ಈ ಬ್ಲಾಗ್ ಅನ್ನು ಹುಡುಕಿ

🔔 ಸೂಚನೆ
ಲೋಡ್ ಆಗುತ್ತಿದೆ...

NMMS Scholorship Scheme-2025-26 | NSP ಯಲ್ಲಿ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ.-VJ

NMMS Scholorship Scheme-2025-26 ಶೈಕ್ಷಣಿಕ ಸಾಲಿಗೆ NMMS ವಿದ್ಯಾರ್ಥಿ ವೇತನಕ್ಕಾಗಿ, ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ (NSP) ತೆರೆದಿರುವ ಕುರಿತು.
NMMS Scholorship Scheme-2025-26 | NSP ಯಲ್ಲಿ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ.-VJ

NMMS Scholorship Scheme-2025-26 ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, 2025-26ನೇ ಸಾಲಿನಲ್ಲಿ NMMS ವಿದ್ಯಾರ್ಥಿ ವೇತನಕ್ಕಾಗಿ National Scholarship Portal(NSP) ನಲ್ಲಿ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು, ದಿನಾಂಕ:2-6-2025 ರಿಂದ NSP ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಾರಂಭಿಸಿರುವುದಾಗಿ ಉಲ್ಲೇಖಿತ ಪತ್ರದಲ್ಲಿ ತಿಳಿಸಿರುತ್ತಾರೆ. ಇದನ್ನು ಓದಿ= >> FLN ಕ್ರಿಯಾ ಯೋಜನೆ 3ರಿಂದ10ನೇ ತರಗತಿ 

National Scholarship Portal ನಲ್ಲಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು, ಅನುಸರಿಸಬೇಕಾದ ಪ್ರಮುಖ ಅಂಶಗಳು :

➤2025-26ನೇ ಸಾಲಿನಲ್ಲಿ Fresh ಹಾಗೂ Renewal ವಿದ್ಯಾರ್ಥಿಗಳು (NSP) ಯಲ್ಲಿ ಅರ್ಜಿಗಳನ್ನು ಸಲ್ಲಿಸಲು One Time Registration(OTR) ಮಾಡಿಕೊಳ್ಳುವುದು ಕಡ್ಡಾಯವಾಗಿರುತ್ತದೆ.
Visit Official Website: www.scholarships.gov.in

➤(OTR) is a unique 14-digit number issued based on the Aadhaar/Aadhaar Enrolment ID (EID)

➤One Time Registration (OTR) ಪ್ರತಿ ವಿದ್ಯಾರ್ಥಿಗೂ ನೀಡಲಾಗುವ ಒಂದು ಅನನ್ಯ (unique) ಸಂಖ್ಯೆಯಾಗಿದ್ದು, ಇದು ವಿದ್ಯಾರ್ಥಿಯ ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ (NSP)ನಲ್ಲಿ ಅರ್ಜಿ ಸಲ್ಲಿಸಲು ಅನ್ವಯವಾಗುತ್ತದೆ.

➤NMMS ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿರುವ Renewal ವಿದ್ಯಾರ್ಥಿಗಳಿಗೆ NSP ನಲ್ಲಿ ನೊಂದಾಯಿತ ಮೋಬೈಲ್‌ಗೆ SMS ಮೂಲಕ Reference / OTR ಸಂಖ್ಯೆ ಕಳುಹಿಸಲಾಗುತ್ತಿದೆ.

OTR Generateಮಾಡುವ ವಿಧಾನ.


 
ಅರ್ಜಿ ಸಲ್ಲಿಸುವ ವಿಧಾನ 

➤Fresh ವಿದ್ಯಾರ್ಥಿಗಳಿಗೆ SMS ಮೂಲಕ Reference ID ಅಥವಾ OTR ಸಂಖ್ಯೆಯನ್ನು ಕಳುಹಿಸಲಾಗುವುದಿಲ್ಲ. ಆದ್ದರಿಂದ NSP ನಲ್ಲಿ ಮೊದಲ ಸಲ ಅರ್ಜಿ ಸಲ್ಲಿಸುತ್ತಿರುವ (Fresh) ವಿದ್ಯಾರ್ಥಿಗಳು National Scholarship Portal ನಲ್ಲಿ Student Login ನಲ್ಲಿ ಲಭ್ಯವಿರುವ “Know your OTR” ಎಂಬ ಆಯ್ಕೆಯನ್ನು ಬಳಸಿ OTR ಅಥವಾ ರೆಫೆರನ್ಸನ್ ಸಂಖ್ಯೆಯೆನ್ನು ಪಡೆದುಕೊಳ್ಳಬೇಕಾಗುತ್ತದೆ.

➤2025-26ನೇ ಸಾಲಿನಲ್ಲಿ NSP ನಲ್ಲಿ ಅರ್ಜಿ ಸಲ್ಲಿಸಲು Face Authentication ಕಡ್ಡಾಯವಾಗಿದ್ದು, ಆಧಾ‌ರ್ ನಲ್ಲಿರುವ ಮಾಹಿತಿಗಳನ್ನು ಸರಿಪಡಿಸುವುದರೊಂದಿಗೆ ಇತ್ತೀಚಿನ ಭಾವಚಿತ್ರವನ್ನು ಕಡ್ಡಾಯವಾಗಿ update ಮಾಡಿಸುವುದು. ( ಆಧಾರ್ ನಲ್ಲಿ ಅತಿ ಚಿಕ್ಕ ವಯಸ್ಸಿನ ಫೋಟೊಗಳಿರುವುದರಿಂದ Face authentication Error ಎಂದು ಕಾಣಿಸಿಕೊಳ್ಳುತ್ತದೆ)

ಅ) ಆಧಾ‌ರ್ ಸಂಖ್ಯೆ ಇರುವ ವಿದ್ಯಾರ್ಥಿಗಳು OTR ಪಡೆಯಲು ಅಗತ್ಯ ದಾಖಲೆಗಳು
  1. ಸಕ್ರಿಯ ಮೊಬೈಲ್ ಸಂಖ್ಯೆ
  2. ಆಧಾ‌ರ್ ಸಂಖ್ಯೆಗೆ ಜೋಡಣೆಯಾಗಿರುವ ಮೊಬೈಲ್‌ ಸಂಖ್ಯೆ
  3. ವಿದ್ಯಾರ್ಥಿಯ ಆಧಾರ್ ಸಂಖ್ಯೆ

ಆ) ಆಧಾ‌ರ್ ಸಂಖ್ಯೆ ಇಲ್ಲದೇ ಇರುವ ವಿದ್ಯಾರ್ಥಿಗಳು OTR ಪಡೆಯಲು ಅಗತ್ಯವಿರುವ ದಾಖಲೆಗಳು
  1. ಸಕ್ರಿಯ ಮೊಬೈಲ್ ಸಂಖ್ಯೆ
  2. ಪೋಷಕರ ಆಧಾ‌ರ್ ಸಂಖ್ಯೆಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆ

➤ವಿದ್ಯಾರ್ಥಿಯು ಆಧಾರ್ ಸಂಖ್ಯೆಗಾಗಿ ಸಲ್ಲಿಸಿದ ಅರ್ಜಿಯ EID ಸಂಖ್ಯೆ EID ಮೂಲಕ ನೋಂದಾಯಿಸಿದ ಫಲಾನುಭವಿಗಳ OTR ID ತಾತ್ಕಾಲಿಕವಾಗಿರುತ್ತದೆ.

➤ವಿದ್ಯಾರ್ಥಿಗಳುಆಧಾರ್ ಅನ್ನು ಸಲ್ಲಿಸಿ eKYCಯನ್ನು ನಿಗದಿತ ಸಮಯದೊಳಗೆ ಮಾಡಿದಲ್ಲಿ ಮಾತ್ರ ವಿದ್ಯಾರ್ಥಿವೇತನದ ವಿತರಣೆಯನ್ನು ಮಾಡಲಾಗುತ್ತದೆ.

➤ಪೋಷಕರ ಆಧಾರ್ ಸಂಖ್ಯೆ:
ವಿ ಸೂ : ಪೋಷಕರ ಆಧಾರ್ ಸಂಖ್ಯೆ ನೀಡಿದ್ದರೂ, ಕೂಡ ಉಳಿದ ಎಲ್ಲಾ ಮಾಹಿತಿಗಳು ಹಾಗೂ ಭಾವಚಿತ್ರ ವಿದ್ಯಾರ್ಥಿಯದ್ದೇ ಆಗಿರಬೇಕು. ವಿದ್ಯಾರ್ಥಿ ವೇತನವನ್ನು ಪಡೆಯಲು, ಕಾಲ ಮಿತಿಯೊಳಗೆ ವಿದ್ಯಾರ್ಥಿಯು ತನ್ನ ಆಧಾ‌ರ್ ಸಂಖ್ಯೆಯನ್ನು update ಮಾಡತಕ್ಕದ್ದು.

ಇ) OTR(One Time Registration) ಸಂಖ್ಯೆ ಪಡೆದಿರುವ ವಿದ್ಯಾರ್ಥಿಗಳಿಗೆ ಸೂಚನೆಗಳು.

➤2023-24 ಹಾಗೂ 2024-25ನೇ ಸಾಲಿನಲ್ಲಿ face authentication ಮಾಡಿದ ವಿದ್ಯಾರ್ಥಿಗಳಿಗೆ NSPಯ ಮೂಲಕ ಜೆನೆರೇಟ್ ಆದ One Time Registration(OTR) ಸಂಖ್ಯೆಯನ್ನು, ಅರ್ಜಿದಾರರ ನೊಂದಾಯಿತ ಮೊಬೈಲ್ ಸಂಖ್ಯೆಗೆ SMS ಮೂಲಕ ಕಳುಹಿಸಿಕೊಡಲಾಗಿದೆ.

