Menu

Home ನಲಿಕಲಿ About ☰ Menu


 

ನನ್ನ ಹಣತೆ‌ - ಜಿ. ಎಸ್. ಶಿವರುದ್ರಪ್ಪ

ನನ್ನ ಹಣತೆ‌ 

ಹಣತೆ ಹಚ್ಚುತ್ತೇನೆ ನಾನೂ,
ಈ ಕತ್ತಲನು ಗೆದ್ದು ನಿಲ್ಲುತ್ತೇನೆಂಬ ಜಿದ್ದಿನಿಂದಲ್ಲ;
ಲೆಕ್ಕವೇ ಇರದ ದೀಪಾವಳಿಯ ಹಡಗುಗಳೆ
ಇದರಲ್ಲಿ ಮುಳುಗಿ ಕರಗಿರುವಾಗ
ನಾನು ಹಚ್ಚುವ ಹಣತೆ ಶಾಶ್ವತವೆಂಬ ಭ್ರಾಂತಿ ನನಗಿಲ್ಲ,

ಹಣತೆ ಹಚ್ಚುತ್ತೇನೆ ನಾನೂ;
ಈ ಕತ್ತಲಿನಿಂದ ಬೆಳಕಿನ ಕಡೆಗೆ ನಡೆದೇನೆಂಬ
ಆಸೆಯಿಂದಲ್ಲ.
ಕತ್ತಲಿನಿಂದ ಕತ್ತಲೆಗೇ ತಡಕಾಡಿಕೊಂಡು ಬಂದಿವೆ ಹೆಜ್ಜೆ
ಶತಮಾನದಿಂದಲೂ.
ನಡು ನಡುವೆ ಒಂದಷ್ಟು ಬೆಳಕು ಬೇಕೆಂದು
ಆಗಾಗ ಕಡ್ಡಿ ಗೀಚಿದ್ದೇವೆ,
ದೀಪ ಮುಡಿಸಿದ್ದೇವೆ,
ವೇದ, ಶಾಸ್ತ್ರ, ಪುರಾಣ, ಇತಿಹಾಸ, ಕಾವ್ಯ, ವಿಜ್ಞಾನಗಳ
ಮತಾಪು-ಪಟಾಕಿ-ಸುರುಸುರುಬತ್ತಿ-ಹೂಬಾಣ
ಸುಟ್ಟಿದ್ದೇವೆ.
"ತಮಸೋ ಮಾ ಜ್ಯೋತಿರ್ಗಮಯಾ" ಎನ್ನುತ್ತ ಬರೀ
ಬೂದಿಯನ್ನೇ ಕೊನೆಗೆ ಕಂಡಿದ್ದೇವೆ.

ನನಗೂ ಗೊತ್ತು, ಈ ಕತ್ತಲೆಗೆ
ಕೊನೆಯಿರದ ಬಾಯಾರಿಕೆ
ಎಷ್ಟೊಂದು ಬೆಳಕನ್ನು ಇದು ಉಟ್ಟರೂ, ತೊಟ್ಟರೂ
ತಿಂದರೂ, ಕುಡಿದರೂ, ಇದಕ್ಕೆ ಇನ್ನೂ ಬೇಕು
ಇನ್ನೂ ಬೇಕು ಎನ್ನುವ ಬಯಕೆ.

ಆದರೂ ಹಣತೆ ಹಚ್ಚುತ್ತೇನೆ ನಾನೂ,
ಕತ್ತಲೆಯನ್ನು ದಾಟುತ್ತೇನೆಂಬ ಭ್ರಮೆಯಿಂದಲ್ಲ,
ಇರುವಷ್ಟು ಹೊತ್ತು ನಿನ್ನ ಮುಖ ನಾನು, ನನ್ನ ಮುಖ ನೀನು
ನೋಡಬಹುದೆಂಬ ಒಂದೇ ಒಂದು ಆಸೆಯಿಂದ;
ಹಣತೆ ಆರಿದ ಮೇಲೆ, ನೀನು ಯಾರೋ, ಮತ್ತೆ
ನಾನು ಯಾರೋ.

                            - ಜಿ. ಎಸ್. ಶಿವರುದ್ರಪ್ಪ

ಹೆಸರಾಯಿತು ಕರ್ನಾಟಕ - ಚನ್ನವೀರ ಕಣವಿ

ಹೆಸರಾಯಿತು ಕರ್ನಾಟಕ

ಉಸಿರಾಗಲಿ ಕನ್ನಡ

ಹಸಿಗೋಡೆಯ ಹರಳಿನಂತೆ

ಹುಸಿಹೋಗದ ಕನ್ನಡ

ಹೊಸೆದ ಹಾಗೆ ಹುರಿಗೊಳ್ಳುವ

ಗುರಿ ತಾಗುವ ಕನ್ನಡ;

ಕುರಿತೋದದ ಪರಿಣತಮತಿ -

ಅರಿತವರಿಗೆ ಹೂಗೊಂಡ

ಪಡುಗಡಲಿನ ತೆರೆಗಳಂತೆ

ಹೆಡೆ ಬಿಚ್ಚುತ ಮೊರೆಯುವ

ಸಹ್ಯಾದ್ರಿಯ ಶಿಖರದಂತೆ

ಬಾನೆತ್ತರ ಕರೆಯುವ

ಗುಡಿ - ಗೋಪುರ ಹೊಂಗಳಸಕೆ

ಚೆಂಬೆಳಕಿನ ಕನ್ನಡ;

