ನನ್ನ ಹಣತೆ - ಜಿ. ಎಸ್. ಶಿವರುದ್ರಪ್ಪ
ಹೆಸರಾಯಿತು ಕರ್ನಾಟಕ - ಚನ್ನವೀರ ಕಣವಿ
ಉಸಿರಾಗಲಿ ಕನ್ನಡ
ಹಸಿಗೋಡೆಯ ಹರಳಿನಂತೆ
ಹುಸಿಹೋಗದ ಕನ್ನಡ
ಹೊಸೆದ ಹಾಗೆ ಹುರಿಗೊಳ್ಳುವ
ಗುರಿ ತಾಗುವ ಕನ್ನಡ;
ಕುರಿತೋದದ ಪರಿಣತಮತಿ -
ಅರಿತವರಿಗೆ ಹೂಗೊಂಡ
ಪಡುಗಡಲಿನ ತೆರೆಗಳಂತೆ
ಹೆಡೆ ಬಿಚ್ಚುತ ಮೊರೆಯುವ
ಸಹ್ಯಾದ್ರಿಯ ಶಿಖರದಂತೆ
ಬಾನೆತ್ತರ ಕರೆಯುವ
ಗುಡಿ - ಗೋಪುರ ಹೊಂಗಳಸಕೆ
ಚೆಂಬೆಳಕಿನ ಕನ್ನಡ;
ನಮ್ಮೆಲ್ಲರ ಮೈಮನಸಿನ
ಹೊಂಗನಸಿನ ಕನ್ನಡ
ತ್ರಿಪದಿಯಿಂದ ಸಾಸಿರಪದಿ
ಸ್ವಚ್ಛಂದದ ಉಲ್ಲಾಸ
ಭಾವಗೀತೆ, ಮಹಾಕಾವ್ಯ -
ವೀರ - ವಿನಯ ಸಮರಸ
ಹಳ್ಳಿ - ಊರು, ನಗರ - ಜಿಲ್ಲೆ
ಮೊಗದ ಹೊಗರು ಕನ್ನಡಿ;
ಎಲ್ಲ ದಿಸೆಗು ಚೆಲ್ಲುವರಿದ
ಚೈತನ್ಯದ ದಾಂಗುಡಿ
ಎಲ್ಲಾದರು ಇರು ಎಂತಾದರು ಇರು - ಕುವೆಂಪು
ಕನ್ನಡ ಗೋವಿನ ಓ ಮುದ್ದಿನ ಕರು,
ಕನ್ನಡತನವೊಂದಿದ್ದರೆ ನೀನಮ್ಮಗೆ ಕಲ್ಪತರು!
ನೀ ಮೆಟ್ಟುವ ನೆಲ – ಅದೆ ಕರ್ನಾಟಕ;
ನೀನೇರುವ ಮಲೆ – ಸಹ್ಯಾದ್ರಿ.
ನೀ ಮುಟ್ಟುವ ಮರ – ಶ್ರೀಗಂಧದ ಮರ;
ನೀ ಕುಡಿಯುವ ನೀರ್ – ಕಾವೇರಿ.
ಪಂಪನನೋದುವ ನಿನ್ನಾ ನಾಲಗೆ
ಕನ್ನಡವೇ ಸತ್ಯ.
ಕುಮಾರವ್ಯಾಸನನಾಲಿಪ ಕಿವಿಯದು
ಕನ್ನಡವೇ ನಿತ್ಯ.
ಹರಿಹರ ರಾಘವರಿಗೆ ಎರಗುವ ಮನ,
ಹಾಳಾಗಿಹ ಹಂಪೆಗೆ ಕೊರಗುವ ಮನ,
ಪೆಂಪಿನ ಬನವಾಸಿಗೆ ಕರಗುವ ಮನ;
ಬೆಳ್ಗೊಳ ಬೇಲೂರ್ಗಳ ನೆನೆಯುವ ಮನ,
ಜೋಗದ ಜಲಪಾತದಿ ಧುಮುಕುವ ಮನ
ಮಲೆನಾಡಿಗೆ ಹೊಂಪುಳಿವೋಗುವ ಮನ;
ಎಲ್ಲಿದ್ದರೆ ಏನ್? ಎಂತಿದ್ದರೆ ಏನ್?
ಎಂದೆಂದಿಗು ತಾನ್-
ಕನ್ನಡವೇ ಸತ್ಯ!
ಕನ್ನಡವೇ ನಿತ್ಯ!