➤ಈಗಾಗಲೇ OTR ಸಂಖ್ಯೆಯನ್ನು ಪಡೆದಿರುವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕಾಗಿ ನೇರವಾಗಿ NSP ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬೇಕು

ಈ) ರೆಫರೆನ್ಸ್ ಸಂಖ್ಯೆ ಪಡೆದಿರುವ ವಿದ್ಯಾರ್ಥಿಗಳು OTR ಪಡೆಯಲು ಅನುಸರಿಸಬೇಕಾದ ಕ್ರಮಗಳು ( ರೆಫರ ಸಂಖ್ಯೆ ಉದಾ: R23-003101555)

➤2023-24ನೇ ಸಾಲಿನಲ್ಲಿ OTP based eKYC ಯನ್ನು ಪೂರ್ಣಗೊಳಿಸಿದ್ದರೂ ಕೂಡ, face authentication ಅನ್ನು ಪೂರ್ಣಗೊಳಿಸದೇ ಇರುವ ವಿದ್ಯಾರ್ಥಿಗಳಿಗೆ MoE ಯಿಂದ ನೋಂದಾಯಿತ ಮೊಬೈಲ್ ಗೆ ರೆಫರೆನ್ಸ್ ಸಂಖ್ಯೆಯನ್ನು ಕಳುಹಿಸಲಾಗಿರುತ್ತದೆ.

➤ರೆಫೆರೆನ್ ಸಂಖ್ಯೆಯನ್ನು ಬಳಸಿಕೊಂಡು, ವಿದ್ಯಾರ್ಥಿಗಳು Face Authentication ಪೂರ್ಣಗೊಳಿಸುವ ಮೂಲಕ OTR ಸಂಖ್ಯೆಯನ್ನು ಪಡೆದುಕೊಳ್ಳುವುದು.

➤ಅದಕ್ಕಾಗಿ ಆಂಡ್ರಾಯ್ಡ್ ಮೊಬೈಲ್‌ನ google play store ನಿಂದ ಈ ಮುಂದೆ ಸೂಚಿಸಿರುವ ಎರಡೂ App ಗಳನ್ನು install ಮಾಡಿಕೊಳ್ಳುವುದು

1. AadhaarFaceRD App ನ್ನು install ಮಾಡಿಕೊಳ್ಳುವುದು.(Link: https://play.google.com/store/apps/details?id=in.gov.uidai.facerd

2. NSP OTR App ನ್ನು install ಮಾಡಿಕೊಳ್ಳುವುದು. (link: https://play.google.com/store/apps/details?id=in.gov.scholarships.nspotr&pli=1)

ಉ) App ಗಳ ಮೂಲಕ OTR ಪಡೆಯುವ ಪ್ರಕ್ರಿಯೆ

➤Mobile ನಲ್ಲಿ NSP OTR App ಅನ್ನು ತೆರೆದಾಗ ಕಾಣಿಸಿಕೊಳ್ಳುವ ಸ್ತ್ರೀನ್ ನಲ್ಲಿ ಕೆಂಪು ಬಣ್ಣದಲ್ಲಿ ಗುರುತು ಮಾಡಿರುವ “eKYC with FaceAuth” ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.

➤ಈ screen ನಲ್ಲಿ ವಿದ್ಯಾರ್ಥಿಯು ಪಡೆದಿರುವ Reference ID ನಮೂದಿಸುವುದು.

➤ನಂತರ ಮೊಬೈಲ್ ಗೆ ಬಂದಿರುವ OTP ಹಾಗೂ ಸ್ವೀನ್‌ನಲ್ಲಿ ಸೂಚಿಸಿರುವ CAPTCHA ಸರಿಯಾಗಿ ನಮೂದಿಸಿ Next ಎಂಬುದರ ಮೇಲೆ ಕ್ಲಿಕ್ ಮಾಡಿ.

➤ವಿದ್ಯಾರ್ಥಿಯ ಆಧಾರನಲ್ಲಿರುವಂತೆ ಮಾಹಿತಿಗಳು ಸ್ತ್ರೀನ್ ಮೇಲೆ ಕಾಣಿಸಿಕೊಳ್ಳುತ್ತವೆ.ಮಾಹಿತಿಯನ್ನು ಖಚಿತಪಡಿಸಿಕೊಂಡು Proceed For Face Authentication ಮೇಲೆ ಕ್ಲಿಕ್ ಮಾಡಿ.

➤ಸ್ತ್ರೀನ್ ಮೇಲೆ ಕಾಣಿಸಿಕೊಳ್ಳುವ ಸೂಚನೆಗಳನ್ನು ಓದಿಕೊಂಡು I Agree ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

➤ಈಗ ವಿದ್ಯಾರ್ಥಿಯ Face authentication ಮಾಡಲು ಹೊಸ screen ಕಾಣಿಸಿಕೊಳ್ಳುತ್ತದೆ.

➤Screen ಮೇಲಿರುವ ಸೂಚನೆಗಳನ್ನು ಓದಿಕೊಂಡು check box ನಲ್ಲಿ ” Tick Mark” ಗುರ್ತಿಸಿ Proceed ಆಯ್ಕೆ ಮೇಲೆ ಕ್ಲಿಕ್ ಮಾಡಿ.

➤ನಂತರ Face authentication screen ಕಾಣಿಸಿಕೊಳ್ಳುತ್ತದೆ.

➤Screen ಮೇಲೆ ಕಾಣಿಸಿಕೊಳ್ಳುವ ವೃತ್ತಾಕಾರದೊಳಗೆ ವಿದ್ಯಾರ್ಥಿಯ ಮುಖ ಸ್ಪಷ್ಟವಾಗಿ ಗೋಚರಿಸುವಂತೆ ಇರಬೇಕು.

➤ನಂತರ Pls Blink to capture ಎಂಬ ಸೂಚನೆ ಕಾಣಿಸಿದಾಗ ವಿದ್ಯಾರ್ಥಿಯು ಕಣ್ಣು ರೆಪ್ಪೆ ಮುಚ್ಚಿ ತೆರೆದಾಗ Face Capture ಆಗುತ್ತದೆ. ( Error ಬಂದಲ್ಲಿ ಮತ್ತೆ ಪ್ರಯತ್ನಿಸಿ)

➤Face authentication successfully completed ಎಂಬ ಮಾಹಿತಿಯೊಂದಿಗೆ OTR ಸಂಖ್ಯೆ ಜನರೇಟ್ ಆಗುತ್ತದೆ.

➤ಜನರೇಟ್ ಆದ OTR ಸಂಖ್ಯೆ ಹಾಗೂ Password ನೋಂದಾಯಿತ ಮೊಬೈಲ್ ಗೆ SMS ಬರುತ್ತದೆ.

➤ಈಗ login ಆಯ್ಕೆಯ ಮೇಲೆ ಕ್ಲಿಕ್ ಮಾಡಿ, ಕಾಣಿಸಿಕೊಳ್ಳುವ ಸ್ಕಿನ್ ನಲ್ಲಿ OTR ಸಂಖ್ಯೆ ಹಾಗೂ Password ಹಾಗೂ CAPTCHA ಸರಿಯಾಗಿ ನಮೂದಿಸಿ login ಆಗಿ ಹೊಸ password ಸೃಜಿಸಿಕೊಳ್ಳುವುದು. (ಕನಿಷ್ಟ ಒಂದು Upper case, Lower case, special character, numerical character ಒಳಗೊಂಡಂತೆ ಕನಿಷ್ಠ 8 character ಇರಬೇಕು)

➤ಕೆಳಗಿರುವ CAPTCHA ನಮೂದಿಸಿ Next ಎಂಬುದರ ಮೇಲೆ ಕ್ಲಿಕ್ ಮಾಡಿದಾಗ, Password successfully updated ಎಂಬ ಮಾಹಿತಿ ಲಭ್ಯವಾಗುತ್ತದೆ.

➤ಈ ರೀತಿ ನಡೆದ OTR a Password  National Scholarship Portal ನಲ್ಲಿ ಅರ್ಜಿ ಸಲ್ಲಿಸಲು ಕ್ರಮವಹಿಸುವುದು.

ಊ) Reference ID ಪಡೆಯದೇ ಇರುವ Fresh ವಿದ್ಯಾರ್ಥಿಗಳು ವಹಿಸಬೇಕಾದ ಕ್ರಮಗಳು

➤ವಿದ್ಯಾರ್ಥಿಗಳು NSP ನಲ್ಲಿ Login ಆಗುವುದು.

➤Apply for One Time Registration ಮೇಲೆ ಕ್ಲಿಕ್ ಮಾಡುವುದು.

➤ಕಾಣಿಸಿಕೊಳ್ಳುವ ಸ್ತ್ರೀನ್ ನಲ್ಲಿ Register ಮೇಲೆ ಕ್ಲಿಕ್ ಮಾಡುವುದು.

➤ಸೂಚನೆಗಳನ್ನು ಓದಿಕೊಂಡು check box ನಲ್ಲಿ” TICK MARK” ಗುರ್ತಿಸಿ Next ಮೇಲೆ ಕ್ಲಿಕ್ ಮಾಡುವುದು.

➤ಕಾಣಿಸಿಕೊಳ್ಳುವ ಸ್ಕ್ರೀನ್ನಲ್ಲಿ ಮೊಬೈಲ್ ಸಂಖ್ಯೆ ನಮೂದಿಸಿ OTP ಪಡೆಯುವುದು.

➤ಪಡೆದ OTP ಹಾಗೂ Captcha ನಮೂದಿಸಿ Verify ಮೇಲೆ ಕ್ಲಿಕ್ ಮಾಡುವುದು.

➤ಕಾಣಿಸಿಕೊಳ್ಳುವ ಸ್ತ್ರೀನ್ ನಲ್ಲಿ ಆಧಾರ್ ಸಂಖ್ಯೆ ನಮೂದಿಸಿ OTP ಪಡೆಯುವುದು.
 