ನಮ್ಮೆಲ್ಲರ ಮೈಮನಸಿನ

ಹೊಂಗನಸಿನ ಕನ್ನಡ

ತ್ರಿಪದಿಯಿಂದ ಸಾಸಿರಪದಿ

ಸ್ವಚ್ಛಂದದ ಉಲ್ಲಾಸ

ಭಾವಗೀತೆ, ಮಹಾಕಾವ್ಯ -

ವೀರ - ವಿನಯ ಸಮರಸ

ಹಳ್ಳಿ - ಊರು, ನಗರ - ಜಿಲ್ಲೆ

ಮೊಗದ ಹೊಗರು ಕನ್ನಡಿ;

ಎಲ್ಲ ದಿಸೆಗು ಚೆಲ್ಲುವರಿದ

ಚೈತನ್ಯದ ದಾಂಗುಡಿ

ಸಾಹಿತ್ಯ - ಚನ್ನವೀರ ಕಣವಿ

ಎಲ್ಲಾದರು ಇರು ಎಂತಾದರು ಇರು - ಕುವೆಂಪು

ಎಲ್ಲಾದರು ಇರು; ಎಂತಾದರು ಇರು;
ಎಂದೆಂದಿಗು ನೀ ಕನ್ನಡವಾಗಿರು.

ಕನ್ನಡ ಗೋವಿನ ಓ ಮುದ್ದಿನ  ಕರು,
ಕನ್ನಡತನವೊಂದಿದ್ದರೆ ನೀನಮ್ಮಗೆ ಕಲ್ಪತರು!

ನೀ ಮೆಟ್ಟುವ ನೆಲ – ಅದೆ ಕರ್ನಾಟಕ;
ನೀನೇರುವ ಮಲೆ – ಸಹ್ಯಾದ್ರಿ.
ನೀ ಮುಟ್ಟುವ ಮರ – ಶ್ರೀಗಂಧದ ಮರ;
ನೀ ಕುಡಿಯುವ ನೀರ್ – ಕಾವೇರಿ.

ಪಂಪನನೋದುವ ನಿನ್ನಾ ನಾಲಗೆ
ಕನ್ನಡವೇ ಸತ್ಯ.
ಕುಮಾರವ್ಯಾಸನನಾಲಿಪ ಕಿವಿಯದು
ಕನ್ನಡವೇ ನಿತ್ಯ.
ಹರಿಹರ ರಾಘವರಿಗೆ ಎರಗುವ ಮನ,
ಹಾಳಾಗಿಹ ಹಂಪೆಗೆ ಕೊರಗುವ ಮನ,
ಪೆಂಪಿನ ಬನವಾಸಿಗೆ ಕರಗುವ ಮನ;
ಬೆಳ್ಗೊಳ ಬೇಲೂರ್ಗಳ ನೆನೆಯುವ ಮನ,
ಜೋಗದ ಜಲಪಾತದಿ ಧುಮುಕುವ ಮನ
ಮಲೆನಾಡಿಗೆ ಹೊಂಪುಳಿವೋಗುವ ಮನ;
ಎಲ್ಲಿದ್ದರೆ ಏನ್? ಎಂತಿದ್ದರೆ ಏನ್?
ಎಂದೆಂದಿಗು ತಾನ್-
ಕನ್ನಡವೇ ಸತ್ಯ!
ಕನ್ನಡವೇ ನಿತ್ಯ!

ಕಾಜಾಣಕೆ ಗಿಳಿ ಕೋಗಿಲೆಯಿಂಪಿಗೆ,
ಮಲ್ಲಿಗೆ ಸಂಪಿಗೆ ಕೇದಗೆ ಸೊಂಪಿಗೆ,
ಮಾವಿನ ಹೊಂಗೆಯ ತಳಿರಿನ ತಂಪಿಗೆ,
ರಸರೋಮಾಂಚನಗೊಳುವಾತನ ಮನ
ಎಲ್ಲಿದ್ದರೆ ಏನ್? ಎಂತಿದ್ದರೆ ಏನ್?
ಎಂದೆಂದಿಗು ತಾನ್-
ಕನ್ನಡವೇ ಸತ್ಯ!
ಕನ್ನಡವೇ ನಿತ್ಯ!
ಅನ್ಯವನೆಲದೆ ಮಿಥ್ಯಾ!


