನು ಸ್ಪಷ್ಟವಾಗಿ ಅರ್ಥೈಸಿಕೊಂಡು, ಪ್ರಸ್ತಾಪಿತ ವರ್ಗಾವಣಾ ಪ್ರಕ್ರಿಯೆಗಳನ್ನು ಯಾವುದೇ ಲೋಪದೋಷಗಳಿಗೆ ಎಡೆಮಾಡಿಕೊಡದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಲು ತಿಳಿಸಿದೆ. ಒಂದು ವೇಳೆ ಇಲಾಖಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಅರ್ಜಿಗಳ ಅನುಮೋದನೆ ಮತ್ತು ವರ್ಗಾವಣಾ ಕೌನ್ಸಿಲಿಂಗ್‌ನಲ್ಲಿ ಅಕ್ರಮಗಳು ಕಂಡುಬಂದಲ್ಲಿ ಅಂತಹ ಸಕ್ಷಮ ಪ್ರಾಧಿಕಾರದ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.