➤ಪಡೆದ OTP ಹಾಗೂ Captcha ನಮೂದಿಸಿ Verify ಮೇಲೆ ಕ್ಲಿಕ್ ಮಾಡುವುದು. CAPCTHA ಅನ್ನು ನಮೂದಿಸಿ Verify ಮೇಲೆ ಕ್ಲಿಕ್ ಮಾಡುವುದು.

➤ಈಗ Reference ID ಜನರೇಟ್ ಆಗುತ್ತದೆ.

➤ಮೇಲೆ ಕಂಡಿಕೆ ಈ ಹಾಗೂ ಉ ನಲ್ಲಿ ತಿಳಿಸಿರುವ ಕ್ರಮಗಳನ್ನು ಅನುಸರಿಸಿ ನಂತರ National Scholarship Portal ನಲ್ಲಿ ಅರ್ಜಿ ಸಲ್ಲಿಸಲು ಕ್ರಮವಹಿಸುವುದು.



ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಹಾಗೂ ಪರಿಶೀಲನಾ ಹಂತಗಳು.

➤ವಿವಿಧ ಹಂತದ ಅಧಿಕಾರಿಗಳು ಕೈಗೊಳ್ಳಬೇಕಾದ ಕಾರ್ಯಗಳು

ಜಿಲ್ಲಾ (ಡಯಟ್) ಹಂತ:
➤ಡಯಟ್ ಪ್ರಾಂಶುಪಾಲರು ತಮ್ಮ ವ್ಯಾಪ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಭೆ ಕರೆದು NSP OTR ಹಾಗೂ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡುವುದು.

➤ಸ್ಥಳೀಯ ಪತ್ರಿಕೆಗಳಲ್ಲಿ NMMS ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಪ್ರಕಟಣೆ ಮಾಡುವುದು.

➤ಸ್ಥಳೀಯ ಕೇಬಲ್ ನೆಟ್ವರ್ಕ ಮುಖಾಂತರ NMMS ವಿದ್ಯಾರ್ಥಿ ವೇತನದ ಬಗ್ಗೆ ಪ್ರಚಾರ ಮಾಡುವುದು.

➤ತಮ್ಮ ವ್ಯಾಪ್ತಿಯಲ್ಲಿ ಬರುವ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳಿಗೆ ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡುವುದು.

➤ಶಾಲಾ ಹಾಗೂ ಪದವಿ ಪೂರ್ವ ಕಾಲೇಜುಗಳಿಂದ NSPನಲ್ಲಿ Submit ಆಗಿರುವ ಅರ್ಜಿಗಳನ್ನು ಜಿಲ್ಲಾ ಹಂತದಲ್ಲಿ NMMS ಮಾರ್ಗಸೂಚಿ ಅನುಸಾರವಾಗಿ Verify ಮಾಡುವುದು.

➤ಪ್ರತಿ 15 ದಿನಗಳಿಗೊಮ್ಮೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಭೆ ಕರೆದು NMMS ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಬಗ್ಗೆ ಪ್ರಗತಿ ಪರಿಶೀಲನೆ ಮಾಡುವುದು.

➤ಜಿಲ್ಲೆಯ ಎಲ್ಲಾ ಅರ್ಹ ವಿದ್ಯಾರ್ಥಿಗಳು, ನಿಗಧಿತ ಅವಧಿಯೊಳಗಡೆ ಅರ್ಜಿ ಸಲ್ಲಿಸಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳುವುದು.

ತಾಲ್ಲೂಕು ಹಂತ :
➤ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಮುಖ್ಯೋಪಾಧ್ಯಯರ ಸಭೆ ಕರೆದು NSP OTR ಹಾಗೂ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹಾಗೂ ಅರ್ಜಿಗಳನ್ನು INO Login ನಲ್ಲಿ Verify ಮಾಡುವ ಕ್ರಮದ ಬಗ್ಗೆ ತಿಳಿಸುವುದು.

➤ಸ್ಥಳೀಯ ಸುದ್ದಿ ಮಾಧ್ಯಮಗಳನ್ನು ಬಳಸಿಕೊಂಡು NMMS ವಿದ್ಯಾರ್ಥಿ ವೇತನದ ಬಗ್ಗೆ ಪ್ರಚಾರ ಮಾಡುವುದು.

➤NMMS ವಿದ್ಯಾರ್ಥಿ ವೇತನದ ಬಗ್ಗೆ ಬ್ಯಾನರ್ / ಪಾಂಪ್ಲೆಟ್ ಗಳನ್ನು ಬಳಸಿ ಪ್ರಚಾರ ಮಾಡುವುದು.ತಮ್ಮ ಕಛೇರಿಯ NOTICE BOARD ನಲ್ಲಿ ಈ ಕುರಿತು ಪ್ರಕಟಿಸಲು ಕ್ರಮ ವಹಿಸುವುದು.

➤ಪ್ರತಿ 15 ದಿನಗಳಿಗೊಮ್ಮೆ ಶಾಲಾ ಮುಖ್ಯಸ್ಥರು/ಪ್ರಾಂಶುಪಾಲರುಗಳ ಸಭೆ ಕರೆದು NMMS ವಿದ್ಯಾರ್ಥಿ ವೇತನದ ಬಗ್ಗೆ ಪ್ರಗತಿ ಪರಿಶೀಲನೆ ಮಾಡುವುದು.

ಶಾಲಾ /ಪದವಿ ಪೂರ್ವ ಹಂತ :
➤ಶಿಕ್ಷಕರು / ಉಪನ್ಯಾಸಕರುಗಳಿಗೆ ತರಗತಿಗಳಲ್ಲಿ NMMS ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ನೀಡಲು ತಿಳಿಸುವುದು.

➤ಅರ್ಜಿ ಸಲ್ಲಿಸುವ ಪೂರ್ವದಲ್ಲಿ Guidelines for Registration on National Scholarship Portal ಅನ್ನು ಪೂರ್ಣವಾಗಿ ಓದಿ, ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ಮುಖ್ಯ ಶಿಕ್ಷಕರು ಕ್ರಮವಹಿಸುವುದು.

➤ಶಾಲಾ / ಕಾಲೇಜು NOTICE BOARD ನಲ್ಲಿ ಈ ಕುರಿತು ಪ್ರಕಟಿಸುವುದು.

➤www.scholarship.gov.in ವೆಬ್ಸೈಟ್ ನ NSP & Institute Login ನಲ್ಲಿ USER ID, ಪಾಸ್ವರ್ಡ್ ಅನ್ನು ಬಳಸಿ ಲಾಗಿನ್ ಆದ ನಂತರ School Profile ಅಪ್ ಡೇಟ್ ಮಾಡಿಕೊಳ್ಳುವುದು.

➤ಶಾಲಾ / ಕಾಲೇಜು ಮುಖ್ಯಸ್ಥರು ಅರ್ಹ ವಿದ್ಯಾರ್ಥಿಗಳ ಪೋಷಕರ ಸಭೆ ಕರೆದು ಅರ್ಜಿ ಸಲ್ಲಿಸಲು ತಿಳಿಸುವುದು.

➤ವಿದ್ಯಾರ್ಥಿಗಳು Submit ಮಾಡಿರುವ ಅರ್ಜಿಯ ಧೃಡೀಕೃತ ಪ್ರತಿಯನ್ನು ಪಡೆದು, ಶಾಲೆಯಲ್ಲಿ ಪ್ರತ್ಯೇಕ ಕಡತ ನಿರ್ವಹಿಸುವುದು.

➤ವಿದ್ಯಾರ್ಥಿ ವೇತನಕ್ಕೆ ಅರ್ಹರಾದ ವಿದ್ಯಾರ್ಥಿಗಳ ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ ನವೀಕೃತ ಆದಾಯ ಪ್ರಮಾಣ ಪತ್ರ, ಆಧಾರ್ ಗೆ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಪಾಸ್ ಬುಕ್ ಮುಂತಾದವುಗಳ ದೃಢೀಕೃತ ಪ್ರತಿಗಳನ್ನು ಸಂಗ್ರಹಿಸಿಟ್ಟುಕೊಳ್ಳುವುದು.

➤ವಿದ್ಯಾರ್ಥಿಗಳು NSP ನಲ್ಲಿ ಸಲ್ಲಿಸಿರುವ ಅರ್ಜಿಗಳನ್ನು NMMS ಮಾರ್ಗಸೂಚಿ ಅನುಸಾರವಾಗಿ, ನಿಗಧಿತ ಅವಧಿಯೊಳಗಾಗಿ Verify ಮಾಡುವುದು.

➤ಶಾಲೆಯ ಎಲ್ಲಾ ಅರ್ಹ ವಿದ್ಯಾರ್ಥಿಗಳು, ನಿಗಧಿತ ಅವಧಿಯೊಳಗಡೆ ಅರ್ಜಿ ಸಲ್ಲಿಸಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳುವುದು.