ಸಾಹಿತ್ಯ: ಕುವೆಂಪು

ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು - ಹುಯಿಲಗೋಳ ನಾರಾಯಣರಾಯರು

ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು

ಬದುಕು ಬಲುಹಿನ ನಿಧಿಯು ಸದಭಿಮಾನದ ಗೂಡು || ಪ ||

ರಾಜನ್ಯರಿಪು ಪರಶುರಾಮನಮ್ಮನ ನಾಡು

ಆ ಜಲಧಿಯನೆ ಜಿಗಿದ ಹನುಮನುದಿಸಿದ ನಾಡು

ಓಜೆಯಿಂ ಮೆರೆದರಸುಗಳ ಸಾಹಸದ ಸೂಡು

ತೇಜವನು ನಮಗೀವ ವೀರವೃಂದದ ಬೀಡು || ೧ ||

ಲೆಕ್ಕಿಗ ಮಿತಾಕ್ಷರರು ಬೆಳೆದು ಮೆರೆದಿಹ ನಾಡು

ಜಕ್ಕಣನ ಶಿಲ್ಪಿ ಕಲೆಯಚ್ಚರಿಯ ಕರುಗೋಡು

ಚೊಕ್ಕಮತಗಳ ಸಾರಿದವರಿಗಿದು ನೆಲೆವೀಡು

ಬೊಕ್ಕಸದ ಕಣಜವೈ ವಿದ್ವತ್ತೆಗಳ ಕಾಡು || ೨ ||

ಪಾವನೆಯರಾ ಕೃಷ್ಣೆ ಭೀಮೆಯರ ತಾಯ್ನಾಡು

ಕಾವೇರಿ ಗೋದೆಯರು ಮೈದೊಳೆವ ನಲುನಾಡು

ಅವಗಂ ಸ್ಪೂರ್ತಿಸುವ ಕಬ್ಬಿಗರ ನಡೆಮಾಡು

ಕಾವ ಗದುಗಿನ ವೀರನಾರಾಯಣನ ಬೀಡು|| ೩ ||

ಒಂದೇ ಒಂದೇ ಒಂದೇ ಕರ್ನಾಟಕ ಒಂದೇ - ದ. ರಾ. ಬೇಂದ್ರೆ

ಒಂದೇ ಒಂದೇ ಒಂದೇ ಕರ್ನಾಟಕ ಒಂದೇ
ಹಿಂದೆ ಮುಂದೆ ಎಂದೆ ಕರ್ನಾಟಕ ಒಂದೇ

ಹಿಂದೆ ಮುಂದೆ ಎಂದೆ ಕರ್ನಾಟಕ ಒಂದೇ
ಜಗದೇಳಿಗೆಯಾಗುವುದಿದೆ ಕರ್ನಾಟಕದಿಂದೆ
ಇಲ್ಲಿಯ ಜನ ಮನ ಭಾಷೆಯು ಕನ್ನಡವದು ಒಂದೇ
ಒಂದೇ ಜಗವು ಮನವು ಕನ್ನಡಿಗರು ಎಂದೆ
ಕುಲವೊಂದೇ ಛಲವೊಂದೇ ನೀತಿಯ ನೆಲೆಯೊಂದೇ
ಹೀಗೆನ್ನದ ಹೆರವರು ಅವರಿದ್ದರು ಒಂದೆ ಇರದಿದ್ದರು ಒಂದೆ
ಕನ್ನಡವೆಂದು ಒಪ್ಪದು ಕರ್ನಾಟಕ ನಿಂದೆ

ಕನ್ನಡ ಮಾತೇ ಮಾತೆಯು ಕರ್ನಾಟಕ ಒಂದೇ
ಅದು ದೈವತ ಅದು ಜೀವಿತ ಒಪ್ಪಿಹೆವದು ಎಂದೆ
ನಮ್ಮದು ನಿಮ್ಮದು ಅವರದು ಈ ಆಸ್ತಿ ಪಾಸ್ತಿ
ನಾಡಿನ ತಾಯಿಗೆ ಸೇರಿದೆ ಬೇರೆಯ ಮನೆ ನಾಸ್ತಿ
ಕನ್ನಡ ಕಾಯಕದಲ್ಲಿಲ್ಲವು ಕಮ್ಮೀ ಜಾಸ್ತಿ
ಇದನೊಪ್ಪದ ಹೆರವರು ಅವರಿದ್ದರು ಒಂದೆ ಇರದಿದ್ದರು ಒಂದೇ
ಕರ್ನಾಟಕ ಹಿತ ಹಿಡಿತವು ಕನ್ನಡ ಕುಲದಿಂದೆ

ಕನ್ನಡವು ಭಾರತವು ಜಗವೆಲ್ಲವು ಒಂದೇ
ತುಂಬಿದೆ ಕನ್ನಡ ಕುಲವನ್ನು ಒಪ್ಪುವ ಕುಲದಿಂದೇ
ಇಂತರಿಯದ ಹೆರವರು ಅವರಿದ್ದರು ಒಂದೆ ಇರದಿದ್ದರು ಒಂದೇ
ಉಚ್ಛರಿಸಿರಿ ಮಾತೆಗೆ ಜಯ ಜಯ ಜಯವೆಂದೇ

ಸಾಹಿತ್ಯ: ದ. ರಾ. ಬೇಂದ್ರೆ

ಹೊತ್ತಿತೋ ಹೊತ್ತಿತು ಕನ್ನಡದ ದೀಪ - ಡಾ.ಸಿದ್ದಯ್ಯ ಪುರಾಣಿಕ

ಹೊತ್ತಿತೋ ಹೊತ್ತಿತು ಕನ್ನಡದ ದೀಪ
ಮುಗಿಯಿತೋ ಮುಗಿಯಿತು ಶತಮಾನಗಳ ಶಾಪ..
ಹೊತ್ತಿತೋ ಹೊತ್ತಿತು ಕನ್ನಡದ ದೀಪ
ಹೊತ್ತಿತೋ.. ಹೊತ್ತಿತು…ಕನ್ನಡದ ದೀಪ