ಕಾಜಾಣಕೆ ಗಿಳಿ ಕೋಗಿಲೆಯಿಂಪಿಗೆ,
ಮಲ್ಲಿಗೆ ಸಂಪಿಗೆ ಕೇದಗೆ ಸೊಂಪಿಗೆ,
ಮಾವಿನ ಹೊಂಗೆಯ ತಳಿರಿನ ತಂಪಿಗೆ,
ರಸರೋಮಾಂಚನಗೊಳುವಾತನ ಮನ
ಎಲ್ಲಿದ್ದರೆ ಏನ್? ಎಂತಿದ್ದರೆ ಏನ್?
ಎಂದೆಂದಿಗು ತಾನ್-
ಕನ್ನಡವೇ ಸತ್ಯ!
ಕನ್ನಡವೇ ನಿತ್ಯ!
ಅನ್ಯವನೆಲದೆ ಮಿಥ್ಯಾ!
ಸಾಹಿತ್ಯ: ಕುವೆಂಪು
ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು - ಹುಯಿಲಗೋಳ ನಾರಾಯಣರಾಯರು
ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು
ಬದುಕು ಬಲುಹಿನ ನಿಧಿಯು ಸದಭಿಮಾನದ ಗೂಡು || ಪ ||
ರಾಜನ್ಯರಿಪು ಪರಶುರಾಮನಮ್ಮನ ನಾಡು
ಆ ಜಲಧಿಯನೆ ಜಿಗಿದ ಹನುಮನುದಿಸಿದ ನಾಡು
ಓಜೆಯಿಂ ಮೆರೆದರಸುಗಳ ಸಾಹಸದ ಸೂಡು
ತೇಜವನು ನಮಗೀವ ವೀರವೃಂದದ ಬೀಡು || ೧ ||
ಲೆಕ್ಕಿಗ ಮಿತಾಕ್ಷರರು ಬೆಳೆದು ಮೆರೆದಿಹ ನಾಡು
ಜಕ್ಕಣನ ಶಿಲ್ಪಿ ಕಲೆಯಚ್ಚರಿಯ ಕರುಗೋಡು
ಚೊಕ್ಕಮತಗಳ ಸಾರಿದವರಿಗಿದು ನೆಲೆವೀಡು
ಬೊಕ್ಕಸದ ಕಣಜವೈ ವಿದ್ವತ್ತೆಗಳ ಕಾಡು || ೨ ||
ಪಾವನೆಯರಾ ಕೃಷ್ಣೆ ಭೀಮೆಯರ ತಾಯ್ನಾಡು
ಕಾವೇರಿ ಗೋದೆಯರು ಮೈದೊಳೆವ ನಲುನಾಡು
ಅವಗಂ ಸ್ಪೂರ್ತಿಸುವ ಕಬ್ಬಿಗರ ನಡೆಮಾಡು
ಕಾವ ಗದುಗಿನ ವೀರನಾರಾಯಣನ ಬೀಡು|| ೩ ||
ಒಂದೇ ಒಂದೇ ಒಂದೇ ಕರ್ನಾಟಕ ಒಂದೇ - ದ. ರಾ. ಬೇಂದ್ರೆ
ಒಂದೇ ಒಂದೇ ಒಂದೇ ಕರ್ನಾಟಕ ಒಂದೇ
ಹಿಂದೆ ಮುಂದೆ ಎಂದೆ ಕರ್ನಾಟಕ ಒಂದೇ
ಹಿಂದೆ ಮುಂದೆ ಎಂದೆ ಕರ್ನಾಟಕ ಒಂದೇ
ಜಗದೇಳಿಗೆಯಾಗುವುದಿದೆ ಕರ್ನಾಟಕದಿಂದೆ
ಇಲ್ಲಿಯ ಜನ ಮನ ಭಾಷೆಯು ಕನ್ನಡವದು ಒಂದೇ
ಒಂದೇ ಜಗವು ಮನವು ಕನ್ನಡಿಗರು ಎಂದೆ
ಕುಲವೊಂದೇ ಛಲವೊಂದೇ ನೀತಿಯ ನೆಲೆಯೊಂದೇ
ಹೀಗೆನ್ನದ ಹೆರವರು ಅವರಿದ್ದರು ಒಂದೆ ಇರದಿದ್ದರು ಒಂದೆ
ಕನ್ನಡವೆಂದು ಒಪ್ಪದು ಕರ್ನಾಟಕ ನಿಂದೆ