➤ವಿದ್ಯಾರ್ಥಿಗಳು, ಪೋಷಕರು ಹಾಗೂ ಶಾಲಾ / ಕಾಲೇಜು ಮುಖ್ಯಸ್ಥರು ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲಾ NMMS ನೋಡಲ್ ಅಧಿಕಾರಿಗಳನ್ನು ಸಂಪರ್ಕಿಸುವುದು,

ವಿ. ಸೂ : ಶೈಕ್ಷಣಿಕ ಜಿಲ್ಲೆಗಳಾದ ಚಿಕ್ಕೋಡಿ, ಬೆಂಗಳೂರು ಉತ್ತರ, ಮಧುಗಿರಿ ಹಾಗೂ ಶಿರಸಿ ಜಿಲ್ಲೆಯವರು ಕಡ್ಡಾಯವಾಗಿ ಕಂದಾಯ ಜಿಲ್ಲೆಗಳಾದ ಬೆಳಗಾವಿ, ಬೆಂಗಳೂರು ದಕ್ಷಿಣ, ತುಮಕೂರು ಹಾಗೂ ಉತ್ತರ ಕನ್ನಡ ಜಿಲ್ಲೆಯ ನೋಡಲ್ ಅಧಿಕಾರಿಗಳ ಸಮನ್ವಯದೊಂದಿಗೆ ವಿದ್ಯಾರ್ಥಿಗಳ ಅರ್ಜಿಗಳನ್ನು NSP ನಲ್ಲಿ Verification ಕಾರ್ಯವನ್ನು ಮಾಡುವುದು.

        www.scholarships.gov.in website services optionsನಲ್ಲಿ ಲಭ್ಯವಿರುವ user manual, Institute operation manual, FAQ’s ಹಾಗೂ ಇತರೆ ಮಾಹಿತಿಗಳನ್ನು download ಮಾಡಿಕೊಳ್ಳಬಹುದಾಗಿದೆ.
            ಸುತ್ತೋಲೆಯ ಮೇಲಿನ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ National Scholarship Portal ಮೂಲಕ ಅರ್ಜಿ ಸಲ್ಲಿಸಲು ಸೂಕ್ತ ಕ್ರಮವಹಿಸಿ, ಎಲ್ಲಾ ಅರ್ಹ ಫಲಾನುಭವಿಗಳು ವಿದ್ಯಾರ್ಥಿವೇತನವನ್ನು ಪಡೆಯಲು ಕ್ರಮವಹಿಸುವಂತೆ ಸೂಚಿಸಲಾಗಿದೆ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ Online ಅರ್ಜಿ 2023-24.

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ Online ಅರ್ಜಿ 2023-24.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20.10.2023

ವಿದ್ಯಾರ್ಥಿ  ವೇತನ ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ಮಾಹಿತಿ / ದಾಖಲೆ

  1.  ವಿದ್ಯಾರ್ಥಿಯ SATS ಸಂಖ್ಯೆ.
  2. ವಿದ್ಯಾರ್ಥಿಯ ಆಧಾರ ಕಾರ್ಡ್‌.
  3. ವಿದ್ಯಾರ್ಥಿಯ ತಂದೆ & ತಾಯಿಯ ಆಧಾರ ಕಾರ್ಡ್‌.
  4. ಜಾತಿ & ಆದಾಯ ಪ್ರಮಾಣ ಪತ್ರ.
  5. ವಿದ್ಯಾರ್ಥಿ ವಿಕಲಚೇತನ ಆಗಿದ್ದಲ್ಲಿ ವಿಕಲಚೇತನ ಪ್ರಮಾಣ ಪತ್ರ.
  6. ತಂದೆ ಅಥವಾ ತಾಯಿ ಕೂಲಿ ಕಾರ್ಮಿಕರಾಗಿದ್ದಲ್ಲಿ ಕಾರ್ಮಿಕ ಇಲಾಖೆಯಿಂದ ಪಡೆದಕೊಂಡ ಪ್ರಮಾಣ ಪತ್ರ.
  7. ಅಲ್ಪಸಂಖ್ಯಾತ ವಿದ್ಯಾರ್ಥಿಗಳಾಗಿದ್ದಲ್ಲಿ NSP ವಿದ್ಯಾರ್ಥಿವೇತನದ ID ಹಿಂದಿನ ವರ್ಷ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ನವೀಕರಣ ಮಾಡಿಕೊಳ್ಳಬಹುದು.
  8. ಮೋಬೈಲ್ ಸಂಖ್ಯೆ (OTP ಸಲುವಾಗಿ)

☛SSP ವಿದ್ಯಾರ್ಥಿ ಖಾತೆಗೆ ಲಾಗಿನ್ ಆಗಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ (ಈಗಾಗಲೇ sspಯಲ್ಲಿ ಖಾತೆ ಸೃಜಿಸಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯ).Click Here to Login Your Account

☛ ಹಿಂದಿನ ವರ್ಷದ ವಿದ್ಯಾರ್ಥಿ ವೇತನ ಅರ್ಜಿ ಸ್ಥಿತಿ ತಿಳಿಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
  1. ನಿಮ್ಮ SATS ಸಂಖ್ಯೆ  ನಮೂದಿಸಿ.
  2.  ಶೈಕ್ಷಣಿಕ ವರ್ಷ ನಮೂದಿಸಿ.
  3. Submit ಮೇಲೆ ಕ್ಲಿಕ್ ಮಾಡಿ.
  4. Status ತಿಳಿಯಿರಿ.

ಸಹಾಯಕ್ಕಾಗಿ ಸಂಪರ್ಕಿಸಿ :
ಸಮಾಜ ಕಲ್ಯಾಣ ಇಲಾಖೆ
9008400010 / 9008400078

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ
080-22261789

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
080-22535931

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
080-22374836 / 8050770005


ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಸಂಖ್ಯೆ : 080-35254757

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಆನ್-ಲೈನ್ ಮೂಲಕ ಅರ್ಜಿ ಆಹ್ವಾನ 2022-23.


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20.01.2023

ಅರ್ಜಿ ಸಲ್ಲಿಸಲು ಅಗತ್ಯವಿರುವ ಮಾಹಿತಿ / ದಾಖಲೆ

✮ ವಿದ್ಯಾರ್ಥಿಯ ಸ್ಯಾಟ್ಸ್-ಐಡಿ (SATS-ID)

✮ ವಿದ್ಯಾರ್ಥಿಯ ಆಧಾರ್ ಸಂಖ್ಯೆ

✮ ಪೋಷಕರ ಆಧಾರ್ ಸಂಖ್ಯೆ

✮ ಜಾತಿ ಪ್ರಮಾಣ ಪತ್ರದ ಆರ್‌.ಡಿ ಸಂಖ್ಯೆ.

✮ ಆದಾಯ ಪ್ರಮಾಣ ಪತ್ರದ ಆರ್‌.ಡಿ ಸಂಖ್ಯೆ.

✮ ಮೋಬೈಲ್ ಸಂಖ್ಯೆ (OTP ಸಲುವಾಗಿ)

✮ ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ ಪಡೆದಿದ್ದಲ್ಲಿ ವಿದ್ಯಾರ್ಥಿ ನಿಲಯ ಪ್ರವೇಶ ಸಂಖ್ಯೆ.(ಸಂಬಂಧಿಸಿದ ಇಲಾಖೆಯಿಂದ ಪಡೆದಿದ್ದು)

✮ ಹಿಂದಿನ ಸಾಲಿನಲ್ಲಿ ವಿದ್ಯಾರ್ಥಿ ವೇತನ ಪಡೆದಿದ್ದಲ್ಲಿ ಹಿಂದಿನ ಸಾಲಿನ ಅರ್ಜಿ ಸಂಖ್ಯೆ.(ಸಂಬಂಧಿಸಿದ ಇಲಾಖೆಯಿಂದ ಪಡೆದಿದ್ದು)

✮ ಆಧಾರ್ ಸಂಖ್ಯೆ ಇಲ್ಲದಿದ್ದಲ್ಲಿ, ಆಧಾರ್ ನೋಂದಣಿ ಮಾಡಿಸಿದ ಇ.ಐ.ಡಿ ಸಂಖ್ಯೆ, ಬ್ಯಾಂಕ್ ಖಾತೆ ಸಂಖ್ಯೆ, ಐ.ಎಫ್.ಎಸ್.ಸಿ ಸಂಖ್ಯೆ, ಬ್ಯಾಂಕಿನ ವಿಳಾಸ.

✮ ಪೋಷಕರ ಆಧಾರ್ ನಂಬರ್ ಗೆ ಲಿಂಕ್ ಮಾಡಿರುವ ಮೊಬೈಲ್ ಸಂಖ್ಯೆ ಹಾಗೂ ಭೌತಿಕ ಅನುಮತಿ ಪತ್ರ.

ಅರ್ಹತೆಗಳು : ಒಂದನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಕುಟುಂಬದ ವಾರ್ಷಿಕ ಆದಾಯದ ಮಿತಿ
1. ಅಲೆಮಾರಿ ಅರೆ ಅಲೆಮಾರಿ ವಿದ್ಯಾರ್ಥಿ ವೇತನ :  ರೂ 2.50 ಲಕ್ಷ/ವಾರ್ಷಿಕ.

2. ರಾಜ್ಯ ಸರ್ಕಾರದ ವಿದ್ಯಾರ್ಥಿ ವೇತನ : 
# ರೂ. 1.00 ಲಕ್ಷ/ವಾರ್ಷಿಕ ಪ್ರವರ್ಗ-1ರ  ವಿದ್ಯಾರ್ಥಿಗಳಿಗೆ ಮಾತ್ರ
# 44,500/-ವಾರ್ಷಿಕ ಪ್ರವರ್ಗ 2ಎ, 3ಎ, 3ಬಿ, ಇತರೆ ಹಿಂದುಳಿದ ವರ್ಗಗಳಿಗೆ.

ಫಲಾನುಭವಿಯ ಜಾತಿ
ರಾಜ್ಯ ಸರ್ಕಾರವು ಅಧಿಸೂಚಿಸಿರುವ ಪ್ರವರ್ಗ -1, 2a 3a ಮತ್ತು 3b. 


ಸಹಾಯಕ್ಕಾಗಿ ಸಂಪರ್ಕಿಸಿ :
ಇಲಾಖಾ ಇ-ಮೇಲ್ ವಿಳಾಸ : bcwd.scholarship@karnataka.gov.in
ಸಹಾಯವಾಣಿ ಸಂಖ್ಯೆ : 8050770004/8050770005

ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಸಂಖ್ಯೆ : 080-35254757

ಹಿಂದುಳಿದ ವರ್ಗಗಳ ವಿದ್ಯಾರ್ಥಿ ವೇತನಗಳ ಸಂಪೂರ್ಣ ಮಾಹಿತಿ...

              ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕರ್ನಾಟಕ ಸರ್ಕಾರ ಹಿಂದುಳಿದ ವರ್ಗಗ(ಪ್ರವರ್ಗ – 1, 2ಎ, 3ಎ, 3ಬಿ) ಳಿಗೆ ನೀಡುವ  (ಮೆಟ್ರಿಕ್-ಪೂರ್ವ ವಿದ್ಯಾರ್ಥಿವೇತನ, ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ, ಶುಲ್ಕ ವಿನಾಯಿತಿ) ಎಲ್ಲಾ ವಿದ್ಯಾರ್ಥಿ ವೇತನಗಳ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ.

ಮೆಟ್ರಿಕ್-ಪೂರ್ವ ವಿದ್ಯಾರ್ಥಿವೇತನ

ಮೆಟ್ರಿಕ್-ಪೂರ್ವ ವಿದ್ಯಾರ್ಥಿವೇತನದ ದರಗಳು
(ಸರ್ಕಾರದ ಆದೇಶ ಸಂ.ಬಿಸಿಡಬ್ಲ್ಯೂ 620 ಬಿಎಂಎಸ್ 2014, ದಿನಾಂಕ 7.1.2015ರಂತೆ)
ತರಗತಿಬಾಲಕ/ಬಾಲಕಿAdhoc Grantಒಟ್ಟು
1 ರಿಂದ 5250/-500/-750/-
6 ರಿಂದ 8400/-500/-900/-
9 ರಿಂದ 10500/-500/-1000/-
ವಿಶೇಷ ಸೂಚನೆ: ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆ ಗೆ ಆಧಾರ್ ಸಂಖ್ಯೆಯನ್ನು ಜೋಡಣೆ (link) ಮಾಡಿಸತಕ್ಕದ್ದು.
ಅರ್ಹತೆಗಳು :
1.ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು.
2.ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ.44,500/-ರ ಒಳಗೆ ಇರಬೇಕು.
3.ಸರ್ಕಾರದ / ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ /ಅನುದಾನರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಅರ್ಹರು.
4.ಸರ್ಕಾರದ / ಸರ್ಕಾರದ ಅನುದಾನಿತ ವಿದ್ಯಾರ್ಥಿನಿಲಯಗಳಲ್ಲಿ/ವಸತಿಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ಅರ್ಹರಿರುವುದಿಲ್ಲ.
5.ಹಿಂದಿನ ತರಗತಿಯಲ್ಲಿ ಶೇ.75 ಕ್ಕಿಂತ ಹೆಚ್ಚು ಹಾಜರಾತಿ ಹೊಂದಿದವರು ಮಾತ್ರ ಅರ್ಹರು.
6.ಹಿಂದಿನ ತರಗತಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು, ವಿದ್ಯಾರ್ಥಿವೇತನ ಪಡೆಯಲು ಅರ್ಹರಿರುವುದಿಲ್ಲ.
ಆಯ್ಕೆ ವಿಧಾನ :
1.ಮೊದಲನೇ ಆದ್ಯತೆ: ಎಲ್ಲಾ ಅರ್ಹ ನವೀಕರಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮಂಜೂರು ಮಾಡುವುದು.
2.ಎರಡನೇ ಆದ್ಯತೆ: ಹಿಂದುಳಿದ ವರ್ಗಗಳ ಪ್ರವರ್ಗ-1ರ ಎಲ್ಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಮಂಜೂರು ಮಾಡುವುದು.
3.ಮೂರನೇ ಆದ್ಯತೆ: ಉಳಿದ ಮೊತ್ತವನ್ನು ಅರ್ಹವಿರುವ ಪ್ರವರ್ಗ-2ಎ, 3ಎ, 3ಬಿ ಮತ್ತು ಇತರೆ ಹಿಂದುಳಿದ ವರ್ಗಗಳ(ಕೇಂದ್ರ ಸರ್ಕಾರದ ಹಿಂದುಳಿದ ವರ್ಗದ ಪಟ್ಟಿಯಲ್ಲಿ ಇರುವ ಜಾತಿಗಳು ಮಾತ್ರ) ವಿದ್ಯಾರ್ಥಿಗಳಿಗೆ ಆದಾಯ ಮತ್ತು ಅರ್ಹತೆಯ ಆಧಾರದ ಮೇಲೆ ಈ ಕೆಳಕಂಡ ಪ್ರಮಾಣದಂತೆ ವಿದ್ಯಾರ್ಥಿವೇತನ ಮಂಜೂರು ಮಾಡುವುದು.
1ಪ್ರವರ್ಗ - 2ಎಶೇಕಡ 61
2ಪ್ರವರ್ಗ 3ಎಶೇಕಡ 17
3ಪ್ರವರ್ಗ 3ಬಿಶೇಕಡ 21
4ಇತರೆ ಹಿಂದುಳಿದ ವರ್ಗಶೇಕಡ 01
ಒಟ್ಟುಶೇಕಡ 100
ಮಂಜೂರಾತಿ ವಿಧಾನ :
1.ಮೆಟ್ರಿಕ್-ಪೂರ್ವ ವಿದ್ಯಾರ್ಥಿವೇತನ ಸೌಲಭ್ಯವನ್ನು ಪಡೆಯಲು ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಿ ಸಾರ್ವಜನಿಕ ಪ್ರಕಟಣೆ ಹೊರಡಿಸುವುದು.
2.ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿಗಳನ್ನು ಆನ್ ಲೈನ್ ಮೂಲಕ ಪರಿಶೀಲಿಸಿ, ಅರ್ಹ ಅರ್ಜಿಗಳನ್ನು ದೃಢೀಕರಿಸುವುದು.
3.ಇಲಾಖೆಯ ಮೆಟ್ರಿಕ್-ಪೂರ್ವ ವಿದ್ಯಾರ್ಥಿವೇತನ SSP ತಂತ್ರಾಂಶದಲ್ಲಿ ವಿದ್ಯಾರ್ಥಿಗಳ ಮಾಹಿತಿಯನ್ನು ಭರ್ತಿ ಮಾಡುವುದು.
4.ಭರ್ತಿ ಮಾಡಿರುವ ಮಾಹಿತಿಯನ್ನು ಪರಿಶೀಲಿಸಿ, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ದೃಢೀಕರಿಸುವುದು.
5.ಆಯ್ಕೆಯಾದ ಅರ್ಹ ಅರ್ಜಿಗಳಿಗೆ ಆಯಾ ವರ್ಷದ ಆಯವ್ಯಯಕ್ಕೆ ಅನುಗುಣವಾಗಿ, ಮೀಸಲಾತಿ ನೀತಿಯನ್ವಯ ವಿದ್ಯಾರ್ಥಿವೇತನವನ್ನು ಮಂಜೂರು ಮಾಡಿ ಆಧಾರ್ ಪಾವತಿ ವ್ಯವಸ್ಥೆ (Aadhar Bridge Payment System) ಮೂಲಕ ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡುವುದು.



ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ

ಮೆಟ್ರಿಕ್-ನಂತರದ ವಿದ್ಯಾರ್ಥಿವೇತನದ ದರಗಳು
(ಸರ್ಕಾರದ ಆದೇಶ ಸಂ.ಬಿಸಿಡಬ್ಲ್ಯೂ 518 ಬಿಎಂಎಸ್ 2013, ದಿನಾಂಕ 3.9.2013ರಂತೆ)
ಕ್ರ. ಸಂ.ಗುಂಪುಮಂಜೂರು ಮಾಡಲಾಗುವ ವಿದ್ಯಾರ್ಥಿವೇತನದ
ದರ (ವಾರ್ಷಿಕ)
1ಗುಂಪು-ಎ3500/-
2ಗುಂಪು-ಬಿ3350/-
3ಗುಂಪು-ಸಿ2100/-
4ಗುಂಪು-ಡಿ1600/-
ವಿಶೇಷ ಸೂಚನೆ: ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆ ಗೆ ಆಧಾರ್ ಸಂಖ್ಯೆಯನ್ನು ಜೋಡಣೆ (link) ಮಾಡಿಸತಕ್ಕದ್ದು.
ಅರ್ಹತೆಗಳು :
1.ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು ಹಾಗೂ ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಧಿಸೂಚಿಸಿರುವ ಹಿಂದುಳಿದ
ವರ್ಗಗಳ ಪಟ್ಟಿಯಲ್ಲಿ ಸೇರಿರಬೇಕು.
2. ಕರ್ನಾಟಕದ ಶಾಸನಬದ್ಧ ವಿಶ್ವ ವಿದ್ಯಾಲಯಗಳ ಅಧೀನಕ್ಕೆ ಒಳಪಡುವ ಸರ್ಕಾರಿ / ಸ್ಥಳೀಯ ಸಂಸ್ಥೆ/ ಅನುದಾನಿತ ಸಂಸ್ಥೆ ಮಾನ್ಯತೆ ಪಡೆದ ಅನುದಾನ
ರಹಿತ ಖಾಸಗಿ ಸಂಸ್ಥೆಗಳಲ್ಲಿ ಮೆಟ್ರಿಕ್-ನಂತರದ ಶಿಕ್ಷಣವನ್ನು ಪಡೆಯುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ
ಪಡೆಯಲು ಅರ್ಹರಿರುತ್ತಾರೆ.
3. ಸರ್ಕಾರದ ವಿದ್ಯಾರ್ಥಿನಿಲಯಗಳಲ್ಲಿ / ವಸತಿ ಕಾಲೇಜುಗಳಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನವನ್ನು
ಪಡೆಯಲು ಅರ್ಹರಿರುವುದಿಲ್ಲ.
4.ವಾರ್ಷಿಕ ಆದಾಯಮಿತಿ ಪ್ರವರ್ಗ-1ರ ವಿದ್ಯಾರ್ಥಿಗಳಿಗೆ ರೂ.2.50 ಲಕ್ಷ, ಪ್ರವರ್ಗ-2ಎ, 3ಎ, ಮತ್ತು 3ಬಿ ವಿದ್ಯಾರ್ಥಿಗಳಿಗೆ- ರೂ.1.00 ಲಕ್ಷ ನಿಗದಿಪಡಿಸಿದೆ.
5.ಹೊಸ ಮತ್ತು ನವೀಕರಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಹಿಂದಿನ ತರಗತಿಗಳಲ್ಲಿ ನಿಗದಿಪಡಿಸಿರುವ ಕನಿಷ್ಠ ಅಂಕ
ಕ್ರ. ಸಂ.ಪ್ರವರ್ಗಹೊಸನವೀಕರಣ
1ಪ್ರವರ್ಗ-140%50%
2ಪ್ರವರ್ಗ-2ಎ, 3ಎ ಮತ್ತು 3ಬಿ50%60%
6. ಸಮಾನ ಕೋರ್ಸುಗಳಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ವ್ಯಾಸಂಗ ಮಾಡುತ್ತಿದ್ದಲ್ಲಿ, ವಿದ್ಯಾರ್ಥಿವೇತನಕ್ಕೆ ಅರ್ಹರಿರುವುದಿಲ್ಲ.
7. ಒಂದೇ ಕುಟುಂಬದ ಇಬ್ಬರು ಗಂಡು ಮಕ್ಕಳು ಮಾತ್ರ ಈ ಯೋಜನೆಗೆ ಅರ್ಹರು. ಈ ನಿರ್ಬಂಧ ಹೆಣ್ಣು ಮಕ್ಕಳಿಗೆ ಅನ್ವಯಿಸುವುದಿಲ್ಲ.
8. ವಿವಿಧ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿಗಳಿಗೆ ಕೋರ್ಸಿನ ಗುಂಪುವಾರು ಪ್ರತಿ ತಿಂಗಳಿಗೆ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನವನ್ನು10 ತಿಂಗಳ ಅವಧಿಗೆ ಅರ್ಹತೆ ಮತ್ತು ಆದಾಯಮಿತಿಯನ್ನು ಪರಿಗಣಿಸಿ, ಮಂಜೂರು ಮಾಡಲಾಗುವುದು.
ಮಂಜೂರಾತಿ ವಿಧಾನ :
1.ಆನ್‍ಲೈನ್ ಮೂಲಕ SSP ತಂತ್ರಾಂಶದಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗುವುದು.
2.ವಿದ್ಯಾರ್ಥಿಗಳು ನಿಗದಿತ ದಾಖಲೆಗಳು ಹಾಗೂ ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಐ.ಎಫ್.ಸಿ.ಕೋಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಿಂದಿನ ತರಗತಿಯ
ಅಂಕಪಟ್ಟಿ ಇತ್ಯಾದಿ ಮಾಹಿತಿಯೊಂದಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹಾಗೂ ಹಾರ್ಡ್ ಕಾಪಿಯನ್ನು ಸಂಬಂಧಪಟ್ಟ ಕಾಲೇಜುಗಳಿಗೆ ಸಲ್ಲಿಸುವುದು.
3.ಕಾಲೇಜು ಪ್ರಾಂಶುಪಾಲರು ಮತ್ತು ಪರಿಶೀಲನಾ ಅಧಿಕಾರಿಗಳು ಆಯಾ ಹಂತದಲ್ಲಿ ಅರ್ಜಿ ಹಾಗೂ ದಾಖಲೆಗಳನ್ನು ಪರಿಶೀಲಿಸಿ, ಆನ್‍ಲೈನ್‍ನಲ್ಲಿ ದೃಢೀಕರಿಸಿ ಸದರಿ
ದಾಖಲೆಗಳನ್ನು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ಸಲ್ಲಿಸಬೇಕು.
4.ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪರಿಶೀಲಿಸಿ, ಆನ್‍ಲೈನ್‍ನಲ್ಲಿ ದೃಢೀಕರಿಸುವುದು.
5.ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಸದರಿ ಮಾಹಿತಿಯ ಪರಿಶೀಲನೆಯನ್ನು ಮಾಡುವುದು.
6.ಆಯಾ ವರ್ಷದಲ್ಲಿ ಲಭ್ಯವಾಗುವ ಜಿಲ್ಲಾವಾರು ಅನುದಾನಕ್ಕೆ ತಕ್ಕಂತೆ ಅರ್ಹತೆ ಮತ್ತು ಅಂಕಗಳ ಆಧಾರದ ಮೇಲೆ ಅರ್ಹ ವಿದ್ಯಾರ್ಥಿಗಳಿಗೆ ತಾಲ್ಲೂಕು ಹಂತದಲ್ಲಿ
ವಿದ್ಯಾರ್ಥಿವೇತನವನ್ನು ಮಂಜೂರುಮಾಡುವುದು.
7.ಆಯ್ಕೆಯಾದ ಅರ್ಹ ಅರ್ಜಿಗಳಿಗೆ ಆಯಾ ವರ್ಷದ ಆಯವ್ಯಯಕ್ಕೆ ಅನುಗುಣವಾಗಿ, ಮೀಸಲಾತಿ ನೀತಿಯನ್ವಯ ವಿದ್ಯಾರ್ಥಿವೇತನವನ್ನು ಮಂಜೂರು ಮಾಡಿ
ಖಜಾನೆ-2 ತಂತ್ರಾಂಶದ ಮೂಲಕ ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾಮಾಡುವುದು.


ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ

ವಿಶೇಷ ಸೂಚನೆ: ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆ ಗೆ ಆಧಾರ್ ಸಂಖ್ಯೆಯನ್ನು ಜೋಡಣೆ (link) ಮಾಡಿಸತಕ್ಕದ್ದು.
ಅರ್ಹತೆಗಳು :
1.ಅ) ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
ಆ) ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಧಿಸೂಚಿಸಿರುವ, ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿರಬೇಕು.
ಇ) ಕರ್ನಾಟಕದ ಶಾಸನಬದ್ದ ವಿಶ್ವವಿದ್ಯಾಲಯಗಳ ಅಧೀನಕ್ಕೆ ಒಳಪಡುವ, ಸರ್ಕಾರಿ / ಸ್ಥಳೀಯ ಸಂಸ್ಥೆ/ ಅನುದಾನಿತ
ಸಂಸ್ಥೆಗಳು / ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಸಂಸ್ಥೆಗಳಲ್ಲಿ - ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ
ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾಗಿರಬೇಕು.
2.ಯಾವುದೇ ಇಲಾಖೆಯ ಸರ್ಕಾರಿ / ಸರ್ಕಾರಿ ಅನುದಾನಿತ ವಿದ್ಯಾರ್ಥಿನಿಲಯ / ವಸತಿ ಕಾಲೇಜುಗಳಲ್ಲಿ, ಪ್ರವೇಶ ದೊರೆಯದ
ಹಾಗೂ ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ, ವಿದ್ಯಾಸಿರಿ- ಊಟ
ಮತ್ತು ವಸತಿ ಕಾರ್ಯಕ್ರಮದಲ್ಲಿ ಮಂಜೂರಾತಿ ನೀಡಲಾಗುವುದು.
3.ಈ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ, ಪ್ರತಿ ತಿಂಗಳಿಗೆ ರೂ.1500/-ರಂತೆ, ಶೈಕ್ಷಣಿಕ ಅವಧಿಯಲ್ಲಿ ಪ್ರತಿ ವರ್ಷ 10 ತಿಂಗಳಿಗೆ ಒಟ್ಟು
ರೂ.15,000/- ಸಹಾಯಧನವನ್ನು, ಇತರೆ ನಿಬಂಧನೆಗಳಿಗೊಳಪಟ್ಟು, ವಿದ್ಯಾರ್ಥಿಗಳು ಯಾವುದಾದರೂ ಕೋರ್ ಬ್ಯಾಂಕಿಂಗ್ ವ್ಯವಸ್ಥೆ
ಇರುವ ಬ್ಯಾಂಕಿನಲ್ಲಿ ತೆರೆದಿರುವ ಬ್ಯಾಂಕ್ ಖಾತೆಗೆ, ಆನ್‍ಲೈನ್ ಮೂಲಕ ಜಮಾ ಮಾಡಲಾಗುವುದು.
4.ವಿದ್ಯಾರ್ಥಿಗಳು
(i) ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ,
(ii) ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು
(iii) ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ-ಇವುಗಳಲ್ಲಿ ಯಾವುದಾದರೂ ಒಂದು ಸೌಲಭ್ಯಕ್ಕೆ ಮಾತ್ರ ಅರ್ಹರಿರುತ್ತಾರೆ.
5.ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹರಾದವರು, ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

6.ಅ) ಈ ಮೇಲಿನ ಸೌಲಭ್ಯ ಪಡೆಯಲು ವಿದ್ಯಾರ್ಥಿಯ, ತಂದೆ-ತಾಯಿ/ಪೋಷಕರ ಕುಟುಂಬದ, ಒಟ್ಟು ವಾರ್ಷಿಕ
ವರಮಾನ (Gross Annual Income) ಈ ಕೆಳಗೆ ನಿಗದಿಪಡಿಸಿದ ಮಿತಿಯೊಳಗೆ ಇರಬೇಕು.
(i) ಪ್ರವರ್ಗ-1 ರ ವಿದ್ಯಾರ್ಥಿಗಳಿಗೆ ರೂ.2.50 ಲಕ್ಷ
(ii) ಪ್ರವರ್ಗ-2ಎ, 3ಎ ಮತ್ತು 3ಬಿ ವಿದ್ಯಾರ್ಥಿಗಳಿಗೆ ರೂ.1.00 ಲಕ್ಷ
ಆ) ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿರಬೇಕು ಹಾಗೂ ವ್ಯಾಸಂಗ ಮಾಡುವ ಕಾಲೇಜಿನಿಂದ ಕನಿಷ್ಠ 5 ಕಿ.ಮೀ. ದೂರದವರಾಗಿರಬೇಕು.
ಆದರೆ, ವಿದ್ಯಾರ್ಥಿಯ ಸ್ವಂತ ಸ್ಥಳ, ನಗರ/ಪಟ್ಟಣ ಆಗಿದ್ದು, ಅವರು ಬೇರೆ ನಗರ/ಪಟ್ಟಣದಲ್ಲಿ ಇರುವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ,
ಅಂತಹವರು ಈ ಸೌಲಭ್ಯಕ್ಕೆ ಅರ್ಹರಿರುತ್ತಾರೆ.