ಕಣ್ಣು ಕುಕ್ಕಿಸುವಂತೆ ದೇದೀಪ್ಯಮಾನ
ಹರ್ಷ ಉಕ್ಕಿಸುವಂತೆ ಶೋಭಾಯಮಾನ..
ಕನ್ನಡದ ಮನೆಯಾಗೇ ಜ್ಯೋತಿರ್ನಿಧಾನ
ಕನ್ನಡದ ಪ್ರಾಣ.. ಕನ್ನಡದ ಮಾನ ..
ಹೊತ್ತಿತೋ ಹೊತ್ತಿತು ಕನ್ನಡದ ದೀಪ

ಉರಿವವರು ಬೇಕಿನ್ನು ಇದರೆಣ್ಣೆಯಾಗಿ
ಸುಡುವವರು ಬೇಕಿನ್ನು ನಿಡುಬತ್ತಿಯಾಗಿ..
ಧರಿಸುವವರು ಬೇಕಿನ್ನು ಸಿರಿಹಣತೆಯಾಗಿ
ನಮ್ಮೀ ಉಸಿರಾಗಿ ಧರ್ಮಕ್ಕೆ ಬಾಗಿ..
ಹೊತ್ತಿತೋ ಹೊತ್ತಿತು ಕನ್ನಡದ ದೀಪ

ಚಿರಕಾಲ ಬೆಳಗಲಿ ಕನ್ನಡದ ದೀಪ
ಜನಕೆಲ್ಲ ಬೆಳಕಾಗಿ ಪುಣ್ಯ ಪ್ರದೀಪ..
ಭಾರತಕೆ ಬಲವಾಗಿ ಭವ್ಯ ಪ್ರದೀಪ
ಕಳೆಯುತ್ತ ತಾಪ , ಬೆಳೆಸುತ್ತ ಸೈಪ..
ಹೊತ್ತಿತೋ ಹೊತ್ತಿತು ಕನ್ನಡದ ದೀಪ

ಹೊತ್ತಿತೋ ಹೊತ್ತಿತು ಕನ್ನಡದ ದೀಪ
ಮುಗಿಯಿತೋ ಮುಗಿಯಿತು ಶತಮಾನಗಳ ಶಾಪ
ಹೊತ್ತಿತೋ.. ಹೊತ್ತಿತು.. ಕನ್ನಡದ ದೀಪ.

ಸಾಹಿತ್ಯ: ಡಾ.ಸಿದ್ದಯ್ಯ ಪುರಾಣಿಕ

ಹಚ್ಚೇವು ಕನ್ನಡದ ದೀಪ - 'ಡಾ. ಡಿ.ಎಸ್. ಕರ್ಕಿ'

ಹಚ್ಚೇವು ಕನ್ನಡದ ದೀಪ
ಕರುನಾಡದೀಪ ಸಿರಿನುಡಿಯದೀಪ
ಒಲವೆತ್ತಿ ತೋರುವಾ ದೀಪ | ಹಚ್ಚೇವು |

ಬಹುದಿನಗಳಿಂದ ಮೈಮರೆವೆಯಿಂದ
ಕೂಡಿರುವ ಕೊಳೆಯ ಕೊಚ್ಚೇವು
ಎಲ್ಲೆಲ್ಲಿ ಕನ್ನಡದ ಕಂಪು ಸೂಸ-
ಲಲ್ಲಲ್ಲಿ ಕರಣ ಚಾಚೇವು
ನಡು ನಾಡೆ ಇರಲಿ, ಗಡಿನಾಡೆ ಇರಲಿ
ಕನ್ನಡದ ಕಳೆಯ ಕೆಚ್ಚೇವು
ಮರತೇವು ಮರವ, ತೆರೆದೇವು ಮನವ,
ಎರೆದೇವು ಒಲವ-ಹಿರಿ ನೆನಪ
ನರನರವನೆಲ್ಲ ಹುರಿಗೊಳಿಸಿ ಹೊಸೆದು
ಹಚ್ಚೇವು ಕನ್ನಡದ ದೀಪ

ಕಲ್ಪನೆಯ ಕಣ್ಣು ಹರಿವನಕ ಸಾಲು
ದೀಪಗಳ ಬೆಳಕ ಬೀರೇವು
ಹಚ್ಚಿರುವ ದೀಪದಲಿ ತಾಯ ರೂಪ
ಅಚ್ಚಳಿಯದಂತೆ ತೋರೇವು
ಒಡಲೊಡಲ ಕೆಚ್ಚಿನಾ ಕಿಡಿಗಳನ್ನು
ಗಡಿನಾಡಾಚೆ ತೂರೇವು
ಹೊಮ್ಮಿರಲು ಪ್ರೀತಿ ಎಲ್ಲಿಯದು ಭೀತಿ?
-ನಾಡೊಲವೆ ನೀತಿ ಹಿಡಿ ನೆನಪ
ಮನೆಮನೆಗಳಲ್ಲಿ ಮನಮನಗಳಲ್ಲಿ
ಹಚ್ಚೇವು ಕನ್ನಡದ ದೀಪ.

ಕರುನಾಡಿನರಿವ ನೆರೆತೀವಿ ಭಾವ-
ದಲಿ ಜೀವನಾಡಿ ನುಡಿಸೇವು
ತೆರೆತೆರೆದ ಕಣ್ಣಿನಲಿ ನೇಹವೆರೆದು
ನವ ಜ್ಯೋತಿಯನ್ನೆ ಮುಡಿಸೇವು
ನಮ್ಮನ್ನವುಂಡು ಅನ್ಯಾಯಗೈಯು
ವಂಥವರ ಹುಚ್ಚ ಬಿಡಿಸೇವು
ಇಹುದೆಮಗೆ ಛಲವು,
ಕನ್ನಡರ ಬಲವು ಕನ್ನಡದ ಒಲವು -ಹಿಡಿನೆನವು
ನಮ್ಮದೆಯ ಕೆಚ್ಚುನೆಚ್ಚುಗಳನೂಡಿ
ಹಚ್ಚೇವು ಕನ್ನಡದ ದೀಪ.