ಕನ್ನಡ ಮಾತೇ ಮಾತೆಯು ಕರ್ನಾಟಕ ಒಂದೇ
ಅದು ದೈವತ ಅದು ಜೀವಿತ ಒಪ್ಪಿಹೆವದು ಎಂದೆ
ನಮ್ಮದು ನಿಮ್ಮದು ಅವರದು ಈ ಆಸ್ತಿ ಪಾಸ್ತಿ
ನಾಡಿನ ತಾಯಿಗೆ ಸೇರಿದೆ ಬೇರೆಯ ಮನೆ ನಾಸ್ತಿ
ಕನ್ನಡ ಕಾಯಕದಲ್ಲಿಲ್ಲವು ಕಮ್ಮೀ ಜಾಸ್ತಿ
ಇದನೊಪ್ಪದ ಹೆರವರು ಅವರಿದ್ದರು ಒಂದೆ ಇರದಿದ್ದರು ಒಂದೇ
ಕರ್ನಾಟಕ ಹಿತ ಹಿಡಿತವು ಕನ್ನಡ ಕುಲದಿಂದೆ
ಕನ್ನಡವು ಭಾರತವು ಜಗವೆಲ್ಲವು ಒಂದೇ
ತುಂಬಿದೆ ಕನ್ನಡ ಕುಲವನ್ನು ಒಪ್ಪುವ ಕುಲದಿಂದೇ
ಇಂತರಿಯದ ಹೆರವರು ಅವರಿದ್ದರು ಒಂದೆ ಇರದಿದ್ದರು ಒಂದೇ
ಉಚ್ಛರಿಸಿರಿ ಮಾತೆಗೆ ಜಯ ಜಯ ಜಯವೆಂದೇ
ಸಾಹಿತ್ಯ: ದ. ರಾ. ಬೇಂದ್ರೆ
ಹೊತ್ತಿತೋ ಹೊತ್ತಿತು ಕನ್ನಡದ ದೀಪ - ಡಾ.ಸಿದ್ದಯ್ಯ ಪುರಾಣಿಕ
ಹೊತ್ತಿತೋ ಹೊತ್ತಿತು ಕನ್ನಡದ ದೀಪ
ಮುಗಿಯಿತೋ ಮುಗಿಯಿತು ಶತಮಾನಗಳ ಶಾಪ..
ಹೊತ್ತಿತೋ ಹೊತ್ತಿತು ಕನ್ನಡದ ದೀಪ
ಹೊತ್ತಿತೋ.. ಹೊತ್ತಿತು…ಕನ್ನಡದ ದೀಪ
ಕಣ್ಣು ಕುಕ್ಕಿಸುವಂತೆ ದೇದೀಪ್ಯಮಾನ
ಹರ್ಷ ಉಕ್ಕಿಸುವಂತೆ ಶೋಭಾಯಮಾನ..
ಕನ್ನಡದ ಮನೆಯಾಗೇ ಜ್ಯೋತಿರ್ನಿಧಾನ
ಕನ್ನಡದ ಪ್ರಾಣ.. ಕನ್ನಡದ ಮಾನ ..
ಹೊತ್ತಿತೋ ಹೊತ್ತಿತು ಕನ್ನಡದ ದೀಪ
ಉರಿವವರು ಬೇಕಿನ್ನು ಇದರೆಣ್ಣೆಯಾಗಿ
ಸುಡುವವರು ಬೇಕಿನ್ನು ನಿಡುಬತ್ತಿಯಾಗಿ..
ಧರಿಸುವವರು ಬೇಕಿನ್ನು ಸಿರಿಹಣತೆಯಾಗಿ
ನಮ್ಮೀ ಉಸಿರಾಗಿ ಧರ್ಮಕ್ಕೆ ಬಾಗಿ..
ಹೊತ್ತಿತೋ ಹೊತ್ತಿತು ಕನ್ನಡದ ದೀಪ
ಚಿರಕಾಲ ಬೆಳಗಲಿ ಕನ್ನಡದ ದೀಪ
ಜನಕೆಲ್ಲ ಬೆಳಕಾಗಿ ಪುಣ್ಯ ಪ್ರದೀಪ..
ಭಾರತಕೆ ಬಲವಾಗಿ ಭವ್ಯ ಪ್ರದೀಪ
ಕಳೆಯುತ್ತ ತಾಪ , ಬೆಳೆಸುತ್ತ ಸೈಪ..
ಹೊತ್ತಿತೋ ಹೊತ್ತಿತು ಕನ್ನಡದ ದೀಪ
ಹೊತ್ತಿತೋ ಹೊತ್ತಿತು ಕನ್ನಡದ ದೀಪ
ಮುಗಿಯಿತೋ ಮುಗಿಯಿತು ಶತಮಾನಗಳ ಶಾಪ
ಹೊತ್ತಿತೋ.. ಹೊತ್ತಿತು.. ಕನ್ನಡದ ದೀಪ.