ಇ) ಹೊಸ ಮತ್ತು ನವೀಕರಣ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆಯಲು ಈ ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಈ ಕೆಳಗಿನಂತೆ ಕನಿಷ್ಠ ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು.

ಕ್ರ. ಸಂ.ಪ್ರವರ್ಗಹೊಸನವೀಕರಣ
1ಪ್ರವರ್ಗ-140%50%
2ಪ್ರವರ್ಗ-2ಎ, 3ಎ ಮತ್ತು 3ಬಿ50%60%
(ಒಂದು ವೇಳೆ, ವೈದ್ಯಕೀಯ ಕಾರಣಗಳಿಂದಾಗಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದಿದ್ದಲ್ಲಿ, ಅಂತಹವರು, ವೈದ್ಯಕೀಯ
ಮಂಡಳಿಯಿಂದ ಪ್ರಮಾಣ ಪತ್ರ ಪಡೆದು ಸಲ್ಲಿಸಬೇಕು.)
7. ಅ) ಸಮಾನ ಕೋರ್ಸುಗಳಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ವ್ಯಾಸಂಗ ಮಾಡುತ್ತಿದ್ದಲ್ಲಿ ಅಂತಹವರು ಅರ್ಹರಿರುವುದಿಲ್ಲ.(ಉದಾ: ಬಿ.ಎ ನಂತರ ಬಿ.ಕಾಂ,
ಎಂ.ಎ (ಕನ್ನಡ) ನಂತರ ಎಂ.ಎ (ಇಂಗ್ಲೀಷ್), ಬಿ.ಇಡ್ ನಂತರ ಎಲ್.ಎಲ್.ಬಿ, ಇತ್ಯಾದಿಗಳಿಗೆ ಪ್ರವೇಶ ಪಡೆದಿದ್ದಲ್ಲಿ)
ಆ) ಸ್ನಾತಕೋತ್ತರ ವೈದ್ಯಕೀಯ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು, ಕೋರ್ಸಿನ ಅವಧಿಯಲ್ಲಿ ಮೆಡಿಕಲ್ ಪ್ರಾಕ್ಟೀಸ್ ಮಾಡುತ್ತಿದ್ದಲ್ಲಿ,
ಈ ಸೌಲಭ್ಯಕ್ಕೆ ಅರ್ಹರಿರುವುದಿಲ್ಲ.
ಇ) ಕಲೆ, ವಿಜ್ಞಾನ, ಹಾಗೂ ವಾಣಿಜ್ಯ ಕೋರ್ಸುಗಳ, ಪದವಿ ಅಥವಾ ಸ್ನಾತಕೋತ್ತರ ಪದವಿಗಳಲ್ಲಿ ಉತ್ತೀರ್ಣ / ಅನುತ್ತೀರ್ಣರಾದವರು ಅಂಗೀಕೃತ
ವೃತ್ತಿಪರ ಅಥವಾ ತಾಂತ್ರಿಕ ಸರ್ಟಿಫಿಕೇಟ್, ಡಿಪ್ಲೋಮ, ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡಿದ್ದಲ್ಲಿ, ಹಾಗೂ ಇತರೆ ರೀತಿ ಅರ್ಹರಿದ್ದಲ್ಲಿ ಅವರು
ಈ ಯೋಜನೆಯ ಅಡಿ ಸೌಲಭ್ಯಗಳಿಗೆ ಅರ್ಹರಿರುತ್ತಾರೆ. ಒಂದಕ್ಕಿಂತ ಹೆಚ್ಚು ಬಾರಿ ಕೋರ್ಸುಗಳ ಬದಲಾವಣೆ ಮಾಡಿಕೊಂಡವರು ಅರ್ಹರಿರುವುದಿಲ್ಲ.
ಈ) ಒಂದೇ ಕುಟುಂಬದ ಇಬ್ಬರು ಗಂಡು ಮಕ್ಕಳು ಮಾತ್ರ ಈ ಯೋಜನೆಗೆ ಅರ್ಹರು. ಆದರೆ, ಈ ನಿರ್ಬಂಧ ಹೆಣ್ಣು ಮಕ್ಕಳಿಗೆ ಅನ್ವಯಿಸುವುದಿಲ್ಲ.
8. ಪ್ರತಿ ಮಾಹೆ ವಿದ್ಯಾರ್ಥಿಯ ತರಗತಿ ಹಾಜರಾತಿ ಕನಿಷ್ಟ ಶೇ.75 ರಷ್ಟಿರಬೇಕು.
ಅನುದಾನ ಹಂಚಿಕೆ ವಿಧಾನ :
(ಅ) ಆಯಾ ಶೈಕ್ಷಣಿಕ ವರ್ಷದಲ್ಲಿ ಲಭ್ಯವಾಗುವ ಅನುದಾನವನ್ನು ಪ್ರವರ್ಗವಾರು ಈ ಕೆಳಗಿನ ಮೀಸಲಾತಿಯಂತೆ ಮರು ಹಂಚಿಕೆ ಮಾಡಲಾಗುವುದು.
ಪ್ರವರ್ಗವಾರು ಹಂಚಿಕೆ ಮಾಡಬೇಕಾಗಿರುವ ಮೊತ್ತದ ಶೇಕಡಾವಾರು
1ಪ್ರವರ್ಗ - 115%
2ಪ್ರವರ್ಗ 2ಎ53%
3ಪ್ರವರ್ಗ - 3ಎ14%
4ಪ್ರವರ್ಗ - 3ಬಿ18%
ಒಟ್ಟು100%
(ಆ) ಆರ್ಥಿಕ ವರ್ಷಕ್ಕೆ ಲಭ್ಯವಾಗುವ ಅನುದಾನದ ಮಿತಿಗೆ ಒಳಪಟ್ಟು, ಅರ್ಹತೆ ಮತ್ತು ಆದಾಯಕ್ಕೆ (Merit cum Means)
ಅನುಗುಣವಾಗಿ ಮಂಜೂರು ಮಾಡಬೇಕು.
ಮಂಜೂರಾತಿ ವಿಧಾನ :
1.ಆನ್‍ಲೈನ್ ಮೂಲಕ SSP ತಂತ್ರಾಂಶದಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗುವುದು.
2.ವಿದ್ಯಾರ್ಥಿಗಳು ನಿಗದಿತ ದಾಖಲೆಗಳು ಹಾಗೂ ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಐ.ಎಫ್.ಸಿ.ಕೋಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ,
ಹಿಂದಿನ ತರಗತಿಯ ಅಂಕಪಟ್ಟಿಯ ಮಾಹಿತಿಯೊಂದಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹಾಗೂ ಹಾರ್ಡ್ ಕಾಪಿಯನ್ನು ಸಂಬಂಧಪಟ್ಟ
ಕಾಲೇಜುಗಳಿಗೆ ಸಲ್ಲಿಸುವುದು.
3.ಕಾಲೇಜು ಪ್ರಾಂಶುಪಾಲರು ಮತ್ತು ಪರಿಶೀಲನಾ ಅಧಿಕಾರಿಗಳು ಆಯಾ ಹಂತದಲ್ಲಿ ಅರ್ಜಿ ಹಾಗೂ ದಾಖಲೆಗಳನ್ನು ಪರಿಶೀಲಿಸಿ, ಆನ್‍ಲೈನ್‍ನಲ್ಲಿ
ದೃಢೀಕರಿಸಿ ಸದರಿ ದಾಖಲೆಗಳನ್ನು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ಸಲ್ಲಿಸಬೇಕು.
4.ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪರಿಶೀಲಿಸಿ, ಆನ್‍ಲೈನ್‍ನಲ್ಲಿ ದೃಢೀಕರಿಸುವುದು.
5.ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಸದರಿ ಮಾಹಿತಿಯ ಪರಿಶೀಲನೆಯನ್ನು ಮಾಡುವುದು.
6.ಈ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಯ ಹಾಜರಾತಿ ಪ್ರತಿ ಮಾಹೆ ಕನಿಷ್ಠ ಶೇ.75 ರಷ್ಟು ಇರುವುದನ್ನು ಕಾಲೇಜು ಪ್ರಾಂಶುಪಾಲರಿಂದ
ಪಡೆದು, ಆನ್‍ಲೈನ್‍ನಲ್ಲಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಅಪ್‍ಲೋಡ್ ಮಾಡುವುದು.
7.ಆಯಾ ವರ್ಷದ ಆಯವ್ಯಯಕ್ಕನುಗುಣವಾಗಿ ಅರ್ಹತೆ ಮತ್ತು ಅಂಕಗಳ ಆಧಾರದ ಮೇಲೆ ಅರ್ಹ ವಿದ್ಯಾರ್ಥಿಗಳಿಗೆ ತಾಲ್ಲೂಕು ಹಂತದಲ್ಲಿ ವಿದ್ಯಾಸಿರಿ
ಊಟ ಮತ್ತು ವಸತಿ ಸೌಲಭ್ಯವನ್ನು ಮಂಜೂರು ಮಾಡುವುದು.
8.ಮಂಜೂರಾದ ಮೊತ್ತವನ್ನು ಸಂಬಂಧಿತ ವಿದ್ಯಾರ್ಥಿಗಳಿಗೆ ಬ್ಯಾಂಕ್ ಖಾತೆಗೆ ನೇರವಾಗಿ ಖಜಾನೆ-2 ತಂತ್ರಾಂಶದ ಮೂಲಕ ಪಾವತಿಸುವುದು.