ನಮ್ಮವರು ಗಳಿಸಿದಾ ಹೆಸರ ಉಳಿಸ-
ಲೆಲ್ಲಾರು ಒಂದುಗೂಡೇವು
ನಮ್ಮದೆಯ ಮಿಡಿಯುವೀ ಮಾತಿನಲ್ಲಿ
ಮಾತೆಯನು ಪೂಜೆ ಮಾಡೇವು
ನಮ್ಮುಸಿರು ತೀಡುವೀ ನಾಡಿನಲ್ಲಿ
ಮಾಂಗಲ್ಯಗೀತ ಹಾಡೇವು
ತೊರೆದೇವು ಮರುಳ, ಕಡೆದೇವು ಇರುಳ
ಪಡೆದೇವು ತಿರುಳ -ಹಿಡಿನೆನಪ
ಕರುಳೆಂಬ ಕುಡಿಗೆ ಮಿಂಚನ್ನೆ ಮುಡಿಸಿ
ಹಚ್ಚೇವು ಕನ್ನಡದ ದೀಪ.
  ---------೦----------
ಸಾಹಿತ್ಯ: ಡಾ. ಡಿ.ಎಸ್. ಕರ್ಕಿ

ಕೋಟಿ ಕಂಠ ಗಾಯನ ಕಾರ್ಯಕ್ರಮದ ಹಾಡುಗಳು(ಆಡಿಯೋ ಸಹಿತ)


           67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ರಾಜ್ಯದಾ
ದ್ಯಂತ 'ನನ್ನ ನಾಡು ನನ್ನ ಹಾಡು - ಕೋಟಿ ಕಂಠ ಗಾಯನ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಅಕ್ಟೋಬರ್ ೨೮ ರ ಬೆಳಿಗ್ಗೆ ೧೧ ಗಂಟೆಗೆ ರಾಜ್ಯ ಸೇರಿದಂತೆ ವಿಶ್ವದ ಇತರೆ ಭಾಗದಲ್ಲಿರುವ 1 ಕೋಟಿಗೂ ಅಧಿಕ ಕನ್ನಡಿಗರಿಂದ ಕನ್ನಡದ ಹಿರಿಮೆ ಸಾರುವ ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ ನಡೆಸಲು ತಯಾರಿ ಮಾಡಿಕೊಳ್ಳಲಾಗುತ್ತಿದ್ದು, ನಾಡಗೀತೆಯಾದ ಜಯ ಭಾರತ ಜನನಿಯ ತನುಜಾತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ ವಿದ್ಯಾಚೇತನ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು, ಹಚ್ಚೇವು ಕನ್ನಡದ ದೀಪ ಸೇರಿದಂತೆ ಆಯ್ದ ೫ ಹಾಡುಗಳನ್ನು ಹಾಡಬೇಕಿದೆ. ಇವುಗಳನ್ನು ಹೊರತುಪಡಿಸಿಯೂ ಆಸಕ್ತರು ಬೇರೆ ಕನ್ನಡ ಗೀತೆಗಳನ್ನು ಸಮಯದ ಮಿತಿ ಆಧರಿಸಿ ಪ್ರಸ್ತುಪಡಿಸಬಹುದಾಗಿದೆ.

                       ಶಾಲಾ ಕಾಲೇಜುಗಳಲ್ಲಿ, ಕಚೇರಿಗಳಲ್ಲಿ,  ವಿಶ್ವವಿದ್ಯಾಲಯಗಳು, ತಾಲೂಕು ಕೇಂದ್ರಗಳು, ದೆಹಲಿ ಕನ್ನಡ ಸಂಘ, ಹೊರನಾಡು, ಗಡಿನಾಡ ಸಂಘಗಳ ಕಚೇರಿ, ವಿಧಾನಸೌಧದ ಮೆಟ್ಟಿಲು ಹಾಗೂ ವಿಧಾನಸೌಧ-ವಿಕಾಸ ಸೌಧದ ಮಧ್ಯೆ ಇರುವ ಗಾಂಧಿ ಪ್ರತಿಮೆ ಎದುರು, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಸಮೂಹ ಗಾಯನ ನಡೆಸುವರು.

        ಅದೇ ರೀತಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಮೆಜೆಸ್ಟಿಕ್‌ ರೈಲು ನಿಲ್ದಾಣ, ಮೆಟ್ರೋ ನಿಲ್ದಾಣದಲ್ಲೂ ಈ ಐದು ಕನ್ನಡ ಗೀತೆಗಳನ್ನು ಹಾಡುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ನಾಡಿನ ಪ್ರಮುಖ ಪ್ರವಾಸಿ ಸ್ಥಾನಗಳು, ಕೋಟೆಗಳು, ಕಡಲತೀರ, ಐಟಿ ಕಂಪನಿಗಳು, ಆಸ್ಪತ್ರೆ ಹಾಗೂ ಜಿಲ್ಲಾ ಕೇಂದ್ರಗಳಲ್ಲೂ ಕೋಟಿ ಕಂಠ ಗಾಯನ ಅಭಿಯಾನ ನಡೆಯಲಿದೆ.
 