ಸಾಹಿತ್ಯ: ಡಾ.ಸಿದ್ದಯ್ಯ ಪುರಾಣಿಕ
ಹಚ್ಚೇವು ಕನ್ನಡದ ದೀಪ - 'ಡಾ. ಡಿ.ಎಸ್. ಕರ್ಕಿ'
ಕೋಟಿ ಕಂಠ ಗಾಯನ ಕಾರ್ಯಕ್ರಮದ ಹಾಡುಗಳು(ಆಡಿಯೋ ಸಹಿತ)

67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ರಾಜ್ಯದಾದ್ಯಂತ 'ನನ್ನ ನಾಡು ನನ್ನ ಹಾಡು - ಕೋಟಿ ಕಂಠ ಗಾಯನ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಅಕ್ಟೋಬರ್ ೨೮ ರ ಬೆಳಿಗ್ಗೆ ೧೧ ಗಂಟೆಗೆ ರಾಜ್ಯ ಸೇರಿದಂತೆ ವಿಶ್ವದ ಇತರೆ ಭಾಗದಲ್ಲಿರುವ 1 ಕೋಟಿಗೂ ಅಧಿಕ ಕನ್ನಡಿಗರಿಂದ ಕನ್ನಡದ ಹಿರಿಮೆ ಸಾರುವ ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ ನಡೆಸಲು ತಯಾರಿ ಮಾಡಿಕೊಳ್ಳಲಾಗುತ್ತಿದ್ದು, ನಾಡಗೀತೆಯಾದ ಜಯ ಭಾರತ ಜನನಿಯ ತನುಜಾತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ ವಿದ್ಯಾಚೇತನ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು, ಹಚ್ಚೇವು ಕನ್ನಡದ ದೀಪ ಸೇರಿದಂತೆ ಆಯ್ದ ೫ ಹಾಡುಗಳನ್ನು ಹಾಡಬೇಕಿದೆ. ಇವುಗಳನ್ನು ಹೊರತುಪಡಿಸಿಯೂ ಆಸಕ್ತರು ಬೇರೆ ಕನ್ನಡ ಗೀತೆಗಳನ್ನು ಸಮಯದ ಮಿತಿ ಆಧರಿಸಿ ಪ್ರಸ್ತುಪಡಿಸಬಹುದಾಗಿದೆ.
೫. ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು..
++++++++++೦++++++++++
ಕನ್ನಡ ದೇಶ ಭಕ್ತಿ ಗೀತೆಗಳಿಗಾಗಿ ಇಲ್ಲಿ ಒತ್ತಿ...
ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು - 'ಹುಯಿಲಗೋಳು ನಾರಾಯಣರಾಯರು'
ರಾಜನ್ಯರಿಪು ಪರಶುರಾಮನಮ್ಮನ ನಾಡು
ಆ ಜಲಧಿಯನೆ ಜಿಗಿದ ಹನುಮನುದಿಸಿದ ನಾಡು
ಓಜೆಯಿಂ ಮೆರೆದರಸುಗಳ ಸಾಹಸದ ಸೂಡು
ತೇಜವನು ನಮಗೀವ ವೀರವೃಂದದ ಬೀಡು || ೧ ||
ಲೆಕ್ಕಿಗ ಮಿತಾಕ್ಷರರು ಬೆಳೆದು ಮೆರೆದಿಹ ನಾಡು
ಜಕ್ಕಣನ ಶಿಲ್ಪಿ ಕಲೆಯಚ್ಚರಿಯ ಕರುಗೋಡು
ಚೊಕ್ಕಮತಗಳ ಸಾರಿದವರಿಗಿದು ನೆಲೆವೀಡು
ಬೊಕ್ಕಸದ ಕಣಜವೈ ವಿದ್ವತ್ತೆಗಳ ಕಾಡು || ೨ ||
ಪಾವನೆಯರಾ ಕೃಷ್ಣೆ ಭೀಮೆಯರ ತಾಯ್ನಾಡು
ಕಾವೇರಿ ಗೋದೆಯರು ಮೈದೊಳೆವ ನಲುನಾಡು
ಅವಗಂ ಸ್ಪೂರ್ತಿಸುವ ಕಬ್ಬಿಗರ ನಡೆಮಾಡು
ಕಾವ ಗದುಗಿನ ವೀರನಾರಾಯಣನ ಬೀಡು|| ೩ ||
----------೦----------
ರಚನೆ : ಹುಯಿಲಗೋಳು ನಾರಾಯಣರಾಯರು