ಶುಲ್ಕ ವಿನಾಯಿತಿ
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ನೆರವಾಗುವ ದೃಷ್ಟಿಯಿಂದ ಸರ್ಕಾರವು, ಸರ್ಕಾರದ ಕಾಲೇಜುಗಳಿಗೆ ನಿಗದಿಪಡಿಸುವ
ಶುಲ್ಕದ ದರಗಳನ್ನು ಸಂಬಂಧಪಟ್ಟ ವಿದ್ಯಾರ್ಥಿಯ ಕಾಲೇಜಿನ ಪ್ರಾಂಶುಪಾಲರ ಖಾತೆಗೆ ಜಮಾಗೊಳಿಸಲಾಗುವುದು.
ವಿಶೇಷ ಸೂಚನೆ: ವಿದ್ಯಾರ್ಥಿಗಳು ಖಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆ ಗೆ ಆಧಾರ್ ಸಂಖ್ಯೆಯನ್ನು ಜೋಡಣೆ (link) ಮಾಡಿಸತಕ್ಕದ್ದು.
ಅರ್ಹತೆಗಳು:
1.ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು ಹಾಗೂ ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಧಿಸೂಚಿಸಿರುವ ಹಿಂದುಳಿದ
ವರ್ಗಗಳ ಪಟ್ಟಿಯಲ್ಲಿ ಸೇರಿರಬೇಕು.
2.ಕರ್ನಾಟಕದ ಶಾಸನಬದ್ಧ ವಿಶ್ವ ವಿದ್ಯಾಲಯಗಳ ಅಧೀನಕ್ಕೆ ಒಳಪಡುವ ಸರ್ಕಾರಿ / ಸ್ಥಳೀಯ ಸಂಸ್ಥೆ/ ಅನುದಾನಿತ ಸಂಸ್ಥೆ / ಮಾನ್ಯತೆ ಪಡೆದ ಅನುದಾನರಹಿತ
ಖಾಸಗಿ ಸಂಸ್ಥೆಗಳಲ್ಲಿ – ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾಗಿರಬೇಕು.
3.ಈ ಸೌಲಭ್ಯವನ್ನು ಪಡೆಯಲು ವಿದ್ಯಾರ್ಥಿಯ ತಂದೆ-ತಾಯಿ/ಪೋಷಕರ ಕುಟುಂಬದ ವಾರ್ಷಿಕ ವರಮಾನ ಈ ಕೆಳಗೆ ನಿಗದಿಪಡಿಸಿದ ಗರಿಷ್ಠ ಮಿತಿಯೊಳಗೆ ಇರಬೇಕು.
1.ಪ್ರವರ್ಗ-1ರ ವಿದ್ಯಾರ್ಥಿಗಳಿಗೆ ರೂ.2.50 ಲಕ್ಷ ಹಾಗೂ
2.ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಧಿಸೂಚಿಸಿರುವ ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿದ ಮತ್ತು ಎಲ್ಲಾ ಧರ್ಮಗಳ,
ಜಾತಿಗಳ ಹಾಗೂ ಸಮುದಾಯಗಳ ವಿದ್ಯಾರ್ಥಿಗಳಿಗೆ ರೂ.1.00 ಲಕ್ಷ
3.ಸಮಾಜ ಕಲ್ಯಾಣ/ ಪರಿಶಿಷ್ಟ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವ್ಯಾಪ್ತಿಗೆ ಬರುವ ವಿದ್ಯಾರ್ಥಿಗಳು ಹಿಂದುಳಿದ
ವರ್ಗಗಳ ಕಲ್ಯಾಣ ಇಲಾಖೆಯಿಂದ ಈ ಸೌಲಭ್ಯಗಳನ್ನು ಪಡೆಯಲು ಅರ್ಹರಿರುವುದಿಲ್ಲ.
4.ಹೊಸ ಮತ್ತು ನವೀಕರಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಈ ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಈ ಕೆಳಗಿನಂತೆ ಕನಿಷ್ಠ
ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು.
ಕ್ರ. ಸಂ.ಪ್ರವರ್ಗಹೊಸನವೀಕರಣ
1ಪ್ರವರ್ಗ-1 ಮತ್ತು ಅಂಧ ವಿದ್ಯಾರ್ಥಿಗಳು40%50%
2ಪ್ರವರ್ಗ-2ಎ, 3ಎ ಮತ್ತು 3ಬಿ50%60%
5.ಅ) ಸಮಾನ ಕೋರ್ಸುಗಳಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ವ್ಯಾಸಂಗ ಮಾಡುತ್ತಿದ್ದಲ್ಲಿ, ಅಂತಹವರು ಅರ್ಹರಿರುವುದಿಲ್ಲ.
ಆ) ಸ್ನಾತಕೋತ್ತರ, ವೈದ್ಯಕೀಯ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಕೋರ್ಸಿನ ಅವಧಿಯಲ್ಲಿ
ಮೆಡಿಕಲ್ ಪ್ರಾಕ್ಟೀಸ್ ಮಾಡುತ್ತಿದ್ದಲ್ಲಿ, ಈ ಸೌಲಭ್ಯಕ್ಕೆ ಅರ್ಹರಿರುವುದಿಲ್ಲ.
ಇ) ಕಲೆ, ವಿಜ್ಞಾನ ಹಾಗೂ ವಾಣಿಜ್ಯ ಕೋರ್ಸುಗಳ, ಪದವಿ ಅಥವಾ ಸ್ನಾತಕೋತ್ತರ ಪದವಿಗಳಲ್ಲಿ ಉತ್ತೀರ್ಣ /
ಅನುತ್ತೀರ್ಣರಾದವರು ಅಂಗೀಕೃತ ವೃತ್ತಿಪರ ಅಥವಾ ತಾಂತ್ರಿಕ ಸರ್ಟಿಫಿಕೇಟ್, ಡಿಪ್ಲೋಮಾ, ಪದವಿ ಕೋರ್ಸುಗಳಲ್ಲಿ
ವ್ಯಾಸಂಗ ಮಾಡಿದ್ದಲ್ಲಿ ಹಾಗೂ ಇತರೆ ರೀತಿ ಅರ್ಹರಿದ್ದಲ್ಲಿ ಅವರು ಈ ಯೋಜನೆಯ ಅಡಿ ಸೌಲಭ್ಯಗಳಿಗೆ ಅರ್ಹರಿರುತ್ತಾರೆ.
ಒಂದಕ್ಕಿಂತ ಹೆಚ್ಚು ಬಾರಿ ಕೋರ್ಸುಗಳ ಬದಲಾವಣೆ ಮಾಡಿಕೊಂಡವರು ಅರ್ಹರಿರುವುದಿಲ್ಲ.
ಈ) ಒಂದೇ ಕುಟುಂಬದ ಇಬ್ಬರು ಗಂಡು ಮಕ್ಕಳು ಮಾತ್ರ ಈ ಯೋಜನೆಗೆ ಅರ್ಹರು. ಆದರೆ, ಈ ನಿರ್ಬಂಧ ಹೆಣ್ಣು
ಮಕ್ಕಳಿಗೆ ಅನ್ವಯಿಸುವುದಿಲ್ಲ.
6.ಅ) ಶುಲ್ಕ ವಿನಾಯಿತಿಗೆ ಅರ್ಹ ಇರುವ ಶುಲ್ಕಗಳು:ರಾಜ್ಯಮಟ್ಟದ ಸಮಿತಿಯು ನಿಗದಿಪಡಿಸುವ ದರಗಳಂತೆ ಈ ಕೆಳಗಿನ ಐದು ಶುಲ್ಕಗಳಿಗೆ
ಮಾತ್ರ ವಿನಾಯಿತಿ ನೀಡಲಾಗುವುದು.
ಅ) ಬೋಧನಾ ಶುಲ್ಕ
ಆ) ಪ್ರಯೋಗಾಲಯ ಶುಲ್ಕ (ಯಾವ ಕೋರ್ಸುಗಳಲ್ಲಿ ಪ್ರಯೋಗಾಲಯ ಕಡ್ಡಾಯವಿದೆಯೋ ಆ ಕೋರ್ಸುಗಳಿಗೆ ಮಾತ್ರ)
ಇ) ಪರೀಕ್ಷಾ ಶುಲ್ಕ
ಈ) ಕ್ರೀಡಾ ಶುಲ್ಕ
ಉ) ಗ್ರಂಥಾಲಯ ಶುಲ್ಕ
ಆ) Readers Charges ದರಗಳು:
ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಮೇಲಿನ ದರಗಳಂತೆ ಶುಲ್ಕ ವಿನಾಯಿತಿ ನೀಡುವುದರ
ಜೊತೆಗೆ ಈ ಕೆಳಗಿನಂತೆ ಖeಚಿಜeಡಿs ಅhಚಿಡಿges ಅನ್ನು ಸಹ ಪಾವತಿಸಲಾಗುವುದು.
ಕೋರ್ಸಿನ ಗುಂಪುReaders Charges
(10 ತಿಂಗಳಿಗೆ) (ರೂ.ಗಳಲ್ಲಿ)
ಗುಂಪು-ಎ, ಬಿ1750/-
ಗುಂಪು-ಸಿ1300/-
ಗುಂಪು-ಡಿ900/-


: ಮಾಹಿತಿ ಮೂಲ : 

 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ,       

ಕರ್ನಾಟಕ ಸರ್ಕಾರ