೬ ಹಾಡುಗಳನ್ನು  ಈ ಕೆಳಗೆ ನೀಡಲಾಗಿದೆ  (ಸೂಚನೆ: *ಹಾಡುಗಳ ಹೆಸರಿನ ಮೇಲೆ ಒತ್ತಿ ಹಾಡಿನ ಸಾಹಿತ್ಯವನ್ನು  ಪಡೆಯಿರಿ.
*ಆಡಿಯೋ ಮೇಲೆ ಒತ್ತಿ ಹಾಡು ಕೇಳಿ & ಡೌನ್ಲೋಡ್ ಮಾಡಿಕೊಳ್ಳಬಹುದು)






೫. ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು.. 



#ನನ್ನ ನಾಡು ನನ್ನ ಹಾಡು.
ಕೋಟಿ ಕಂಠ ಗಾಯನ.
ಗಾಯನದಲ್ಲಿ ಭಾಗವಹಿಸಲು ದಯವಿಟ್ಟು ಈ ಕ್ಯೂಆರ್ ಕೋಡ್  ಅಥವಾ ಈ ಕೆಳಗೆ ನೀಡಿದ ಲಿಂಕ್ ಉಪಯೋಗಿಸಿ ನೋಂದಾಯಿಸಿಕೊಳ್ಳಿ.

                   ++++++++++೦++++++++++


ಕನ್ನಡ ದೇಶ ಭಕ್ತಿ ಗೀತೆಗಳಿಗಾಗಿ ಇಲ್ಲಿ ಒತ್ತಿ...


ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು - 'ಹುಯಿಲಗೋಳು ನಾರಾಯಣರಾಯರು'

ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು 
ಬದುಕು ಬಲುಹೀನ ನಿಧಿಯು ಸದಭಿಮಾನದ ಗೂಡು ||ಪ||

ರಾಜನ್ಯರಿಪು ಪರಶುರಾಮನಮ್ಮನ ನಾಡು

ಆ ಜಲಧಿಯನೆ ಜಿಗಿದ ಹನುಮನುದಿಸಿದ ನಾಡು

ಓಜೆಯಿಂ ಮೆರೆದರಸುಗಳ ಸಾಹಸದ ಸೂಡು

ತೇಜವನು ನಮಗೀವ ವೀರವೃಂದದ ಬೀಡು || ೧ ||

ಲೆಕ್ಕಿಗ ಮಿತಾಕ್ಷರರು ಬೆಳೆದು ಮೆರೆದಿಹ ನಾಡು

ಜಕ್ಕಣನ ಶಿಲ್ಪಿ ಕಲೆಯಚ್ಚರಿಯ ಕರುಗೋಡು

ಚೊಕ್ಕಮತಗಳ ಸಾರಿದವರಿಗಿದು ನೆಲೆವೀಡು

ಬೊಕ್ಕಸದ ಕಣಜವೈ ವಿದ್ವತ್ತೆಗಳ ಕಾಡು || ೨ ||

ಪಾವನೆಯರಾ ಕೃಷ್ಣೆ ಭೀಮೆಯರ ತಾಯ್ನಾಡು

ಕಾವೇರಿ ಗೋದೆಯರು ಮೈದೊಳೆವ ನಲುನಾಡು

ಅವಗಂ ಸ್ಪೂರ್ತಿಸುವ ಕಬ್ಬಿಗರ ನಡೆಮಾಡು

ಕಾವ ಗದುಗಿನ ವೀರನಾರಾಯಣನ ಬೀಡು|| ೩ ||

                ----------೦----------

ರಚನೆಹುಯಿಲಗೋಳು ನಾರಾಯಣರಾಯರು

ಬಾರಿಸು ಕನ್ನಡ ಡಿಂಡಿಮವ - ಕುವೆಂಪು

ಬಾರಿಸು ಕನ್ನಡ ಡಿಂಡಿಮವ
ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ
ಬಾರಿಸು ಕನ್ನಡ ಡಿಂಡಿಮವ

ಬಾರಿಸು ಕನ್ನಡ ಡಿಂಡಿಮವ
ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ
ಬಾರಿಸು ಕನ್ನಡ ಡಿಂಡಿಮವ

ಸತ್ತಂತಿಹರನು ಬಡಿದೆಚ್ಚರಿಸು
ಕಚ್ಚಾಡುವರನು ಕೂಡಿಸಿ ಒಲಿಸು
ಸತ್ತಂತಿಹರನು ಬಡಿದೆಚ್ಚರಿಸು
ಕಚ್ಚಾಡುವರನು ಕೂಡಿಸಿ ಒಲಿಸು
ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು
ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು
ಒಟ್ಟಿಗೆ ಬಾಳುವ ತೆರದಲಿ ಹರಸು

ಬಾರಿಸು ಕನ್ನಡ ಡಿಂಡಿಮವ
ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ
ಬಾರಿಸು ಕನ್ನಡ ಡಿಂಡಿಮವ

ಚೈತ ಶಿವೇತರ ಕೃತಿ ಕೃತಿಯಲ್ಲಿ
ಮೂಡಲಿ ಮಂಗಳ ಮತಿ ಮತಿಯಲ್ಲಿ
ಚೈತ ಶಿವೇತರ ಕೃತಿ ಕೃತಿಯಲ್ಲಿ
ಮೂಡಲಿ ಮಂಗಳ ಮತಿ ಮತಿಯಲ್ಲಿ
ಕವಿ ಋಷಿ ಸಂತರ ಆದರ್ಶದಲಿ
ಕವಿ ಋಷಿ ಸಂತರ ಆದರ್ಶದಲಿ
ಸರ್ವೋದಯವಾಗಲಿ ಸರ್ವರಲಿ
ಸರ್ವೋದಯವಾಗಲಿ ಸರ್ವರಲಿ

ಬಾರಿಸು ಕನ್ನಡ ಡಿಂಡಿಮವ
ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ
ಬಾರಿಸು ಕನ್ನಡ ಡಿಂಡಿಮವ

(ಮೂಲ ಹಾಡು)
      ----------o----------

(ಕುವೆಂಪು ಅವರ ಹಾಡನ್ನೇ ಕೆಲ ಮಾರ್ಪಾಡುಗಳೊಂದಿಗಿನ ಹಾಡು)

ಬಾರಿಸು ಕನ್ನಡ ಡಿಂಡಿಮವ
ಕರ್ನಾಟಕ ಹೃದಯ ಶಿವ
ಬಾರಿಸು ಕನ್ನಡ ಡಿಂಡಿಮವ
ಕರ್ನಾಟಕ ಹೃದಯ ಶಿವ

ಓ ಓಹೋ ಓಹೋಹೋ…

ನೀ ಮೆಟ್ಟುವ ನೆಲ ಅದೇ ಕರ್ನಾಟಕ ನೀನೇರುವ ಮಾಲೆ ಸಹ್ಯಾದ್ರಿ
ನೀ ಮುಟ್ಟುವ ಮರ ಅದೇ ಶ್ರೀಗಂಧದ ಮರ
ನೀ ಕುಡಿಯುವ ನೀರ್ ಕಾವೇರಿ
ಎಲ್ಲಾದರೂ ಇರು, ಎಂತಾದರು ಇರು,
ಎಂದೆಂದಿಗೂ ನೀ ಕನ್ನಡವಾಗಿರು
ಕನ್ನಡ ಗೋವಿನ ಓ ಮುದ್ದಿನ ಕರು,
ಕನ್ನಡತನವೊಂದಿದ್ದರೆ ನೀ ನಮ್ಮಗೆ ಕಲ್ಪತರು!

ಹೇ ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ
ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ
ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ
ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ

ಓ ಹೊಹೊ…

ಸತ್ತಂತಿಹರನು ಬಡಿದೆಚ್ಚರಿಸು
ಕಚ್ಚಾಡುವರನು ಕೂಡಿಸಿ ಒಲಿಸು
ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು
ಒಟ್ಟಿಗೆ ಬಾಳುವ ತೆರದಲಿ ಹರಸು
ಕನ್ನಡ… ಕನ್ನಡ… ಆ… ಸವಿಗನ್ನಡ
ಕನ್ನಡ… ಕನ್ನಡ… ಆಹಾ… ಸವಿಗನ್ನಡ

ಕನ್ನಡ ಎನೆ ಕುಣಿದಾಡುವುದೆನ್ನೆದೆ
ಕನ್ನಡ ಎನೆ ಕಿವಿ ನಿಮಿರುವುದು
(ಕನ್ನಡ ಎನೆ ಕುಣಿದಾಡುವುದೆನ್ನೆದೆ
ಕನ್ನಡ ಎನೆ ಕಿವಿ ನಿಮಿರುವುದು)


1234
ಕನ್ನಡ ಎನೆ ಕುಣಿದಾಡುವುದೆನ್ನೆದೆ
ಕನ್ನಡ ಎನೆ ಕಿವಿ ನಿಮಿರುವುದು
ಕಾಮನ ಬಿಲ್ಲನು ಕಾಣುವ ಕವಿಯೊಳು
ತೆಕ್ಕನೆ ಮನ ಮೈ ಮರೆಯುವುದು

ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ
ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ
ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ
ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ
ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ
ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ

ಎಲ್ಲಾದರೂ ಇರು, ಎಂತಾದರೂ ಇರು,
ಎಂದೆಂದಿಗೂ ನೀ ಕನ್ನಡವಾಗಿರು
ಎಲ್ಲಾದರೂ ಇರು, ಎಂತಾದರೂ ಇರು,
ಎಂದೆಂದಿಗೂ ನೀ ಕನ್ನಡವಾಗಿರು

ಹುಟ್ಟಿದರೆ ಕನ್ನಡ ನಾಡಲ್ ಹುಟ್ಟಬೇಕು..

ಹುಟ್ಟಿದರೆ ಕನ್ನಡ ನಾಡಲ್ ಹುಟ್ಟಬೇಕು…
ಮೆಟ್ಟಿದರೆ ಕನ್ನಡ ಮಣ್ಣ ಮೆಟ್ಟಬೇಕು…
ಬದುಕಿದು ಜಟಕಾ ಬಂಡಿ..
ಇದು ವಿಧಿಯೋಡಿಸುವ ಬಂಡಿ…
ಬದುಕಿದು ಜಟಕಾ ಬಂಡಿ..
ವಿಧಿ ಅಲೆದಡಿಸುವ ಬಂಡಿ…

ಹುಟ್ಟಿದರೆ ಕನ್ನಡ ನಾಡಲ್ ಹುಟ್ಟಬೇಕು…
ಮೆಟ್ಟಿದರೆ ಕನ್ನಡ ಮಣ್ಣ ಮೆಟ್ಟಬೇಕು…

ಕಾಶೀಲಿ ಸ್ನಾನ ಮಾಡು..
ಕಾಶ್ಮೀರ ಸುತ್ತಿ ನೋಡು…
ಜೋಗದ ಗುಂಡಿ ಒಡೆಯ
ನಾನೆಂದೂ ಕೂಗಿ ಹಾಡು…
ಅಜಂತಾ ಎಲ್ಲೋರನ
ಬಾಳಲ್ಲಿ ಒಮ್ಮೆ ನೋಡು…
ಬಾದಾಮಿ ಐಹೊಳೆಯ
ಚಂದಾ ನಾ ತೂಕ ಮಾಡು…
ಕಲಿಯೋಕೆ ಕೋಟಿ ಬಾಷೆ
ಆಡೋಕೆ ಒಂದೇ ಬಾಷೆ…
ಕನ್ನಡ ಕನ್ನಡ
ಕಸ್ತೂರಿ ಕನ್ನಡಾ…
ಹುಟ್ಟಿದರೆ ಕನ್ನಡ ನಾಡಲ್ ಹುಟ್ಟಬೇಕು…
ಮೆಟ್ಟಿದರೆ ಕನ್ನಡ ಮಣ್ಣ ಮೆಟ್ಟಬೇಕು…
ಬದುಕಿದು ಜಟಕಾ ಬಂಡಿ..
ಇದು ವಿಧಿಯೋಡಿಸುವ ಬಂಡಿ…
ಬದುಕಿದು ಜಾತಕ ಬಂಡಿ..
ವಿಧಿ ಗುರಿ ತೋರಿಸುವ ಬಂಡಿ…
ದ್ಯಾನಕ್ಕೆ ಭೂಮಿ ಇದು..
ಪ್ರೇಮಕ್ಕೆ ಸ್ವರ್ಗ ಇದು…
ಸ್ನೇಹಕ್ಕೆ ಶಾಲೆ ಇದು..
ಜ್ಞಾನಕ್ಕೆ ಪೀಠ ಇದು…
ಕಾಯಕ್ಕೆ ಕಲ್ಪ ಇದು..
ಶಿಲ್ಪಕ್ಕೆ ಕಲ್ಪ ಇದು…
ನಾಟ್ಯಕ್ಕೆ ನಾಡಿ ಇದು..
ನಾದಾಂತರಂಗವಿದು…
ಕುವೆಂಪು ಬೇಂದ್ರೆ ಇಂದ..
ಕಾರಂತ ಮಾಸ್ತಿ ಇಂದ…
ಧನ್ಯವೀ ಕನ್ನಡ..

ಕಾಗಿನ ಕನ್ನಡಾ…
ಹುಟ್ಟಿದರೆ ಕನ್ನಡ ನಾಡಲ್ ಹುಟ್ಟಬೇಕು…
ಮೆಟ್ಟಿದರೆ ಕನ್ನಡ ಮಣ್ಣ ಮೆಟ್ಟಬೇಕು…
ಬದುಕಿದು ಜಟಕಾ ಬಂಡಿ..

ಇದು ವಿಧಿಯೋಡಿಸುವ ಬಂಡಿ…
ಬದುಕಿದು ಜಟಕಾ ಬಂಡಿ..
ವಿಧಿ ಧದ ಸೇರಿಸುವ ಬಂಡಿ…
ಬಾಳಿನ ಬೆನ್ನು ಹತ್ತಿ..
ನೂರಾರು ಊರು ಸುತ್ತಿ…
ಏನೇನೋ ಕಂಡ ಮೇಲೂ..
ನಮ್ಮೂರೇ ನಮಗೆ ಮೇಲೂ…
ಕೈಲಾಸಂ ಕಂಡ ನಮಗೆ..
ಕೈಲಾಸ ಯಾಕೆ ಬೇಕು…
ದಾಸರ ಕಂಡ ನಮಗೆ..
ವೈಕುಂಟ ಯಾಕೆ ಬೇಕು…
ಮುಂದಿನ ನನ್ನ ಜನ್ಮ..
ಬರದಿಟ್ಟನಂತೆ ಬ್ರಹ್ಮ…
ಇಲ್ಲಿಯೇ ಇಲ್ಲಿಯೇ

ಎಂದಿಗೂ ನಾನ್ ಇಲ್ಲಿಯೇ…

ಹುಟ್ಟಿದರೆ ಕನ್ನಡ ನಾಡಲ್ ಹುಟ್ಟಬೇಕು…
ಮೆಟ್ಟಿದರೆ ಕನ್ನಡ ಮಣ್ಣ ಮೆಟ್ಟಬೇಕು…
ಬದುಕಿದು ಜಟಕಾ ಬಂಡಿ.. ಇದು ವಿಧಿಯೋಡಿಸುವ ಬಂಡಿ…
ಬದುಕಿದು ಜಟಕಾ ಬಂಡಿ.. ವಿಧಿ ದಡ ಸೇರಿಸುವ ಬಂಡಿ…
               ----------೦----------

ಚಿತ್ರ: ಆಕಸ್ಮಿಕ
ರಚನೆ : ಹಂಸಲೇಖ
ಸಂಗೀತ : ಡಾ. ರಾಜಕುಮಾರ್

Popular Post